ಮತ ಜಾಗೃತಿಗೆ ವೀಡಿಯೋ ಸ್ಪರ್ಧೆ

Team Udayavani, Mar 29, 2019, 11:49 AM IST

mata-jagruti

ಬೆಂಗಳೂರು: ಒಂದೆಡೆ ಮತದಾನಕ್ಕೆ ದಿನಗಣನೆ ಶುರುವಾದ ಬೆನ್ನಲ್ಲೇ ಮತ್ತೂಂದೆಡೆ ಈ ಬಗ್ಗೆ “ಯುವ ಮತದಾರ’ರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಲೇಜುಗಳಲ್ಲಿ ವಿನೂತನ ಪ್ರಯೋಗಗಳು ನಡೆಯುತ್ತಿವೆ.

ಜೈನ್‌ ಮಹಾವಿದ್ಯಾಲಯದಲ್ಲಿ ಮತದಾನ ಜಾಗೃತಿಗಾಗಿ ವೀಡಿಯೊ ಸ್ಪರ್ಧೆ ಏರ್ಪಡಿಸಿದ್ದರೆ, ಕೆಎಲ್‌ಇ ಮಹಾವಿದ್ಯಾಲಯವು ಶುಕ್ರವಾರದಿಂದ ಮೂರು ದಿನಗಳ ಕಾಲ ಅಣಕು ನ್ಯಾಯಾಲಯ ಪ್ರದರ್ಶನ ಹಮ್ಮಿಕೊಂಡಿದೆ.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಬಿ-ಪ್ಯಾಕ್‌, ಪದವಿ ಶಿಕ್ಷಣ ಹಂತದಲ್ಲೇ ಕಡ್ಡಾಯವಾಗಿ ವಿದ್ಯಾರ್ಥಿಗಳ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‌ ಭಾಸ್ಕರ್‌ ಅವರಿಗೆ ಮನವಿ ಸಲ್ಲಿಸಲು ಉದ್ದೇಶಿಸಿದೆ.

ವಿವಿ ಪುರದ ಜೈನ್‌ ಕಾಲೇಜಿನ ಎನ್‌ಎಸ್‌ಎಸ್‌ ತಂಡ ಮತದಾನ ಜಾಗೃತಿಗೆ ಸಂಬಂಧಿಸಿದಂತೆ ಅಂತರ ಕಾಲೇಜು ವೀಡಿಯೊ ಸ್ಪರ್ಧೆ ಆಯೋಜಿಸಿದೆ. ಇದರಲ್ಲಿ ಬೆಂಗಳೂರಿನ 25 ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಉತ್ತಮ ವಿಡಿಯೊಗಳನ್ನು ಏ.3 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಾಸಾರ ಮಾಡಲಾಗುವುದು. ಕಾರ್ಯಕ್ರಮದಲ್ಲಿ ವಿಷಯತಜ್ಞರು ಮತದಾನದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.

ಮತದಾನ ಜಾಗೃತಿ ಕುರಿತು ಎರಡು ನಿಮಿಷಗಳ ವೀಡಿಯೊ ಮಾಡಿ [email protected] ಇಲ್ಲಿಗೆ ಇ-ಮೇಲ್‌ ಮಾಡಲು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ. ವೀಡಿಯೊ ಮತದಾನ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುವಂತಿರಬೇಕು. ಯಾವುದೇ ರಾಜಕೀಯ ಪಕ್ಷದ ಪ್ರಚಾರದ ವಸ್ತುವಾಗಿರಬಾರದು, ಪ್ರಚೋದನಕಾರಿ ಆಗಿರಬಾರದು.

ಏ. 3ರ ವರೆಗೆ ವೀಡಿಯೊ ಕಳುಹಿಸುವುದಕ್ಕೆ ಅವಕಾಶವಿದೆ. ಉತ್ತಮ ವೀಡಿಯೊ ಕಳುಹಿಸಿದವರಿಗೆ ಏ. 5ರಂದು ಜೈನ್‌ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಟ್ರೋಫಿ ಮತ್ತು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಜೈನ್‌ ಕಾಲೇಜಿನ ಎನ್‌ಎಸ್‌ಎಸ್‌ ಕಾರ್ಯಕ್ರಮ ಅಧಿಕಾರಿ ಸಿ. ಪರಮೇಶ್‌ ಮಾಹಿತಿ ನೀಡಿದರು.

“ಯುವಕರಲ್ಲಿ ಮತದಾನ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಯುವಕರು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಬೇಕು. ಅದಕ್ಕೆ ಯುವಕರ ಸೃಜನಶೀಲತೆಯನ್ನು ಬಳಸಿಕೊಳ್ಳಲಾಗುತ್ತಿದೆ. ಯಾವುದೇ ರಾಜಕೀಯ ಪಕ್ಷಗಳ ಪರ ಅಥವಾ ವಿರೋಧ ಇರುವುದಿಲ್ಲ’ ಎನ್ನುತ್ತಾರೆ

ಪದವಿ ಹಂತದಲ್ಲೇ ನೋಂದಣಿ ಕಡ್ಡಾಯ – ಒತ್ತಾಯ: ಅದೇ ರೀತಿ, ಬಿ-ಪ್ಯಾಕ್‌ ಪದವಿ ಶಿಕ್ಷಣದ ಹಂತದಲ್ಲೇ ಎಲ್ಲ ಅರ್ಹ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಆಯಾ ಕಾಲೇಜುಗಳಿಗೆ ಸೂಚಿಸಬೇಕು.

ಇದರಿಂದ ಮತದಾರರ ಸಂಖ್ಯೆ ಹೆಚ್ಚುವುದರ ಜತೆಗೆ ಜಾಗೃತಿ ಮೂಡಲಿದೆ. ಈ ಸಂಬಂಧ ವಾರದಲ್ಲಿ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲು ಉದ್ದೇಶಿಸಿದ್ದು, ಸುಮಾರು 30 ಕಾಲೇಜುಗಳಿಂದ ವಿದ್ಯಾರ್ಥಿಗಳನ್ನು ಇದಕ್ಕೆ ಆಹ್ವಾನಿಸಲಾಗಿದೆ. ಅಂದಹಾಗೆ ಪ್ರಸ್ತುತ ವಿವಿಧ ಪಕ್ಷಗಳು ಆಯಾ ಪ್ರದೇಶದಲ್ಲಿ ಕಾರ್ಯಕರ್ತರ ಮೂಲಕ ನೋಂದಣಿ ಮಾಡಿಸುತ್ತಿವೆ.

ಅಣಕು ನ್ಯಾಯಾಲಯ ಸ್ಪರ್ಧೆ: ಈ ಮಧ್ಯೆ ಕೆಎಲ್‌ಇ ಕಾನೂನು ಮಹಾವಿದ್ಯಾಲಯವು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಣುಕು ನ್ಯಾಯಾಲಯ ಸ್ಪರ್ಧೆ ಏರ್ಪಡಿಸಿದೆ. ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯುವ ಸ್ಪರ್ಧೆಯಲ್ಲಿ “ಒಂದು ರಾಷ್ಟ್ರ ಒಂದು ಚುನಾವಣೆ’, ಚುನಾವಣಾ ಸಮಯದಲ್ಲಿ ಪಕ್ಷಾಂತರ ಸೇರಿದಂತೆ ಹಲವು ವಿಷಯಗಳ ಕುರಿತು ವಾದಗಳು ಮಂಡನೆ ಆಗಲಿವೆ.

ಸಂಸತ್ತು ಮತ್ತು ರಾಜ್ಯ ಶಾಸಕಾಂಗಗಳಿಗೆ ಏಕರೂಪದ ಹಾಗೂ ಒಂದೇ ಸಮಯದಲ್ಲಿ ಚುನಾವಣೆ ನಡೆಸಿ ದೇಶದ ಬೊಕ್ಕಸಕ್ಕೆ ಹೊರೆಯಾಗದಂತೆ ನೋಡಿಕೊಳ್ಳುವುದು ಹೇಗೆ? ಈ ನಿಟ್ಟಿನಲ್ಲಿ ಒಂದು ಬಾರಿ ರಾಜ್ಯ ಶಾಸಕಾಂಗಗಳ ಚುನಾಯಿತ ಅವಧಿಯನ್ನು ಮೊಟುಕುಗೊಳಿಸಿದರೆ ಅಥವಾ ವಿಸ್ತರಿಸಿದರೆ ಏಕಕಾಲದಲ್ಲಿ ಚುನಾವಣೆ ನಡೆಸಲು ಸಾಧ್ಯವೇ? ಇದರ ಸಾಧಕ ಬಾಧಕಗಳು ಏನು? ಎಂಬುದರ ಕುರಿತು ಸ್ಪರ್ಧಾಳುಗಳು ವಿಚಾರ ಮಂಡಿಸಲಿದ್ದಾರೆ.

ಕರ್ನಾಟಕದಿಂದ 12 ತಂಡಗಳು ಹಾಗೂ 18 ವಿವಿಧ ರಾಜ್ಯಗಳಿಂದ 50 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿವೆ. ವಿಜೇತರಿಗೆ ಪ್ರಥಮ ಬಹುಮಾನ 25 ಸಾವಿರ ನಗದು ಹಾಗೂ ದ್ವಿತೀಯ ಬಹುಮಾನ 15 ಸಾವಿರ ನಗದು ಮತ್ತು ಪ್ರಶಸ್ತಿ ಫ‌ಲಕ ನೀಡಲಾಗುವುದು ಎಂದು ಮಹಾವಿದ್ಯಾಲಯದ ಪ್ರಾಂಶುಪಾಲ ಜೆ.ಎಂ. ಮಲ್ಲಿಕಾರ್ಜುನಯ್ಯ ಮಾಹಿತಿ ನೀಡಿದ್ದರೆ.

* ಹಿತೇಶ್‌ ವೈ

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.