ಹೆಗಡೆಗೆ ಸಿಎಂ ಟ್ವೀಟ್ ಕುಟುಕು
Team Udayavani, Mar 29, 2019, 11:48 AM IST
ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಪದ ಬಳಕೆ ಕುರಿತು “ಕಟು ಟ್ವೀಟ್’ ಮೂಲಕ ಕುಟುಕುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದಾರೆ.
“ನಿಮ್ಮ ಭಾಷೆ ನಿಮ್ಮ ಸಂಸ್ಕೃತಿ ತೋರಿಸುತ್ತದೆ. ಆದರೆ, ದುರದೃಷ್ಟವಷಾತ್ ನೀವು ಕೇಂದ್ರದ ಸಚಿವರು ಹಾಗೂ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ. ತಾವು ವಿಷ ಉಗುಳುವ ಸಂದರ್ಭದಲ್ಲಿ ಮಾನಸಿಕ ಕಾಯಿಲೆಗೆ ಸಂಬಂಧಿಸಿದ ಶಬ್ದಗಳನ್ನು ಬಳಸಬೇಡಿ.
ಮಾನಸಿಕ ಕಾಯಿಲೆಯಿಂದ ಸಾವಿರಾರು ಜನರು ಹಾಗೂ ಅವರ ಕುಟುಂಬದವರು ಮೌನವಾಗಿ ನೋವು ಅನುಭವಿಸುತ್ತಿದ್ದಾರೆ. ಆದರೆ, ಕೆಲವು ಪದ ಬಳಕೆ ಮಾಡಿ ನಿಂದಿಸಿ ವಿಷ ಕಾರುವ ಮೂಲಕ ಅವರಿಗೆ ಅವಮಾನ ಮಾಡಬೇಡಿ.
ನೀವು ಒಂದು ರೀತಿಯಲ್ಲಿ ಅಂತಹ ಹೇಳಿಕೆಗಳನ್ನು ನೀಡುವ ಚಾಳಿಕೋರರಾಗಿದ್ದೀರಿ, ಹಾಗೂ ಹೇಳಿಕೆ ನಂತರ ಪಲಾಯನ ಮಾಡುವ ನಿಮ್ಮ ಬಗ್ಗೆ ಅನುಕಂಪವಿದೆ,’ ಎಂದು ಹೇಳಿದ್ದಾರೆ.
ಅನಂತ್ ಹೇಳಿದ್ದೇನು?: ಆದಾಯ ತೆರಿಗೆ ದಾಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದನ್ನು ಖಂಡಿಸಿದ್ದ ಅನಂತ್ಕುಮಾರ್ ಹೆಗಡೆ, “ಕುಮಾರಸ್ವಾಮಿಯವರು ಗುಮಾಸ್ತ ಹುದ್ದೆಗೂ ಅರ್ಹರಲ್ಲ.
ಅವರು ರಾಜಕೀಯ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಭ್ರಮೆಯಲ್ಲಿ ಬೊಬ್ಬೆ ಹಾಕುತ್ತಿದ್ದಾರೆ’ ಎಂಬ ಅರ್ಥ ಬರುವ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಕುಮಾರಸ್ವಾಮಿಯವರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.