ಫಿನಿಕ್ಸ್‌ ಮಾಲ್‌ನಲ್ಲಿ ವಿಷಪೂರಿತ ರಾಸಾಯನಿಕ ಸೋರಿಕೆ

Team Udayavani, Mar 29, 2019, 11:49 AM IST

pinix-mall

ಬೆಂಗಳೂರು: ಮಹದೇವಪುರದ ಫಿನಿಕ್ಸ್‌ ಮಾಲ್‌ನಲ್ಲಿ ಗುರುವಾರ ವಿಷಪೂರಿತ ರಸಾಯನಿಕ ಹಾಗೂ ಪರಮಾಣು ಸೋರಿಕೆಯಾಗಿತ್ತು! ಕೆಲವೇ ನಿಮಿಷಗಳಲ್ಲಿ ಜನರು ದಿಕ್ಕಾಪಾಲಾಗಿ ಓಡಿದರು. ಭದ್ರತಾ ಸಿಬ್ಬಂದಿಯೂ ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು.

ಮಾಹಿತಿ ತಿಳಿದ ಕೆಲಹೊತ್ತಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ದೌಡಾಯಿಸಿ, ರಸಾಯನಿಕ ಸೋರಿಕೆ ವಿಫ‌ಲಗೊಳಿಸಲು ಕಾರ್ಯಾಚರಣೆ ಶುರುಮಾಡಿತು. ರಸಾಯನಿಕ ಸೇವಿಸಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗಂಟೆಗೂ ಅಧಿಕ ಕಾಲ ನಡೆದ ಕಾರ್ಯಾಚರಣೆ ಬಳಿಕ ಎಲ್ಲರೂ ನಿಟ್ಟುಸಿರು ಬಿಟ್ಟರು.

ಅದು ಅಣಕು ಪ್ರದರ್ಶನ: ವಿಷಪೂರಿತ ರಸಾಯನಿಕ, ಪರಮಾಣು, ಜೈವಿಕ ಇಂಧನಗಳು ಸೋರಿಕೆ ಆದರೆ ಅಥವಾ ದಾಳಿ ನಡೆದರೆ ಯಾವ ರೀತಿ ಸಾರ್ವಜನಿಕರು ಸ್ಪಂದಿಸಬೇಕು, ರಕ್ಷಣಾ ಕಾರ್ಯ ಹೇಗೆ ನಡೆಯಲಿದೆ ಎಂದು ಎನ್‌ಡಿಆರ್‌ಎಫ್ ತಂಡ ನಡೆಸಿಕೊಟ್ಟ ಅಣಕು ಪ್ರದರ್ಶನದಲ್ಲಿ ಕಂಡು ಬಂದ ಚಿತ್ರಣವಿದು.

ಭಾರೀ ಜನರು ಸೇರುವ ಮಾಲ್‌ಗ‌ಳಲ್ಲಿ ಈ ರೀತಿಯ ದಾಳಿಗಳು ನಡೆದರೆ ಹೇಗೆ ಪರಿಸ್ಥಿತಿ ನಿಭಾಯಿಸಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನಡೆದ ಅಣಕು ಕಾರ್ಯಾಚರಣೆಯಲ್ಲಿ ರಾಜ್ಯ ಅಗ್ನಿಶಾಮಕ ದಳ ಹಾಗೂ ರಾಜ್ಯ ಸಿವಿಲ್‌ ಡಿಫೆನ್ಸ್‌ ತಂಡದವರು ಪಾಲ್ಗೊಂಡಿದ್ದರು.

ಅಣಕು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಎನ್‌ಡಿಆರ್‌ಎಫ್ನ ಅಸಿಸ್ಟೆಂಟ್‌ ಕಮಾಂಡೆಂಟ್‌ ಕೆ.ಎಸ್‌ ಸುಭೀಶ್‌ ಮಾತನಾಡಿ, ಮಾಲ್‌ಗ‌ಳಲ್ಲಿ ಸಹಸ್ರಾರು ಸಂಖ್ಯೆಯ ಜನರು ಸೇರುತ್ತಾರೆ. ಹೀಗಾಗಿ, ಮಾಲ್‌ನ ಸಿಬ್ಬಂದಿ ಹಾಗೂ ಸಾರ್ವಜನಿಕರು ರಾಸಾಯನಿಕ ದಾಳಿ ನಡೆದರೆ ಯಾವ ರೀತಿ ಸ್ಪಂದಿಸಬೇಕು.

ಹೀಗಾಗಿ ಮಾಲ್‌ಗ‌ಳಲ್ಲಿ ಅಣಕು ಪ್ರದರ್ಶನ ನೀಡಲಾಗುತ್ತಿದೆ. ಸಾರ್ವಜನಿಕರಿಗೆ ಕೂಡ ಇದರ ಬಗ್ಗೆ ಜಾಗೃತಿ ಮೂಡಿಸು ಉದ್ದೇಶ ಇದಾಗಿದೆ ಎಂದು ಕರಪತ್ರಗಳನ್ನು ಹಂಚಲಾಗಿದೆ ಎಂದು ತಿಳಿಸಿದರು.

ಅಣಕು ಕಾರ್ಯಾಚರಣೆಯಲ್ಲಿ ಪಾಲ್ಗೊಂಡವರು
-ಎನ್‌ಡಿಆರ್‌ಎಫ್ – 35 ಸಿಬ್ಬಂದಿ
-ಪೊಲೀಸರು – 25
-ಅಗ್ನಿಶಾಮಕ ದಳ -25
-ಸಿವಿಲ್‌ ಡಿಫೆನ್ಸ್‌ -10
-ವೈದ್ಯಕೀಯ ಸಿಬ್ಬಂದಿ -10
-ಮಾಲ್‌ ಭದ್ರತಾ ಸಿಬ್ಬಂದಿ -75
-ಮಾಲ್‌ನ ಆಡಳಿತ ಸಿಬ್ಬಂದಿ -10
-ಮಾಲ್‌ನ ಶಾಪ್‌ಗ್ಳ ಸಿಬ್ಬಂದಿ -140
-ಸಾರ್ವಜನಿಕರು -500

ಟಾಪ್ ನ್ಯೂಸ್

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.