ಖಂಡ್ರೆಗೆ ಮತ ಕೇಳುವ ನೈತಿಕ ಹಕ್ಕಿಲ್ಲ


Team Udayavani, Mar 29, 2019, 3:46 PM IST

bid-1

ಹುಮನಾಬಾದ: ಬೀದರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈಶ್ವರ ಖಂಡ್ರೆಗೆ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದು ಸಂಸದ ಹಾಗೂ ಬೀದರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹೇಳಿದರು. ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಿಜೆಪಿ ಶಕ್ತಿ ಕೇಂದ್ರ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸದಾ ಬಸವಣ್ಣನ ವಚನ, ಧರ್ಮ ಮತ್ತು ಸಾಮಾಜಿಕ ಸಮಾನತೆ ಬಗ್ಗೆ ಮಾತನಾಡುವ ಖಂಡ್ರೆ ತಮ್ಮ ನಡೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ವಚನಗಳ ಕುರಿತು ಮಾತನಾಡುವ ಅವರು ಸಂಪೂರ್ಣ ವಚನ ಭ್ರಷ್ಟರಾಗಿದ್ದಾರೆ. ಒಮ್ಮೆಯೂ ನುಡಿದಂತೆ ನಡೆದಿಲ್ಲ. ಧರ್ಮ ಕುರಿತು ಮಾತನಾಡುವ ಅವರು ಭಾಲ್ಕಿಯಲ್ಲಿ ಚನ್ನಬಸವ ಪಟ್ಟದ್ದೇವರು ಹುಟ್ಟು ಹಾಕಿದ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯನ್ನು ಖಂಡ್ರೆ ಪರಿವಾರದ ಆಸ್ತಿಯನ್ನಾಗಿಸಿಕೊಂಡಿದ್ದಾರೆ ಎಂದು ಆಪಾದಿಸಿದರು.

ಸಾಮಾಜಿಕ ಸಮಾನತೆ ಕುರಿತಂತೆ ಮಾತನಾಡುವ ಖಂಡ್ರೆ, ಸರ್ಕಾರದಿಂದ ವಿವಿಧ ವಸತಿ ಯೋಜನೆಯಡಿ ಕ್ಷೇತ್ರಾದ್ಯಂತ 30 ಸಾವಿರ ಮನೆ ಹಂಚುವುದಾಗಿ ಪಟ್ಟಿ ಬಿಡುಗೊಳಿಸಿದ್ದಾರೆ. ಆದರೆ ಹಂಚಿಕೆ ಮಾಡಿದ್ದು ಕೇವಲ 5,600 ಮನೆ ಮಾತ್ರ. ಇವುಗಳನ್ನೆಲ್ಲ ಹೇಳುತ್ತ ಹೋದರೆ ಸುಳ್ಳಿನ ಉದ್ದನೆ ಪಟ್ಟಿಯೇ ಬಿಚ್ಚಿಕೊಳ್ಳುತ್ತದೆ ಎಂದರು.

ಸರ್ಕಾರಕ್ಕೆ ವಂಚನೆ: ಬೀದರನ ಉದಗೀರ ರಸ್ತೆಯಲ್ಲಿರುವ ಅಕ್ಕಮಹಾದೇವಿ ಶಿಕ್ಷಣ ಸಂಸ್ಥೆ ಹೆಸರಿನಲ್ಲಿ ಪಡೆದ 4 ಎಕರೆ ಭೂಮಿ ಮುಂಭಾಗದಲ್ಲಿ ನಿಯಮ ಉಲ್ಲಂಘಿಸಿ, ವಾಣಿಜ್ಯ ಮಳಿಗೆ ನಿರ್ಮಿಸಿ, ಪ್ರತಿ ವರ್ಷ ಕೋಟ್ಯಂತರ ರೂ. ಬಾಡಿಗೆ ಪಡೆಯುವ ಮೂಲಕ ಸರ್ಕಾರವನ್ನು ವಂಚಿಸುತ್ತಿದ್ದಾರೆ ಎಂದರು.

ಉಜ್ವಲ ಯೋಜನೆಯಡಿ ಅಸಂಖ್ಯಾತ ಬಡವರಿಗೆ ಉಚಿತ ಗ್ಯಾಸ್‌ ವಿತರಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ಲಕ್ಷಾಂತರ ಜನರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಫಸಲ್‌ ಬೀಮಾ ಯೋಜನೆಯಡಿ ದೇಶದಲ್ಲೇ ಅತ್ಯಧಿಕ ಪರಿಹಾರ ಪಡೆದ ಜಿಲ್ಲೆ ಎನ್ನುವ ಖ್ಯಾತಿ ಇದೆ ಎಂದು ಹೇಳಿದರು. ವಿವಿಧ ಹೆದ್ದಾರಿ, ರೈಲ್ವೆ ಯೋಜನೆ ಅಭಿವೃದ್ಧಿಯತ್ತ ತೆಗೆದುಕೊಂಡು ಹೋಗಲಾಗಿದೆ. ಶೀಘ್ರ ಉಡಾನ್‌ ಯೋಜನೆಯಡಿ ವಿಮಾನ ಹಾರಾಟ ಆರಂಭಗೊಳ್ಳುವುದು ಎಂದರು.

ವಿಪ ಸದಸ್ಯ ರಘುನಾಥ ಮಲ್ಕಾಪುರೆ, ಅಮರನಾಥ ಪಾಟೀಲ, ಡಿ.ಕೆ. ಸಿದ್ರಾಮ, ಬಸವರಾಜ ಆರ್ಯ, ಶಿವಾನಂದ ಮಂಠಾಳ್ಕರ, ಸೋಮನಾಥ ಪಾಟೀಲ, ಶಿವರಾಜ ಗಂದಗೆ, ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ವಿಶ್ವನಾಥ ಪಾಟೀಲ, ಗಜೇಂದ್ರ ಕನಕಟಕರ್‌, ಎಂ.ಡಿ. ಇಲಿಯಾಸ್‌, ಓಂಕಾರ ತುಂಬಾ, ಬ್ಯಾಂಕ್‌ರೆಡ್ಡಿ, ವಿನಾಯಕರಾವ್‌ ಇದ್ದರು. ಪ್ರಭಾಕರರಾವ್‌ ನಾಗರಾಳೆ ನಿರೂಪಿಸಿದರು, ಪ್ರಕಾಶ ತಾಳಮಡಗಿ ವಂದಿಸಿದರು.

ಅಲ್ಪಸಂಖ್ಯಾತರ ಮತ ಬಿಜೆಪಿಗೆ ಅಲ್ಪಸಂಖ್ಯಾತರ ಮತ ಬಿಜೆಪಿಗೆ ಬರಲು ಸಾಧ್ಯವೇ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದ ಖೂಬಾ ಬೀದರ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಲು ಅಲ್ಪಸಂಖ್ಯಾತ ವ್ಯಕ್ತಿಯೊಬ್ಬರು ಟಿಕೆಟ್‌ ಕೋರಿದಾಗ ಹೈಕಮಾಂಡ್‌ ತಿರಸ್ಕರಿಸಿದ್ದಕ್ಕೆ ಅಲ್ಪಸಂಖ್ಯಾತರು ಮುನಿಸಿಕೊಂಡಿದ್ದಾರೆ. ಇದೇ ಕಾರಣಕ್ಕಾಗಿ ಮುಸ್ಲಿಂ ಬಾಂಧವರು ಕಳೆದ ಮೂರು ದಿನಗಳಿಂದ ಸ್ವಯಂ ಪ್ರೇರಣೆಯಿಂದ ಕರೆ ಮಾಡಿ ಈ ಬಾರಿ ನಮ್ಮ ಮತ ಬಿಜೆಪಿಗೆ; ಈ ಬಗ್ಗೆ ಆತಂಕ ಬೇಡ ಎಂದು ಅದೇ ಸಮುದಾಯದವರು ನನಗೆ ತಿಳಿಸಿದ್ದಾರೆ ಎಂದರು.

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗುವುದು ಖಚಿತ. ಇದರ ಬೆನ್ನಲ್ಲೇ ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗಿ ರಾಜ್ಯದಲ್ಲಿ ಮತ್ತೆ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.
ಸುಭಾಷ ಕಲ್ಲೂರ, ಮಾಜಿ ಶಾಸಕ

ಕಾಂಗ್ರೆಸ್‌ ಅಭ್ಯರ್ಥಿ ಬೆಂಬಲಿಸಿ
ಔರಾದ: ತಾಲೂಕಿಗೆ ಹಾಗೂ ಖಂಡ್ರೆ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ. ತಾಲೂಕಿನ ಬಗ್ಗೆ ನಮಗೆ ಅಪಾರ ಗೌರವವಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡುವಂತೆ ಪತ್ನಿ ಗೀತಾ ಖಂಡ್ರೆ ಮನವಿ ಮಾಡಿದರು. ಗುರುವಾರ ಔರಾದ ತಾಲೂಕಿನ ವಿವಿಧ ಗ್ರಾಮದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು.

ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಿದ್ದ ಅವಧಿಯಲ್ಲಿ ಬಡ ಹಾಗೂ ಹಿಂದುಳಿದ ವರ್ಗದ ಕಲ್ಯಾಣಕ್ಕಾಗಿ ಹಲವು ಯೋಜನೆ ಜಾರಿಗೊಳಿಸಲಾಗಿತ್ತು. ಅದರಿಂದ ಇಂದು
ಪ್ರತಿಯೊಂದು ಗ್ರಾಮದಲ್ಲಿ ನೂರಾರು ಕುಟಂಬಗಳು ನೆಮ್ಮದಿ ಜೀವನ ಸಾಗಿಸುತ್ತಿವೆ ಎಂದು ಹೇಳಿದ ಅವರು, ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಅಭ್ಯರ್ಥಿ ಬೆಂಬಲಿಸುವಂತೆ ಮನವಿ ಮಾಡಿದರು.

ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ರಾಜಕುಮಾರ, ಮುಖಂಡ ವಿಜಯಕುಮಾರ ಕೌಡ್ಯಾಳ, ಗೌಸಪಾಶಾ, ಅನಿತಾ ಪಾಟೀಲ್‌, ಜಗನ್ನಾಥ, ಸುರೇಶ ಶಟಕಾರ, ಓಂಪ್ರಕಾಶ, ಶಿವು ಪಾಟೀಲ್‌, ಫಿರೋಜ್‌, ವಿದ್ಯಾಸಾಗರ, ಸುಭಾಷ, ಅನಿಲ ಶೆಂಬೆಳ್ಳಿ, ಅಶೋಕ ನಾಗಂಪಲ್ಲಿ ಇತರರು ಇದ್ದರು

ಚುನಾವಣಾ ಉಸ್ತುವಾರಿ ನೇಮಕ
ಬೀದರ: ಅವಿಶ್ವಾಸದ ಮೂಲಕ ತೆರವಾದ ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಏ. 1ರಂದು ನಡೆಯಲಿರುವ ಚುನಾವಣೆಗೆ ಜಿಲ್ಲಾ ಕಾಂಗ್ರೆಸ್‌ ಪಕ್ಷದಿಂದ ಚುನಾವಣಾ
ಉಸ್ತುವಾರಿಗಳ ನೇಮಕ ಮಾಡಿದೆ. ಸಚಿವರ ರಾಜಶೇಖರ ಪಾಟೀಲ, ಸಚಿವ ರಹೀಂ ಖಾನ್‌, ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್‌, ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್‌ ಅವರನ್ನು ಜಿಪಂ ಚುನಾವಣಾ ಉಸ್ತುವಾರಿಗಳಾಗಿ ಕೆಲಸ ನಿರ್ವಹಿಸಿ, ಜಿಪಂ ಸದಸ್ಯರೊಂದಿಗೆ ಸಭೆ ಹಾಗೂ ಚರ್ಚೆ ನಡೆಸಿ, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯಶಾಲಿಯಾಗುವಂತೆ ನೋಡಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಶತ ಮತದಾನಕ್ಕೆ ಚುನಾವಣೆಸಾಕ್ಷರತಾ ಸಂಘ: ಅರಳಿ
ಬೀದರ: ಜಿಲ್ಲೆಯಲ್ಲಿ ಪ್ರತಿಶತ ಮತ ಚಲಾವಣೆಯಾಗಬೇಕೆಂಬ ದೃಢ ಸಂಕಲ್ಪದಿಂದ ಜಿಲ್ಲಾಡಳಿತ ಜಿಲ್ಲೆಯ ಪ್ರತಿ ಶಾಲಾ-ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತಾ ಸಂಘ ಸ್ಥಾಪಿಸಿದೆ ಎಂದು ಮತದಾನ ಜಾಗೃತಿ ಅಭಿಯಾನದ ನೋಡಲ್‌ ಅಧಿಕಾರಿ ಡಾ| ಗೌತಮ ಅರಳಿ ಹೇಳಿದರು.

ಹಾಲಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ನೆಹರು ಯುವ ಕೇಂದ್ರ ಹಾಗೂ ಅಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಹಯೋಗದಲ್ಲಿ ಜರುಗಿದ ಜಿಲ್ಲಾ ಮಟ್ಟದ ಯುವ ಸಮಾವೇಶದಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ 70 ಸಾವಿರ ಯುವ ಮತದಾರರು ಹೆಸರು ನೊಂದಾಯಿಸಬೇಕಿದ್ದು, ಅದರಲ್ಲಿ ಕೇವಲ 20 ಸಾವಿರ ಮತದಾರರು ಮಾತ್ರ ಹೆಸರು ನೊಂದಾಯಿಸಿದ್ದು, ಇನ್ನುಳಿದ 50 ಸಾವಿರ ಹೊಸ ಮತದಾರರು ನೋಂದಣಿ ಮಾಡಿಕೊಳ್ಳುವ ಉದ್ದೇಶದಿಂದ ಈ ಸಂಘಗಳನ್ನು ಹುಟ್ಟು ಹಾಕಲಾಗಿದೆ. ತಮ್ಮ ಕುಟುಂಬ ಹಾಗೂ ನೆರೆ ಹೊರೆಯವರನ್ನು ಮತದಾನದಲ್ಲಿ ಭಾಗವಹಿಸಲು ಜಾಗೃತಿ ಮೂಡಿಸುವುದು ಈ ಸಂಘದ ಜವಾಬ್ದಾರಿಯಾಗಿದೆ ಎಂದರು.

ಭಾರತವು ಜಗತ್ತಿನ ಬಲಿಷ್ಠ ಪ್ರಜಾಪ್ರಭುತ್ವ ದೇಶವೆನಿಸಿದರೂ ಇತ್ತೀಚಿನ ದಿನಗಳಲ್ಲಿ ಕೇವಲ 60 ಪ್ರತಿಶತ ಮತದಾನವಾಗುತ್ತಿರುವುದು ವಿಪರ್ಯಾಸ ಸಂಗತಿ. ಶ್ರೀಮಂತ ಅಕ್ಷರ ಬಲ್ಲ ಮಹಿಳೆಯರು ಹಾಗೂ ಯುವ ಸಮುದಾಯ ಮತದಾನದಲ್ಲಿ ನಿರಾಸಕ್ತಿ ತೋರಿಸುತ್ತಿರುವುದರಿಂದಲೇ ಇಂತಹ ದುಸ್ಥಿತಿ ಬಂದೊದಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮತದಾನ ಪಾರದರ್ಶಕತೆಗೆ ಚುನಾವಣಾ ಆಯೋಗ ಅನೇಕ ಯೋಜನೆ ಜಾರಿಗೆ ತಂದಿದೆ. ತಾವು ಹಾಕಿದ ಮತ ಖಾತ್ರಿ ಪಡಿಸಿಕೊಳ್ಳಲು ಮತದಾನ ಖಾತ್ರಿ ಯಂತ್ರ (ವಿ.ವಿ ಪ್ಯಾಡ್‌) ಅಳವಡಿಸಲಾಗುತ್ತಿದೆ. ಮತದಾನ ಮಷೀನ್‌ಗಳ ಸುರಕ್ಷತೆಗೆ ಯಂತ್ರ ಹೊತ್ತು ತರುವ ವಾಹನಗಳಿಗೆ ಜಿಪಿಎಸ್‌ ಅಳವಡಿಸಲಾಗುತ್ತಿದ್ದು, ಅವುಗಳ ಹೆಚ್ಚಿನ ಸುರಕ್ಷತೆಗಾಗಿ ಅಲ್ಲಿ ಸಿ.ಸಿ ಕ್ಯಾಮೆರಾ ಹಾಕಲಾಗುತ್ತಿದೆ ಎಂದರು.

ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಪ್ರೊ| ಸಿದ್ದಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವ ಜನರ ಮೇಲೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಪರಿಣಾಮ ಬೀರುವಂತಾಗಲು ವಿವಿಧ ಸ್ಪರ್ಧೆ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ರಾಷ್ಟ್ರ- ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ನಾತಕ ಪ್ರತಿಭೆಗಳು ಮಿಂಚುವಂತಾಗಲು ಅನೇಕ ಪ್ರೋತ್ಸಾಹದಾಯಕ ಯೋಜನೆ ಅನುಷ್ಠಾನಗೊಳಿಸಿದೆ.

ವಿವಿ ತನ್ನ ಸ್ನಾತಕೋತ್ತರ ಕೇಂದ್ರಗಳ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಮೂಲಭೂತ ಸೌಕರ್ಯ ಒದಗಿಸಿ ಶಿಕ್ಷಣ ಗುಣಮಟ್ಟ ಸುಧಾರಿಸಲು ಹಲವು ಮಾರ್ಗೋಪಾಯ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಡಾ| ರವಿಂದ್ರನಾಥ ಗಬಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮತ ಬಹು ಮುಖ್ಯವಾಗಿದ್ದು, ದೇಶದ ಭವಿಷ್ಯ ನಿರ್ಧರಿಸುತ್ತದೆ. ದೇಶ ಆಂತರಿಕ ಹಾಗೂ ಬಾಹ್ಯ ಮಟ್ಟದಲ್ಲೂ ಸುರಕ್ಷತೆ ಹಾಗೂ ಸ್ವತ್ಛತೆಯಿಂದ ಕೂಡಿರಲು ಸುಭದ್ರ ಸರ್ಕಾರದ ಅಗತ್ಯವಿದ್ದು, ಯಾವುದೇ ಆಸೆ-ಆಮಿಷಕ್ಕೆ ಬಲಿಯಾಗದೇ ಯೋಗ್ಯ ವ್ಯಕ್ತಿಗೆ ಮತ ಚಲಾಯಿಸಬೇಕೆಂದು ಸಲಹೆ ನೀಡಿದರು.

ಜಿಪಂ ಯೋಜನಾ ಸಹಾಯಕ ನಿರ್ದೇಶಕ ವಿರೇಂದ್ರಸಿಂಗ್‌ ವೇದಿಕೆಯಲ್ಲಿದ್ದರು. ಸಮನ್ವಯಾಧಿಕಾರಿ ಪಿ.ಶ್ರೀನಿವಾಸ್‌, ಪ್ರಾಧ್ಯಾಪಕ ಡಾ| ರಾಮಚಂದ್ರ ಗಣಾಪುರ, ಪ್ರೊ| ಶಾಂತಕುಮಾರ ಚಿದ್ರಿ ಇತರರು ಇದ್ದರು.

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.