ಮೊದಲು ನೀವು ಗೆದ್ದು ಬನ್ನಿ , ಗೌಡ್ರೇ
Team Udayavani, Mar 30, 2019, 6:00 AM IST
ಬೆಂಗಳೂರು: ದಕ್ಷಿಣದಲ್ಲಿ ಬಿಜೆಪಿ ತಲೆ ಎತ್ತಲು ಬಿಡಲ್ಲ ಅಂತ ಹೇಳಿಕೆ ಕೊಡೋದಲ್ಲ. ಮೊದಲು ತುಮಕೂರಿನಲ್ಲಿ ಗೆದ್ದು ಬನ್ನಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ದೇವೇಗೌಡರು ಕುಟುಂಬ ಮಕ್ಕಳು,
ಮೊಮ್ಮಕ್ಕಳಿಗೆ ಆದ್ಯತೆ ಕೊಟ್ಟಿದ್ದಾರೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ನಡುವೆ ಒಡಕಿಗೆ ಕಾರಣ ಆಗಿದ್ದಾರೆ. ತುಮಕೂರಿನಲ್ಲಿ ಕೈಕಾಲು ಕಟ್ಟಿ ಅಲ್ಲಿನ ಅಭ್ಯರ್ಥಿ ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮಾಡಿದ್ದಾರೆ. ಮೊದಲು ತುಮಕೂರಿನಿಂದ ಗೆದ್ದು ಬನ್ನಿ. ಆ ಮೇಲೆ ಬಿಜೆಪಿ ಬಗ್ಗೆ ಮಾತಾಡೋಣ ಎಂದು ಸವಾಲು ಹಾಕಿದರು. ಎಂಥ ಅತಿರಥ ಮಹಾರಥರೇ ಬಿಜೆಪಿಯನ್ನು ದಕ್ಷಿಣ ಭಾರತದಲ್ಲಿ ಕಿತ್ತು ಹಾಕಲು ಪ್ರಯತ್ನ ಪಟ್ಟರು. ಅವರಿಂದಲೇ ತಡೆಯಲು ಸಾಧ್ಯವಿಲ್ಲ. ಇನ್ನು ನಿಮ್ಮಿಂದ ಅದು ಸಾಧ್ಯವೇ? ಬಿಜೆಪಿ ಬಗ್ಗೆ ಹಗುರವಾಗಿ ಮಾತಾಡಬೇಡಿ. ಮಾಜಿ ಪ್ರಧಾನಿ ಎಂಬುದನ್ನು ಮರೆತು ಕೆಳಮಟ್ಟಕ್ಕೆ ಇಳಿಯುವುದನ್ನು ಬಿಡಿ ಎಂದು ಸಲಹೆ ನೀಡಿದರು.
ಕತ್ತಿ, ತೇಜಸ್ವಿನಿ ಒಳ್ಳೆಯ ಸ್ಥಾನ ಸಿಗಲಿದೆ: ಚಿಕ್ಕೋಡಿ ಟಿಕೆಟ್ ವಂಚಿತ ರಮೇಶ್ ಕತ್ತಿ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ವಂಚಿತೆ ತೇಜಸ್ವಿನಿ ಅನಂತಕುಮಾರ್ ಅವರಿಗೆ ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ನೀಡಲಾಗುತ್ತದೆ. ರಾಜ್ಯದ 28 ಲೊಕಸಭಾ ಕ್ಷೇತ್ರಗಳಲ್ಲಿ 26 ಕ್ಷೇತ್ರಗಳಿಗೆ ನಮ್ಮ ಶಿಫಾರಸಿನಂತೆ ಹೈಕಮಾಂಡ್ ಟಿಕೆಟ್ ಹಂಚಿಕೆ ಮಾಡಿದೆ.ಬೆಳಗಾವಿ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಾತ್ರ ವ್ಯತ್ಯಾಸವಾಗಿದೆ. ಇದರಲ್ಲಿ ಆರ್‌ಎಸ್‌ಎಸ್ ಪಾತ್ರ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.