4.42 ಲಕ್ಷ ಕೋಟಿ ರೂ. ಕ್ರೋಡೀಕರಣ: ಕೇಂದ್ರ
Team Udayavani, Mar 30, 2019, 6:00 AM IST
ಹೊಸದಿಲ್ಲಿ: 2019-20ರ ಹಣಕಾಸು ವರ್ಷದ ಮೊದಲ 6 ತಿಂಗಳುಗಳಲ್ಲಿ ಮಾರುಕಟ್ಟೆಯಿಂದ ಅಂದಾಜು 4.42 ಲಕ್ಷ ಕೋ.ರೂ.ಗಳನ್ನು ಕ್ರೋಡೀಕರಿಸುವುದಾಗಿ ಕೇಂದ್ರ ಹಣಕಾಸು ಸಚಿವಾಲಯ ಶುಕ್ರವಾರ ಪ್ರಕಟಿಸಿದೆ.
ಈ ಕುರಿತಂತೆ ವಿವರಣೆ ನೀಡಿದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗಾರ್ಗ್, 2019-20ರ ಹಣಕಾಸು ವರ್ಷದ ಎಪ್ರಿಲ್- ಸೆಪ್ಟಂಬರ್ ಅವಧಿಯಲ್ಲಿ ದೇಶಾದ್ಯಂತ ವಿತರಣೆಯಾಗಿರುವ ದೀರ್ಘಾವಧಿ ಬಾಂಡ್‌ಗಳ ಆಧಾರದ ಮೇಲೆ ಮಾರುಕಟ್ಟೆಯಿಂದ 4.42 ಲಕ್ಷ ಕೋ. ರೂ.ಗಳಷ್ಟು ಹಣವನ್ನು ಸಾಲವಾಗಿ ಪಡೆದು ಕ್ರೋಡೀಕರಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ, 2018-19ರ ತೃತೀಯ ತ್ತೈಮಾಸಿಕದಲ್ಲಿ ಒಟ್ಟು ರಾಷ್ಟ್ರೀಯ ಉತ್ಪನ್ನಕ್ಕೆ (ಜಿಡಿಪಿ) ಹೋಲಿಸಿದಲ್ಲಿ ದೇಶದ ಚಾಲ್ತಿ ಖಾತೆ ಕೊರತೆಯು ಶೇ. 2.5ರಷ್ಟಿದೆ ಎಂದು ಆರ್‌ಬಿಐ ಹೇಳಿದೆ. ರಫ್ತು ಮತ್ತು ಆಮದು ನಡುವಿನ ಅಂತರವನ್ನು ಚಾಲ್ತಿ ಖಾತೆ ಕೊರತೆ ಎಂದು ಕರೆಯಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.