ಮನೆ ಖಾಲಿ ಮಾಡಲು ಯಶ್ ತಾಯಿಗೆ 2 ತಿಂಗಳು ಕಾಲಾವಕಾಶ
Team Udayavani, Mar 30, 2019, 8:48 AM IST
ಬೆಂಗಳೂರು: ನಗರದ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆ ಖಾಲಿ ಮಾಡಲು ನಟ
ಯಶ್ ಅವರ ತಾಯಿ ಪುಷ್ಪಾ ಅವರಿಗೆ ಹೈಕೋರ್ಟ್ ಎರಡು ತಿಂಗಳು ಕಾಲಾವಕಾಶ ನೀಡಿದೆ.
ಮನೆ ಖಾಲಿ ಮಾಡುವ ಕಾಲಾವಕಾಶವನ್ನು 6 ತಿಂಗಳಿಗೆ ವಿಸ್ತರಿಸುವಂತೆ ಕೋರಿ ಪುಷ್ಪಾ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ನ್ಯಾ.ಬಿ.ವಿ.ನಾಗರತ್ನ ಹಾಗೂ ನ್ಯಾ.ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ನಡೆಸಿತು. ಮಾ.31ರೊಳಗೆ ಮನೆ ಖಾಲಿ ಮಾಡಬೇಕು ಎಂದು ನ್ಯಾಯಪೀಠ ಆದೇಶ ನೀಡಿತ್ತು. ಆದರೆ, 6 ತಿಂಗಳು ಕಾಲಾವಕಾಶ ಕೋರಿ ಪುಷ್ಪಾ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಹೈಕೋರ್ಟ್ ಆದೇಶದಂತೆ ಇದೇ ತಿಂಗಳ 31ರಂದು ಮನೆ ಖಾಲಿ ಮಾಡಬೇಕಿದೆ. ಆದರೆ, ಪುಷ್ಪಾ
ಅವರು ಹಾಸನದಲ್ಲಿ ಮನೆ ನಿರ್ಮಿಸುತ್ತಿದ್ದು, ಕಾಮಗಾರಿ ಪೂರ್ಣಗೊಳ್ಳಲು 6 ತಿಂಗಳು ಸಮಯ ಹಿಡಿಯಬಹುದು. ಹೀಗಾಗಿ ಮನೆ ಖಾಲಿ ಮಾಡಲು ನೀಡಿದ್ದ ಕಾಲಾವಕಾಶವನ್ನು ಮತ್ತೆ 6 ತಿಂಗಳಿಗೆ ವಿಸ್ತರಿಸಬೇಕೆಂದು ಮನವಿ ಮಾಡಿದರು. ಆದರೆ, 6 ತಿಂಗಳು ಕಾಲಾವಕಾಶ ನೀಡಲು ಮನೆ ಮಾಲೀಕ ಡಾ. ಮುನಿಪ್ರಸಾದ್
ಒಪ್ಪಿಲ್ಲ. ಕೊನೆಗೆ 2 ತಿಂಗಳು ಹೆಚ್ಚುವರಿ ಕಾಲಾವಕಾಶ ನೀಡಲು ಸಮ್ಮಿತಿಸಿದರು. ಅದರಂತೆ ಮೇ 31ರೊಳಗೆ ಮನೆ ಖಾಲಿ ಮಾಡಲು ಕಾಲಾವಕಾಶ ನೀಡಿ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.