ಜಗಜೀವನರಾಂ-ಅಂಬೇಡ್ಕರ್ ಜಯಂತಿ ಸರಳ ಆಚರಣೆ
Team Udayavani, Mar 30, 2019, 1:55 PM IST
ಕಲಬುರಗಿ: ಜಿಲ್ಲೆಯಾದ್ಯಂತ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮುಂಬರುವ ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ , ಭಾರತ ರತ್ನ ಡಾ| ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತ್ಯುತ್ಸವಗಳನ್ನು ನಗರ ಹಾಗೂ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಏಪ್ರಿಲ್ 5ರಂದು ಜಗಜೀವನರಾಂ ಮತ್ತು ಏ. 14ರಂದು ಡಾ| ಅಂಬೇಡ್ಕರ್ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಯಂತ್ಯುತ್ಸವ ಪೂರ್ವಭಾವಿ ಸಿದ್ಧತಾ ಸಭೆಯು ಸರ್ವಾನುಮತದ ನಿರ್ಣಯ
ಕೈಗೊಂಡಿತು.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಚುನಾವಣಾ ಆಯೋಗವು ನೀತಿ ಸಂಹಿತೆ ಸಮಯದಲ್ಲಿ ಸರ್ಕಾರಿ ಸಭೆ-ಸಮಾರಂಭಗಳನ್ನು ನೀತಿ ಸಂಹಿತೆಗೆ ಅನುಗುಣವಾಗಿ ನಡೆಸಲಾಗುವುದು. ಜಯಂತಿ ಆಚರಣಾ ಸಮಿತಿಗಳು ಯಾವುದೇ ಖಾಸಗಿ ಕಾರ್ಯಕ್ರಮ ನಡೆಸುವವರಿದ್ದರೆ ಮುಂಚಿತವಾಗಿಯೇ ಚುನಾವಣಾ ಅಧಿಕಾರಿಗಳಿಂದ ಪರವಾನಗಿ ಪಡೆದುಕೊಳ್ಳಬೇಕು ಎಂದರು.
ಡಾ| ಬಾಬು ಜಗಜೀವನರಾಂ ಅವರ 112ನೇ ಜಯಂತ್ಯುತ್ಸವ ಅಂಗವಾಗಿ ಏಪ್ರಿಲ್ 5 ರಂದು ಬೆಳಗ್ಗೆ 9 ಗಂಟೆಗೆ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ| ಎಸ್.ಎಂ.ಪಂಡಿತ ರಂಗಮಂದಿರ ವರೆಗೆ ಬಾಬು ಜಗಜೀವನರಾಂ ಭಾವಚಿತ್ರದ ಮೆರವಣಿಗೆಯನ್ನು ಆಯೋಜಿಸಲಾಗುವುದು.
ಮೆರವಣಿಗೆ ನಡೆಯುವ ಮಾರ್ಗದಲ್ಲಿ ನೀರು ಸಿಂಪಡಿಸುವ, ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ಮತ್ತು ಪೂರ್ಣ ಕುಂಭ ಕಲಶದ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಯಿತು. ನಂತರ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಯಂತ್ಯುತ್ಸವ ಮುಖ್ಯ ಸಮಾರಂಭ ಆಯೋಜಿಸಲಾಗುವುದು ಎಂದು ಹೇಳಿದರು.
ಏಪ್ರಿಲ್ 14 ರಂದು ಬೆಳಗ್ಗೆ ಜಗತ್ ವೃತ್ತದ ಬಳಿಯ ಡಾ| ಬಾಬಾಸಾಹೇಬ್ ಅಂಬೇಡ್ಕರ್ ಪುತ್ಥಳಿ ಬಳಿ 128ನೇ ಜಯಂತ್ಯುತ್ಸವ ಅಂಗವಾಗಿ ಡಾ| ಬಾಬಾಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಅಂದು ಬೆಳಗ್ಗೆ 8:30 ಗಂಟೆಗೆ ಮಾಲಾರ್ಪಣೆ ಬಳಿಕ ಸಮಾರಂಭ ಜರುಗುವುದು. ಈ ಎರಡೂ ಜಯಂತಿಗಳ ಆಚರಣೆಗೆ ಸಂಬಂಸಿದಂತೆ ರಚಿಸಲಾದ ಎಲ್ಲ ಉಪಸಮಿತಿಗಳಿಗೆ ವಹಿಸಲಾದ ಕೆಲಸ ಕಾರ್ಯಗಳನ್ನು ಚಾಚು ತಪ್ಪದೇ ಜವಾಬ್ದಾರಿಯಿಂದ ಕೈಗೊಳ್ಳಬೇಕು. ಜಯಂತಿ ಆಚರಣೆಯ ಸಂದರ್ಭದಲ್ಲಿ ಕುಡಿಯುವ ನೀರು, ವಿದ್ಯುತ್ ಅಲಂಕಾರ, ಧ್ವನಿವರ್ಧಕ, ಸ್ವತ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಅದೇ ರೀತಿ ಮದ್ಯ ಮಾರಾಟ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕುಎಂದರು.
ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಏಪ್ರಿಲ್ 5 ರಂದು ಬಾಬು ಜಗಜೀವನರಾಂ ಮತ್ತು ಏಪ್ರಿಲ್ 14ರಂದು ಡಾ| ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಯಂತಿ ಆಚರಿಸಿ ಆಚರಣೆ ಮುಖ್ಯ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು. ಈ ಕುರಿತು ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದರು. ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಯೋಗೇಶ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸತೀಶ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಜಯಂತ್ಯೋತ್ಸವ ಆಚರಣೆ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.