ಖಾಸಗಿ ಶಾಲೆ ಬಂದ್‌: ಪೋಷಕರ ಪ್ರತಿಭಟನೆ


Team Udayavani, Mar 30, 2019, 3:12 PM IST

khasagi

ಅರಸೀಕೆರೆ: ನಗರದಲ್ಲಿ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಕನ್ನಿಕಾ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಏಕಾಎಕಿ ಶಾಲೆಯನ್ನು ಮುಚ್ಚಲು ಮುಂದಾಗಿರುವುದರಿಂದ ಈ ಶಾಲೆಗೆ ಆರ್‌ಟಿಇ (ಶಿಕ್ಷಣ ಹಕ್ಕು ಕಾಯ್ದೆ )ಯೋಜನೆಯಡಿ ಸೇರ್ಪಡೆಯಾಗಿದ್ದ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಭವಿಷ್ಯದಲ್ಲಿ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಬಿಇಒ ಮೋಹನ್‌ ಕುಮಾರ್‌ ಅವರಿಗೆ ಮನವಿಪತ್ರ ಸಲ್ಲಿಸಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಗುಂಪು ಸೇರಿದಂತೆ ಪೋಷಕರು ನಗರದಲ್ಲಿರುವ ಕನ್ನಿಕಾ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಮುಂದಿನ ಶೈಕ್ಷಣಿಕ ವರ್ಷದಿಂದ ಕನ್ನಿಕಾ ಶಾಲೆಯನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಕ್ಷೇತ್ರ ಶಿಕ್ಷಾಧಿಕಾರಿಗಳ ಕಚೇರಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ತಾವುಗಳು ನಮ್ಮ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಬಗ್ಗೆ ತುಂಬಾ ಆತಂಕ ವ್ಯಕ್ತವಾಗುತ್ತಿದೆ ಎಂದು ಹಲವಾರು ಪೋಷಕರು ಕ್ಷೇತ್ರಶಿಕ್ಷಣಾಧಿಕಾರಿಗಳ ಮುಂದೆ ಅಳು ತೋಡಿಕೊಂಡರು.

ಬಡ ಮಕ್ಕಳಿಗೆ ತೊಂದರೆ: ನಾವುಗಳು ಬಡಕುಟುಂಬದವರಾಗಿದ್ದು, ಸರ್ಕಾರದ ಆರ್‌ಟಿಇ ಯೋಜನೆಯಡಿ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ದೊರಕುತ್ತಿದೆ ಎಂಬ ನಂಬಿಕೆಯಿಟ್ಟು ಶಾಲೆಗೆ ಸೇರಿಸಿದ್ದು ಈ ಶಾಲೆಯಲ್ಲಿ ಸುಮಾರು 131 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಲ್ಲಿ 68 ಮಂದಿ ವಿದ್ಯಾರ್ಥಿಗಳು ಸರ್ಕಾರದ ಆರ್‌ಟಿಇ ಯೋಜನೆಯಡಿ ದಾಖಲಾದ ವಿದ್ಯಾರ್ಥಿಗಳು ಆಗಿದ್ದಾರೆ.

ಆದರೆ ಈಗ ಏಕಾಎಕಿ ಶಾಲೆಯ ಆಡಳಿತ ಮಂಡಳಿ ಇಲ್ಲಸಲ್ಲದ ನೆಪ ಮಾಡಿಕೊಂಡು ಶಾಲೆಯನ್ನು ಮುಚ್ಚುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ಇಂತಹ ಸೌಲಭ್ಯದಿಂದ ಸಂಪೂರ್ಣವಾಗಿ ವಂಚಿತರಾಗುತ್ತಿದ್ದು,ಅವರುಗಳ ಭವಿಷ್ಯದ ಬಗ್ಗೆ ಸರ್ಕಾರದ ಅಧಿಕಾರಿಗಳು ಹಾಗೂ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಚಿಂತನೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಕ್ಕಳ ಪೋಷಕರಾದ ವಿರೂಪಾಕ್ಷಪ್ಪ, ಎಸ್‌.ಕೆ.ರವಿ, ಅಮ್ಜದ್‌, ಪ್ರಕಾಶ್‌,ಅಶೋಕ್‌, ಮಮತಾ, ಗೌಸೀಯಾ, ಸಹೀನಾ, ಉಷಾ ಹಾಗೂ ಇನ್ನಿತರರು ಇದ್ದರು
ನಂತರ ಪ್ರತಿಭಟನಕಾರರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್‌ ಕುಮಾರ್‌ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಬಿಇಒ ಸ್ಪಷ್ಟನೆ: ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಬಿಇಒ ಮೋಹನ್‌, ಶಾಲೆಗೆ ವಿದ್ಯಾರ್ಥಿಗಳ ದಾಖಲಾತಿ ಇಳಿಮುಖವಾಗುತ್ತಿರುವ ಕಾರಣ ಶಾಲೆ ನಡೆಸಲು ಆಗುತ್ತಿಲ್ಲ ಎಂದು ಶಾಲೆ ಆಡಳಿತ ಮಂಡಳಿ ಪತ್ರ ಬರೆದಿದೆ.

ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯನ್ನು ಕರೆದು ಮಕ್ಕಳಿಗೆ ತೊಂದರೆ ಉಂಟಾಗುತ್ತಿರುವ ವಿಷಯವನ್ನು ಗಮನಕ್ಕೆ ತರುತ್ತೇನೆ. ಆದರೂ ಶಾಲೆ ಮುಚ್ಚುವ ತೀರ್ಮಾನವೇ ಅಂತಿಮವಾದರೆ ವಿದ್ಯಾರ್ಥಿಗಳನ್ನು ಬೇರೆ ಬೇರೆ ಶಾಲೆಗಳಿಗೆ ಸೇರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.