ಗ್ಲ್ಯಾಮರ್‌ನಿಂದ ಹಾರರ್‌ ಕಡೆಗೆ ನೀತೂ ಪಯಣ


Team Udayavani, Mar 31, 2019, 6:02 AM IST

NEETU

ಇಲ್ಲಿಯವರೆಗೆ ಸುಮಾರು ಮೂವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ವಿವಿಧ ಪಾತ್ರಗಳಿಗೆ ಬಣ್ಣ ಹಚ್ಚಿರುವ ಕರಾವಳಿ ಚೆಲುವೆ ನೀತೂ ಶೆಟ್ಟಿ ಇದೇ ಮೊದಲ ಬಾರಿಗೆ ಪ್ರೇಕ್ಷಕರನ್ನು ಬೆದರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಹೌದು,ಇಲ್ಲಿಯವರೆಗೆ ಕಾಲೇಜು ಹುಡುಗಿಯಾಗಿ,ಗೃಹಿಣಿಯಾಗಿ,ಪೊಲೀಸ್‌ ಆಫೀಸರ್‌ ಆಗಿ, ಗಯ್ನಾಳಿ ಹುಡುಗಿಯಾಗಿ ಹಲವು ಪಾತ್ರಗಳನ್ನು ಲೀಲಾಜಾಲವಾಗಿ ನಿರ್ವಹಿಸಿರುವ ನೀತೂ ಇದೇ ಮೊದಲ ಬಾರಿಗೆ ವಜ್ರಮುಖೀ ಚಿತ್ರದಲ್ಲಿ ದೆವ್ವದ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕಳೆದ ಒಂದೆರಡು ವರ್ಷಗಳಿಂದ ತೆರೆಮೇಲೆ ಅಷ್ಟಾಗಿ ಎಲ್ಲೂ ಕಾಣಿಸಿಕೊಂಡಿರದ ನೀತೂ, ಇದೇ ಚಿತ್ರದ ತಯಾರಿಯಲ್ಲಿದ್ದು ಈ ಬಾರಿ ಹಾರರ್‌ ಲುಕ್‌ನಲ್ಲಿ ಡಿಫ‌ರೆಂಟ್‌ ಎಂಟ್ರಿಗೆ ರೆಡಿಯಾಗುತ್ತಿದ್ದಾರೆ.

ಈ ಬಗ್ಗೆ ಮಾತನಾಡುವ ನೀತೂ, ನಾನೊಬ್ಬ ಕಲಾವಿದೆಯಾಗುವ ಕನಸನ್ನಿಟ್ಟುಕೊಂಡು ಚಿತ್ರರಂಗಕ್ಕೆ ಬಂದವಳು. ಹಾಗಾಗಿ ಪ್ರತಿ ಚಿತ್ರದಲ್ಲೂ ಆದಷ್ಟು ಹೊಸಥರದ, ವಿಭಿನ್ನ ಪಾತ್ರಗಳು ಸಿಗಬಹುದಾ ಎಂದು ಬಯಸುತ್ತಿರುತ್ತೇನೆ. ಆದ್ರೆ ಕೆಲವೇ ಕೆಲವು ಚಿತ್ರಗಳಲ್ಲಿ ಮಾತ್ರ ನಾನು ಬಯಸುವಂಥ ಪಾತ್ರಗಳು ಸಿಗುತ್ತವೆ. ಅಂಥ ಪಾತ್ರಗಳು ಸಿಕ್ಕರೆ ಖುಷಿಯಿಂದ ಒಪ್ಪಿಕೊಂಡು ಮಾಡುತ್ತೇನೆ. ವಜ್ರಮುಖೀ ಚಿತ್ರದಲ್ಲಿ ಅಂಥದ್ದೇ ಒಂದು ಪಾತ್ರ ಸಿಕ್ಕಿದೆ. ಇಲ್ಲಿಯವರೆಗೆ ಸಿಕ್ಕ ಬಹುತೇಕ ಪಾತ್ರಗಳು ಗ್ಲಾಮರಸ್‌ ಲುಕ್‌ನಲ್ಲಿದ್ದವು. ಆದರೆ ಈ ಚಿತ್ರದಲ್ಲಿ ಮೊದಲ ಬಾರಿಗೆ ನನ್ನ ಪಾತ್ರ ಹಾರರ್‌ ಲುಕ್‌ನಲ್ಲಿದೆ. ನಾನು ಖುಷಿಯಿಂದ ಈ ಪಾತ್ರವನ್ನು ಮಾಡಿದ್ದೇನೆ. ನನಗೂ ಈ ಚಿತ್ರದ ಮೇಲೆ, ಪಾತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ ಎನ್ನುತ್ತಾರೆ.

ಒಟ್ಟಾರೆ ಇಲ್ಲಿಯವರೆಗೆ ತಮ್ಮ ಗ್ಲಾಮರಸ್‌ ಲುಕ್‌ನಿಂದ ಒಂದಷ್ಟು ಪಡ್ಡೆ ಹುಡುಗರ ನಿದ್ದೆ ಕದ್ದಿದ್ದ ನೀತೂ, ಈಗ ಹೆದರಿಸಿ, ಬೆದರಿಸಿ ಮತ್ತೆ ನಿದ್ದೆ ಬಾರದಂತೆ ಮಾಡಲು ಹೊರಟಿದ್ದಾರೆ. ವಜ್ರಮುಖೀ ಗೆಟಪ್‌ನಲ್ಲಿ ನೀತೂ ಅವರನ್ನು ನೋಡಿ ಅದೆಷ್ಟು ಮಂದಿ ಬೆಚ್ಚಿ ಬೀಳಲಿದ್ದಾರೆ ಅನ್ನೋದು ಗೊತ್ತಾಗಬೇಕಾದರೆ ಚಿತ್ರ ತೆರೆಗೆ ಬರಬೇಕು.

ಅಂದಹಾಗೆ, ಕಳೆದ ಎರಡು ವರ್ಷಗಳಿಂದ ಒಂದಷ್ಟು ಚಿತ್ರಗಳ ಶೂಟಿಂಗ್‌, ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ಬ್ಯುಸಿಯಾಗಿದ್ದ ನೀತೂ ಈ ವರ್ಷ ಆ ಚಿತ್ರಗಳ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ಸದ್ಯ ವಜ್ರಮುಖೀ, 1888, ಹ್ಯಾಂಗೋವರ್‌, ತ್ಯಾಗು, ಐಸ್‌ಪೈಸ್‌, ಬೆಂಗಳೂರು ಮೆಟ್ರೋ ಹೀಗೆ ನೀತೂ ಅಭಿನಯದ ಒಂದಷ್ಟು ಚಿತ್ರಗಳು ಈ ವರ್ಷ ತೆರೆಗೆ ಬರಲು ಸಿದ್ಧತೆ ನಡೆಸುತ್ತಿದ್ದು, ಇಷ್ಟು ಚಿತ್ರಗಳಲ್ಲಿ ಯಾವ ಚಿತ್ರ ಮತ್ತೆ ನೀತೂ ಕೈ ಹಿಡಿಯಲಿದೆ ಅನ್ನೋದು ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.