ಪುಲ್ವಾಮಾ ನೆನಪಿಸಿದ ಕಾರು ಸ್ಫೋಟ
Team Udayavani, Mar 31, 2019, 6:05 AM IST
ಜಮ್ಮು: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಆರ್‌ಪಿಎಫ್ ಬೆಂಗಾವಲು ವಾಹನದ ಸಮೀಪವೇ ಖಾಸಗಿ ಕಾರೊಂದು ಸ್ಫೋಟಗೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಕಳೆದ ತಿಂಗಳಷ್ಟೇ 40 ಮಂದಿ ಯೋಧರ ಸಾವಿಗೆ ಕಾರಣವಾದ ಪುಲ್ವಾಮಾ ಆತ್ಮಾಹುತಿ ದಾಳಿ ಯನ್ನು ಈ ಘಟನೆ ನೆನಪಿಸುವ ಮೂಲಕ, ಆತಂಕ ಮೂಡಿಸಿತು. ಆದರೆ, ಅದೃಷ್ಟ ವಶಾತ್ ಶನಿವಾರದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ರಾಂಬನ್ ಜಿಲ್ಲೆಯ ಜವಾಹರ್ ಟನೆಲ್ ಸಮೀಪ ಬೆಳಗ್ಗೆ 10.30ಕ್ಕೆ ಈ ಘಟನೆ ನಡೆದಿದೆ. ಶ್ರೀನಗರದಿಂದ ಜಮ್ಮುವಿಗೆ ತೆರಳುತ್ತಿದ್ದ ಹುಂಡೈ ಸ್ಯಾಂಟ್ರೋ ಕಾರಿನಲ್ಲಿದ್ದ ಎರಡು ಸಿಲಿಂಡರ್‌ಗಳ ಪೈಕಿ ಒಂದು ಏಕಾಏಕಿ ಸ್ಫೋಟಗೊಂಡಿದೆ. ಇದೇ ಸಮಯಕ್ಕೆ ಅದೇ ದಾರಿಯಲ್ಲಿ ಸಿಆರ್‌ಪಿಎಫ್ ಯೋಧರಿದ್ದ 10 ವಾಹನಗಳು ಸಂಚರಿಸುತ್ತಿದ್ದು, ಒಂದು ಸೇನಾ ವಾಹನದ ಹಿಂಬದಿಗೆ ಸ್ವಲ್ಪಮಟ್ಟಿಗೆ ಹಾನಿಯಾಗಿದೆ.
ಒಳಗಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಸಂಪೂರ್ಣ ಭಸ್ಮ ವಾಗಿದ್ದು, ಅದರೊಳಗಿದ್ದ ಇನ್ನೊಂದು ಸಿಲಿಂಡರ್ ರಸ್ತೆ ಬದಿಯಲ್ಲಿ ಬಿದ್ದಿತ್ತು. ಕಾರಿನ ಚಾಲಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ಆರಂಭವಾಗಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟ ದಿಂದಲೇ ಘಟನೆ ಸಂಭವಿಸಿದೆ ಎಂದು ಕಂಡು ಬಂದರೂ ಉಗ್ರರ ಕೃತ್ಯವೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.