ದೇಶಕ್ಕೆ ಮತ್ತೂಮ್ಮೆ ಮೋದಿ ಸಂಕಲ್ಪ: ಸುನಿಲ್
Team Udayavani, Mar 31, 2019, 12:58 PM IST
ಬೆಳ್ತಂಗಡಿ: ಸಮಾಜದಲ್ಲಿ ಎಲ್ಲ ಸ್ಥರದ ಜನರ ಅಭಿವೃದ್ಧಿಗೆ ನಾನಾ ತರಹದ ಯೋಜನೆ ನೀಡಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ಮತ್ತೂಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಸುನಿಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಗುರುವಾಯಕೆರೆಯ ಗುಣವತಿ ಕಿನ್ಯಮ್ಮ ಸಭಾಂಗಣದಲ್ಲಿ ಶನಿವಾರ ನಡೆದ
ಬಿಜೆಪಿ ಪೇಜ್ ಪ್ರಮುಖ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ಮೋದಿ ಎದೆಗಾರಿಕೆ
54 ಇಂಚಿನ ಎದೆಗಾರಿಕೆ ಎಂದು ಕಾಂಗ್ರೆಸ್ ಮೋದಿಯನ್ನು ಟೀಕಿಸುತ್ತದೆ. ಆದರೆ ಈ ವರೆಗೆ ಭಯೋತ್ಪಾದನೆ ಮಟ್ಟಹಾಕುವಲ್ಲಿ ಕಾಂಗ್ರೆಸ್ ಸರಕಾರ ತೋರದ ಎದೆಗಾರಿಕೆಯನ್ನು ಮೋದಿ ಪ್ರದರ್ಶಿಸಿದ್ದಾರೆ ಎಂದರು. ಬೆಳ್ತಂಗಡಿಯ ಶಾಸಕರು ಐದು ವರ್ಷಗಳಲ್ಲಿ ಮಾದರಿ ಬೆಳ್ತಂಗಡಿ ಮಾಡುವ ಗುರಿ ಹೊಂದಿದ್ದಾರೆ. ಕಾರ್ಯಕರ್ತರೆಲ್ಲರು ಶ್ರಮಿಸಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಆಡಳಿತಕ್ಕೆ ಬರುವಂತೆ ಮಾಡಬೇಕು ಎಂದರು.
ಅಭಿವೃದ್ಧಿಯ ಹರಿಕಾರ ನರೇಂದ್ರ ಮೋದಿ ಗೆಲ್ಲಿಸುವಲ್ಲಿ ಚೌಕಿದಾರ್ ಆಗಿ ಸೇವೆ ಸಲ್ಲಿಸುತ್ತೇನೆ. ಈ ದೇಶಕ್ಕೆ ಮತ್ತೂಮ್ಮೆ ಪ್ರಧಾನಿಯಾಗಿಸುವ ನಿಟ್ಟಿನಲ್ಲಿ ಗ್ರಾಮ ಗ್ರಾಮಗಳಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಸಂಕಲ್ಪ ತೊಟ್ಟಿದ್ದಾರೆ ಎಂದು ಹಾಲಿ ಸಂಸದರು ಹಾಗೂ ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಹೇಳಿದರು.
ಶಾಸಕ ಹರೀಶ್ ಪೂಂಜಾ ಪ್ರಸ್ತಾವನೆಗೈದರು. ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಮೋನಪ್ಪ ಭಂಡಾರಿ, ಪ್ರತಾಪ್ ಸಿಂಹ ನಾಯಕ್, ಕೋಟ ಶ್ರೀನಿವಾಸ ಪೂಜಾರಿ, ಸಂಜೀವ ಮಠಂದೂರು, ರಾಜೇಶ್ ನಾಯ್ಕ ಉಳೆಪ್ಪಾಡಿ, ಕ್ಯಾ| ಗಣೇಶ್ ಕಾರ್ಣಿಕ್, ಬೃಜೇಶ್ ಚೌಟ, ಪ್ರಭಾಕರ ಬಂಗೇರ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು
Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.