ಚೆಕ್‌ ಡ್ಯಾಂ ನಿರ್ಮಿಸಿ ನೀರು ಸಂಗ್ರಹಿಸಿ: ಸ್ವಾಮೀಜಿ

ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ನೀರಿಗಾಗಿ ಪರದಾಟ

Team Udayavani, Mar 31, 2019, 4:57 PM IST

1-April-19

ರಾಣಿಬೆನ್ನೂರ: ಚಿಕ್ಕಕುರವತ್ತಿ ಗ್ರಾಮದ ತುಂಗಭದ್ರ ನದಿಗೆ ಲಿಂಗನಾಯಕನಹಳ್ಳಿಯ ಶ್ರೀಗಳು ರೈತರೊಂದಿಗೆ ಬಾಗಿನ ಅರ್ಪಿಸಿದರು.

ರಾಣಿಬೆನ್ನೂರ: ಜಿಲ್ಲೆಯಲ್ಲಿ ಹರಿಯುವ ತುಂಗಭದ್ರ ನದಿಯ ಕೆಲ ಗ್ರಾಮಗಳಲ್ಲಿ ಅಲ್ಲಲ್ಲಿ ಚೆಕ್‌ ಡ್ಯಾಂ ನಿರ್ಮಿಸುವುದು ಬಹಳ ಅವಶ್ಯವಾಗಿದೆ. ಇಲ್ಲವಾದಲ್ಲಿ ಪ್ರತಿ ಬೇಸಿಗೆಯಲ್ಲಿ
ಪ್ರಾಣಿ ಪಕ್ಷಿಗಳು, ಜನ ಜಾನುವಾರಗಳು ನೀರಿಗಾಗಿ ಪರದಾಡಬೇಕಾಗುವುದು ಎಂದು ಲಿಂಗನಾಯಕನಹಳ್ಳಿಯ ಚನ್ನವೀರ ಶಿವಯೋಗಿ ಸ್ವಾಮೀಜಿ ಹೇಳಿದರು.

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿದು ಬಂದ ಕಾರಣ ಶನಿವಾರ ತಾಲೂಕಿನ ಚಿಕ್ಕಕುರುವತ್ತಿ ಗ್ರಾಮದಲ್ಲಿ ರೈತ ಸಂಘಟನೆ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ತಾಲೂಕು ದಂಡಾಧಿಕಾರಿಗಳ ವತಿಯಿಂದ ನದಿಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ನೀರಿಲ್ಲದೆ ಯಾವ ಜೀವಿಯೂ ಬದುಕಲು ಅಸಾಧ್ಯ. ಈ ನಿಟ್ಟಿನಲ್ಲಿ ಸರ್ವರೂ  ನೀರನ್ನು ಸಂರಕ್ಷಿಸುವ ಮಹತ್ತರವಾದ ಕಾರ್ಯ ಮಾಡಬೇಕು ಎಂದರು.

ಬೇಸಿಗೆ ಅವಧಿಯಲ್ಲಿ ಅದೆಷ್ಟೋ ರೈತರು ನೀರಿಲ್ಲದೆ ತಮ್ಮ ಬೆಳೆಗಳನ್ನು ಹಾನಿ ಮಾಡಿಕೊಂಡು ಸಂಕಷ್ಟಕ್ಕೀಡಾಗುತ್ತಾರೆ. ಅಷ್ಟೇ ಏಕೆ ಜಾನುವಾರಗಳು ಮತ್ತು ಪಕ್ಷಿಗಳು ಸಹ ನೀರಿಲ್ಲದೆ ಅಳಿವಿನಂಚಿನಲ್ಲಿ ಸಾಗುತ್ತಿರುತ್ತವೆ. ಇದಕ್ಕೆ ಶಾಶ್ವತ ಪರಿಹಾರವಾಗಿ ಅಲ್ಲಲ್ಲಿ ಚೆಕ್‌  ಡ್ಯಾಂ ನಿರ್ಮಿಸಿ ಮಾನವ ಹಾಗೂ ಪ್ರಾಣಿ ಪಕ್ಷಿಗಳ ಸಂಕುಲಕ್ಕೆ ಸರ್ಕಾರ ಹಾಗೂ ಜನಪ್ರತಿನಿಧಿ ಗಳು ನೆರವಾಗಬೇಕೆಂದು ಶ್ರೀಗಳು ಹೇಳಿದರು.

ಗ್ರೇಡ್‌-2 ತಹಶೀಲ್ದಾರ್‌ ಡಿ.ಜಿ. ಹೆಗಡೆ ಮಾತನಾಡಿ, ಸರ್ವರೂ ನೀರನ್ನು ಮಿತವ್ಯಯವಾಗಿ ಬಳಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ನೀರು ಸತತವಾಗಿ ಹರಿಯದೆ ಆ ನೀರನ್ನು ರಕ್ಷಿಸಲು ಮುಂದಾಗಬೇಕು. ನದಿಗಳಲ್ಲಿ ತಡೆಗೋಡೆಯಂತಹ ಕಾರ್ಯ ಮಾಡಲು ಮೇಲಧಿ ಕಾರಿಗಳಿಗೆ ತಿಳಿಸಲಾಗುವುದು. ರೈತರು ಮತ್ತು ನದಿಯ ನೀರನ್ನು ಅವಲಂಬಿಸುವ ಜನರು ಧೃತಿಗೆಡದೆ ಬೇಸಿಗೆಯ ಸಮಯದಲ್ಲಿ ಜಾಗೂರಕತೆಯಿಂದ ಇರಬೇಕು ಮತ್ತು ಕೃಷಿಗೆ ನೀರು ಬಳಸದೆ ಕುಡಿಯಲು ಮಾತ್ರ ಉಪಯೋಗಿಸಬೇಕು ಎಂದರು.

ರೈತ ಮುಖಂಡರಾದ ರವೀಂದ್ರಗೌಡ ಪಾಟೀಲ, ಶಿವನಗೌಡ ಚನ್ನಗೌಡ್ರ, ಸಿ.ಸಿ.ಸಣ್ಣಗೌಡ್ರ, ದಿಳ್ಳೆಪ್ಪ ಸತ್ತೆಪ್ಪನವರ, ಬಸವರಾಜ ಕೊಂಗಿ, ಹರಿಹರಗೌಡ ಪಾಟೀಲ, ರಮೇಶ ಕಾಟೇನಹಳ್ಳಿ, ವೀರಣ್ಣ ಜಂಬಗಿ, ರವಿ ಪಾಟೀಲ. ಗ್ರಾಮಲೆಕ್ಕಾಧಿಕಾರಿ ಚೇತನಕುಮಾರಿ, ಶರಣಗೌಡ ಕೆಂಪಗೌಡ್ರ, ದಿಳ್ಳೆಪ್ಪ ಅಂಕಸಾಪುರ, ಬಸನಗೌಡ ಚನ್ನಗೌಡ್ರ, ರವಿ ಚನ್ನಗೌಡ್ರ, ಹನುಮಂತಪ್ಪ ಅಕ್ಕಿ, ಆರ್‌ .ಬಿ.ದೊಡ್ಡಗೌಡ್ರ, ನಾಗಪ್ಪ ಮಾಸಣಗಿ, ವೇದಯ್ಯ
ಹಿರೇಮಠ, ಬಸನಗೌಡ ಸಂಕನಗೌಡ್ರ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.