ಶಾಂತಿಯುತ- ನ್ಯಾಯಸಮ್ಮತ ಮತದಾನಕ್ಕೆ ತಯಾರಿ
ಚುನಾವಣಾ ಸುವ್ಯವಸ್ಥೆಗೆ ಪೊಲೀಸ್ ಪಥಸಂಚಲನ
Team Udayavani, Mar 31, 2019, 5:11 PM IST
ಹಳಿಯಾಳ: ಲೋಕಸಭಾ ಚುನಾವಣೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪಟ್ಟಣದಲ್ಲಿ ಹಳಿಯಾಳ ಪೊಲೀಸ್ ಇಲಾಖೆಯವರು ಸಿಪಿಐ ಬಿ.ಎಸ್. ಲೋಕಾಪುರ ಮತ್ತು ದಾಂಡೇಲಿ ಸಿಪಿಐ ಅನೀಷ್ ಮುಜಾವರ ನೇತೃತ್ವದಲ್ಲಿ ಪಟ್ಟಣದಲ್ಲಿ ಹಾಗೂ ತಾಲೂಕಿನ ಕೆಸರೊಳ್ಳಿ ಗ್ರಾಮದಲ್ಲಿ ಪೊಲೀಸ್ ಪಥ ಸಂಚಲನ ನಡೆಸಿ ಗಮನ ಸೆಳೆದರು.
ಪೊಲೀಸ್ ಠಾಣೆ ಆವರಣದಿಂದ ಬ್ಯಾಂಡ್ ಸಮೇತ್ ಪೊಲೀಸ್ ಪಥ ಸಂಚಲನವನ್ನು ಶಿವಾಜಿ ಸರ್ಕಲ್, ವನಶ್ರೀ ಸರ್ಕಲ್, ಬಸ್ ಸ್ಟ್ಯಾಂಡ್ ರಸ್ತೆ, ಮೇದಾರಗಲ್ಲಿ, ವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ವೃತ್ತ, ಬಜಾರ, ಮುಖ್ಯರಸ್ತೆ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು. ಪಿಎಸೈ ಆನಂದಮೂರ್ತಿ ಸೇರಿದಂತೆ 50ಕ್ಕೂ ಅ ಧಿಕ ಪೊಲೀಸರು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಅಲ್ಲದೇ ಪೊಲೀಸ್ ವಾಹಗಳು ಸಹ ಸಾಥ್ ನೀಡಿದವು. ಸಿಪಿಐ ಬಿ.ಎಸ್. ಲೋಕಾಪುರ ಮಾತನಾಡಿ, ಪಥ ಸಂಚಲನದ ಮೂಲಕ ಜನರಲ್ಲಿ ಧೈರ್ಯ ತುಂಬುವ ಕೆಲಸ ನಮ್ಮದಾಗಿದೆ. ಪೊಲೀಸ್ ಪರೇಡ್‌ನಿಂದ ಸಾಮಾನ್ಯ ಜನರಲ್ಲಿ ಉತ್ಸಾಹ ಬರುವುದರ ಜೊತೆಗೆ ನಮ್ಮೊಂದಿಗೆ ಪೊಲೀಸರು ಇದ್ದಾರೆ ಎಂಬ ಭಾವನೆ ಮೂಡುತ್ತದೆ. ಇದರ ಮೂಲಕ ಶಾಂತಿಯುತ ಹಾಗೂ ನ್ಯಾಯಸಮ್ಮತ ಮತದಾನಕ್ಕೆ ಜನರು ಆಸಕ್ತಿ ವಹಿಸುತ್ತಾರೆ ಎಂದರು.
ಸಹಾಯಕ ಚುನಾವಣಾಧಿಕಾರಿ ಪುಟ್ಟಸ್ವಾಮಿ, ತಹಶೀಲ್ದಾರ್‌ಗಳಾದ ಶಿವಾನಂದ ಉಳ್ಳೇಗಡ್ಡಿ, ಚಾಮರಾಜ ಪಾಟೀಲ್, ಜಿ.ಕೆ.ರತ್ನಾಕರ ಮತ್ತು ಅನಂತ ಚಿಪ್ಪಲಗಟ್ಟಿ, ಪಿಎಸ್‌ಐ ಆನಂದಮೂರ್ತಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.