ಸಾಮಾಜಿಕ ನ್ಯಾಯ: ಕಾಂಗ್ರೆಸ್‌ “ಹೈ’ ಪಟ್ಟು


Team Udayavani, Apr 1, 2019, 6:00 AM IST

1003

ಬೆಂಗಳೂರು: ಲೋಕಸಭಾ ಚುನಾವಣೆಗೆ ದಾವಣಗೆರೆಗೆ ಲಿಂಗಾಯತ, ಧಾರವಾಡಕ್ಕೆ ಮುಸ್ಲಿಂ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಬೇಕೆಂಬ ಕಾಂಗ್ರೆಸ್‌ ಹೈಕಮಾಂಡ್‌ನ‌ ಸಾಮಾಜಿಕ ನ್ಯಾಯದ ಲೆಕ್ಕಾಚಾರ ರಾಜ್ಯ
ಕಾಂಗ್ರೆಸ್‌ ನಾಯಕರ ತಲೆಗೆಡಿಸಿದೆ.

ಕಾಂಗ್ರೆಸ್‌ ಪಾಲಿಗೆ ಬಂದಿರುವ ಇಪ್ಪತ್ತು ಸ್ಥಾನಗಳಲ್ಲಿ ಜಾತಿವಾರು
ಲೆಕ್ಕಾಚಾರ ಹಾಕಿ, ಅಳೆದು ತೂಗಿ ಅಭ್ಯರ್ಥಿಗಳ ಆಯ್ಕೆ ಮಾಡಿರುವ ಕೈ
ನಾಯಕರಿಗೆ ದಾವಣಗೆರೆ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ
ಸಾಮಾಜಿಕ ನ್ಯಾಯದಂತೆಯೇ ಟಿಕೆಟ್‌ ನೀಡಬೇಕೆಂಬ ಕಟ್ಟಪ್ಪಣೆ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಮುಳುವಾಗಿ ಪರಿಣಮಿಸಿದೆ.

ಈ ಬಾರಿಯ ಸೀಟು ಹಂಚಿಕೆ ಲೆಕ್ಕಾಚಾರದಲ್ಲಿ ಸಾಮಾಜಿಕ ನ್ಯಾಯದ
ಪ್ರಕಾರ ದಾವಣಗೆರೆ ಕ್ಷೇತ್ರವನ್ನು ಲಿಂಗಾಯತ ಸಮುದಾಯಕ್ಕೆ
ನೀಡಬೇಕೆಂಬ ಕಾರಣಕ್ಕೆ ಹಾಲಿ ಶಾಸಕ, ಲಿಂಗಾಯತ ಸಮುದಾಯದ ಉಪಪಂಗಡ ಸಾದರ ಸಮುದಾಯಕ್ಕೆ ಸೇರಿರುವ ಶಾಮನೂರು ಶಿವಶಂಕರಪ್ಪಅವರಿಗೆ ನೀಡಲಾಗಿತ್ತು. ಅವರು, ಟಿಕೆಟ ನಿರಾಕರಿಸಿದ್ದರಿಂದ
ಅವರ ಪುತ್ರ ಎಸ್‌.ಎಸ್‌. ಮಲ್ಲಿಕಾರ್ಜುನ ಅವರಿಗೆ ಟಿಕೆಟ್‌ ನೀಡಲು
ಹೈಕಮಾಂಡ್‌ ಒಪ್ಪಿಗೆ ಸೂಚಿಸಿತ್ತು.

ಎಸ್‌.ಎಸ್‌.ಮಲ್ಲಿಕಾರ್ಜುನ ಕೂಡ ಸ್ಪರ್ಧೆಗೆ ಹಿಂದೇಟು ಹಾಕಿ, ತಮ್ಮ
ಅಣತಿಯಂತೆ ನಡೆಯುವ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕುರುಬ ಸಮುದಾಯಕ್ಕೆ ಸೇರಿರುವ ಮಂಜಪ್ಪ ಅವರಿಗೆ ಟಿಕೆಟ್‌ ಕೊಡಿಸುವ ಪ್ರಯತ್ನಿಸಿದರು. ಆದರೆ, ಕಾಂಗ್ರೆಸ್‌ ಹೈಕಮಾಂಡ್‌ ಮಾತ್ರ ಲಿಂಗಾಯತರಿಗೆ ಮೀಸಲಿಟ್ಟ ಕ್ಷೇತ್ರವನ್ನು ಕುರುಬ ಸಮುದಾಯಕ್ಕೆ ನೀಡಲು ನಿರಾಕರಿಸಿ, ಲಿಂಗಾಯತ ಸಮುದಾಯದ ಅಭ್ಯರ್ಥಿ ಹುಡುಕುವಂತೆ ಸೂಚಿಸಿತು. ಹೀಗಾಗಿ, ಲಿಂಗಾಯತ ಬಣಜಿಗ
ಸಮುದಾಯಕ್ಕೆ ಸೇರಿದ ತೇಜಸ್ವಿ ಪಟೇಲ ಅವರಿಗೆ ಟಿಕೆಟ್‌ ಕೊಡಿಸಲು ಶಾಮನೂರು ವಿರೋಧಿ ಬಣ ಪ್ರಯತ್ನ ನಡೆಸಿತು.ಸಾದರ ಲಿಂಗಾಯತರಿಗೆ ಟಿಕೆಟ್‌ ಕೊಡುವ ಸುಳಿವು ಅರಿತ ಕೊಂಡಜ್ಜಿ ಬಸಪ್ಪ
ಅವರ ಮೊಮ್ಮಗ, ಯುವ ಕಾಂಗ್ರೆಸ್‌ ಮುಖಂಡ ನಿಖೀಲ ಕೊಂಡಜ್ಜಿ ಕೂಡ
ಹೈಕಮಾಂಡ್‌ನ‌ ಜಾತಿ ಲೆಕ್ಕಾಚಾರದ ಅಸ್ತ್ರವನ್ನೇ ಅವಕಾಶವನ್ನಾಗಿ ಬಳಸಿಕೊಳ್ಳಲು ಯತ್ನ ನಡೆಸಿದ್ದಾರೆ.

ಧಾರವಾಡಕ್ಕೆ ಮುಸ್ಲಿಂ ಪರ ಒಲವು
ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಹಾವೇರಿ ಕ್ಷೇತ್ರವನ್ನು ಅಣ್ಣನಿಗಾಗಿ ಪಟ್ಟು ಹಿಡಿದು ಎಚ್‌.ಕೆ. ಪಾಟೀಲ್‌ ಪಡೆದುಕೊಂಡಿರುವುದರಿಂದ ಸಾಮಾಜಿಕ
ನ್ಯಾಯ ಕಾಪಾಡಲು ಧಾರವಾಡ ಕ್ಷೇತ್ರವನ್ನುಅಲ್ಪ ಸಂಖ್ಯಾತರಿಗೆ ನೀಡಲು ಕಾಂಗ್ರೆಸ್‌ ಹೈಕಮಾಂಡ್‌ ಆಸಕ್ತಿ ವಹಿಸಿದೆ ಎಂದು ಹೇಳಲಾಗುತ್ತಿದೆ. ಅದೇ ಕಾರಣಕ್ಕೆ, ಮಾಜಿ ಸಂಸದ ಐ.ಜಿ. ಸನದಿ ಅಥವಾ ಅವರ ಪುತ್ರ ಶಾಕೀರ್‌ ಸನದಿ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿವೆ. ಇದರ ನಡುವೆ ಸಿ.ಎಂ.
ಇಬ್ರಾಹಿಂ ಪುತ್ರಿ ಸೀಮಾ ಅವರ ಹೆಸರು ಕೂಡ ಬಲವಾಗಿ ಕೇಳಿ ಬರುತ್ತಿದೆ.
ಆದರೆ, ಬಿಜೆಪಿಯ ಭದ್ರಕೋಟೆ ಹಾಗೂ ಹಿಂದುತ್ವದ ಉತ್ತರ ಕರ್ನಾಟಕದ
ಕೇಂದ್ರವಾಗಿರುವ ಹುಬ್ಬಳ್ಳಿ-ಧಾರವಾಡದಲ್ಲಿ ಅಲ್ಪಸಂಖ್ಯಾತ ಸಮುದಾ
ಯದವರಿಗೆ ಟಿಕೆಟ… ನೀಡಿದರೆ, ಗೆಲುವಿನ ತಟ್ಟೆಯನ್ನು ಬಿಜೆಪಿಯವರ ಕೈಗೆ ಅನಾಯಾಸವಾಗಿ ನೀಡಿದಂತಾಗುತ್ತದೆ ಎಂಬ ಮಾತು ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿದೆ. ಹೀಗಾಗಿ ಅಲ್ಪಸಂಖ್ಯಾತರ ಬದಲು ಬಹುಸಂಖ್ಯಾತ ಹಿಂದುಗಳಲ್ಲಿ ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿ
ಅಥವಾ ಸದಾನಂದ ಡಂಗನವರ್‌ ಅವರಲ್ಲಿ ಯಾರಾದರೂ ಒಬ್ಬರಿಗೆ ಟಿಕೆಟ್‌ ಕೊಡಬೇಕೆನ್ನುವುದು ರಾಜ್ಯ ಕಾಂಗ್ರೆಸ್‌ ನಾಯಕರ ವಾದವಾಗಿದೆ ಎಂದು ತಿಳಿದು ಬಂದಿದೆ.

ವಿಳಂಬಕ್ಕೆ ಸಾಮಾಜಿಕ ನ್ಯಾಯ ಸೂತ್ರ ಕಾರಣ
ಎರಡೂ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಳಂಬಕ್ಕೆ ಹೈಕಮಾಂಡ್‌ನ‌ ಸಾಮಾಜಿಕ ನ್ಯಾಯ ಹಾಗೂ ರಾಜ್ಯ ನಾಯಕರ ಗೆಲುವಿನ ಸೂತ್ರದ ನಡುವಿನ ಸಂಘರ್ಷವೇ ಕಾರಣ ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿವೆ.

ಶಂಕರ ಪಾಗೋಜಿ

ಟಾಪ್ ನ್ಯೂಸ್

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.