ಕಪ್ಪುಬಾವುಟ ಪ್ರದರ್ಶಿಸಿದಾತ ಈಗ ಸಲಹೆಗಾರ!
Team Udayavani, Apr 1, 2019, 6:28 AM IST
ಒಂದು ಕಾಲದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧವೇ ಕಪ್ಪುಬಾವುಟ ಪ್ರದರ್ಶಿಸಿದ್ದ ವ್ಯಕ್ತಿ ಈಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೊಸ ರಾಜಕೀಯ ಸಲಹೆಗಾರ ಎಂದರೆ ನಂಬುತ್ತೀರಾ?
ನಂಬಲೇಬೇಕು. ಜವಾಹರಲಾಲ್ ನೆಹರೂ ವಿವಿಯ ಮಾಜಿ ವಿದ್ಯಾರ್ಥಿ ಸಂದೀಪ್ ಸಿಂಗ್ ಅವರೇ ಈಗ ರಾಹುಲ್ಗೆ ಭಾಷಣಗಳನ್ನು ಬರೆದುಕೊಡುವವರು. ಅಷ್ಟೇ ಅಲ್ಲ, ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಸಲಹೆಗಳನ್ನೂ ಅವರು ನೀಡುತ್ತಿದ್ದಾರೆ. ಅವರನ್ನು ಅಧಿಕೃತವಾಗಿ ಸಲಹೆಗಾರರೆಂದು ಘೋಷಣೆ ಮಾಡಿಲ್ಲವಾದರೂ, ರಾಹುಲ್ ಹಾಗೂ ಪ್ರಿಯಾಂಕಾ ವಾದ್ರಾರಿಗೆ ಆಪ್ತರಾಗಿ ಸಂದೀಪ್ ಸಿಂಗ್ ಕೆಲಸ ಮಾಡುತ್ತಿದ್ದಾರೆ.
2005ರಲ್ಲಿ ಸಂದೀಪ್ ಜೆಎನ್ಯು ವಿದ್ಯಾರ್ಥಿಯಾಗಿದ್ದಾಗ ಅಂದಿನ ಪ್ರಧಾನಿ ಮನ ಮೋಹನ್ ಸಿಂಗ್ಗೆ ಕಪ್ಪುಬಾವುಟ ಪ್ರದರ್ಶಿಸಿದ್ದರು. ಆಗ ಅವರು ಕಟ್ಟರ್ ಎಡ ಪಂಥೀಯ ವಾದಿಯಾಗಿದ್ದರು. ಆದರೆ, ಜೆಎನ್ಯು ತೊರೆದ ಬಳಿಕ ಎಡ ರಾಜಕೀಯದಿಂದ ದೂರವುಳಿದ ಸಿಂಗ್, ಅಣ್ಣಾಹಜಾರೆ ಅವರ ಲೋಕಪಾಲ ಚಳವಳಿಯಲ್ಲಿ ಸಕ್ರಿಯರಾದರು. ಈಗ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿರುವ ಸಂದೀಪ್, ರಾಹುಲ್ಗೆ ಕಾರ್ಯತಂತ್ರ ಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಅಂದ ಹಾಗೆ, ಕಾಂಗ್ರೆಸ್ಗೆ ಬಂದೊಡನೆ ಅವರು ಮಾಜಿ ಪ್ರಧಾನಿ ಸಿಂಗ್ಗೆ ಕಪ್ಪುಬಾವುಟ ಪ್ರದರ್ಶಿಸಿದ್ದಕ್ಕೆ ಕ್ಷಮೆಯನ್ನೂ ಯಾಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.