ಕಾರ್ಕಳ ಕೋರ್ಟ್ ಸ್ಥಳಾಂತರ
Team Udayavani, Apr 2, 2019, 6:30 AM IST
ಕಾರ್ಕಳ: ಪೊಲೀಸ್ ಠಾಣೆ ಸಮೀಪದಲ್ಲಿರುವ ನ್ಯಾಯಾಧೀಶರ ವಸತಿಗೃಹಕ್ಕೆ ಕಾರ್ಕಳ ಕೋರ್ಟ್ ಸ್ಥಳಾಂತರಗೊಂಡು ಎ. 1ರಿಂದ ಕಾರ್ಯಾಚರಿಸುತ್ತಿದೆ.
ಐತಿಹಾಸಿಕ ಹಿನ್ನೆಲೆಯ ಕಾರ್ಕಳ ಕೋರ್ಟ್ ಶತಮಾನಗಳಿಂದ ಪೆರ್ವಾಜೆ ಎಂಬಲ್ಲಿ ಕಾರ್ಯಾಚರಿಸುತ್ತಿತ್ತು. ಹೊಸ ಕಟ್ಟಡ ನಿರ್ಮಾಣಕ್ಕಾಗಿ ಸರಕಾರದಿಂದ ಅನುದಾನ ಮಂಜೂರುಗೊಂಡ ಹಿನ್ನೆಲೆಯಲ್ಲಿ ಹಳೆ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಹೀಗಾಗಿ ತಾತ್ಕಾಲಿಕವಾಗಿ ಅಂದರೆ, ಕಟ್ಟಡ ಕಾಮಗಾರಿ ಪೂರ್ಣವಾಗುವ ತನಕ ಕೋರ್ಟ್ ನ್ಯಾಯಾಧೀಶರ ವಸತಿ ಗೃಹಕ್ಕೆ ಸ್ಥಳಾಂತರಗೊಂಡಿದೆ. ನೂತನ ಕೋರ್ಟ್ ಕಟ್ಟಡಕ್ಕಾಗಿ 15 ಕೋಟಿ ರೂ. ಮಂಜೂರಾಗಿದ್ದು, ಸದ್ಯದಲ್ಲೇ ಕಾಮಗಾರಿಗೆ ಚಾಲನೆ ದೊರೆಯಲಿದೆ.
ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯ, ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ, ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ, ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಸಿ ನ್ಯಾಯಾಲಯ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ಕಚೇರಿ ಬಳಿಯಲ್ಲಿರುವ ಮೂರು ವಸತಿಗೃಹಗಳಿಗೆ ಸ್ಥಳಾಂತರಗೊಂಡಿದೆ.
ಬಾರ್ ಅಸೋಸಿಯೇಶನ್, ಕಾನೂನು ನೆರವು ಸಮಿತಿ, ಮಧ್ಯಸ್ಥಿಕೆ ಕೇಂದ್ರವೂ ಕೋರ್ಟ್ ಸಮೀಪದಲ್ಲಿ ಕಾರ್ಯನಿರ್ವಹಿಸಲಿದೆ. ಕೋರ್ಟ್‌ಗಾಗಿ ತಮ್ಮ ವಸತಿಗೃಹವನ್ನು ನೀಡಿದ ಮೂವರು ನ್ಯಾಯಾಧೀಶರು ಬಾಡಿಗೆ ಮನೆಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.