ಸ್ಪೀಕರ್ ರಮೇಶ ಕುಮಾರ್ಗೆ ಉಮೇಶ ಜಾಧವ್ ಅಭಿನಂದನೆ
Team Udayavani, Apr 2, 2019, 6:15 AM IST
ಕಲಬುರಗಿ: “ಶಾಸಕತ್ವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಿಧಾನ ಸಭಾಧ್ಯಕ್ಷರು ಅಂಗೀಕಾರಗೊಳಿಸುತ್ತಾರೆ ಎಂಬ ದೃಢ ವಿಶ್ವಾಸವಿತ್ತು’ ಎಂದು ಕಲಬುರಗಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ| ಉಮೇಶ ಜಾಧವ್ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ನ್ಯಾಯಕ್ಕೆ ಜಯ ಸಿಕ್ಕಂತಾಗಿದೆ. ಸ್ಪೀಕರ್ ಅವರಿಗೆ ಅಭಿನಂದನೆ ಸಲ್ಲಿಸುವೆ. ರಾಜೀನಾಮೆ ಅಂಗೀಕರಿಸದಿರುವಂತೆ ಹಾಗೂ ಶಾಸಕತ್ವದಿಂದ ಅನರ್ಹತೆಗೊಳಿಸುವಂತೆ ಕೆಲವರು ಸಭಾಧ್ಯಕ್ಷರ ಮೇಲೆ ಒತ್ತಡ ತಂದಿದ್ದರು. ಆದರೂ ಸಭಾಧ್ಯಕ್ಷರು ನ್ಯಾಯದ ಪರ ತೀರ್ಪು ನೀಡಿದ್ದಾರೆ. ದೂರದ ಸಂಬಂಧಿಕರೊಬ್ಬರು ನಿಧನವಾಗಿದ್ದರೂ ಸೋಮವಾರ ಸ್ಪೀಕರ್ ಅವರು ಕಚೇರಿಗೆ ಬಂದು ರಾಜೀನಾಮೆ ಅಂಗೀಕರಿಸಿದ್ದಾರೆ. ಅವರು ಅಭಿನಂದನೆಗೆ ಅರ್ಹರಾಗಿದ್ದಾರೆ. ಹಲವು ತಿಂಗಳಿನಿಂದ ಪ್ರಶ್ನೆಯಾಗಿ ಉಳಿದಿದ್ದಕ್ಕೆ ಉತ್ತರ ಸಿಕ್ಕಿದೆ.
ಈಗ ಚುನಾವಣಾ ವೇದಿಕೆಗೆ ಸ್ಪಷ್ಟ ದಾರಿ ಸಿಕ್ಕಂತಾಗಿದೆ ಎಂದರು. ಏ.3ರಂದು ಕಲಬುರಗಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಾಗುವುದು. ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ ಉಪಸ್ಥಿತರಿರುವರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.