“ಪಿಎಂ ನರೇಂದ್ರ ಮೋದಿ’ ಚಿತ್ರ ಬಿಡುಗಡೆಗೆ ತಡೆ ಕೋರಿ ಅರ್ಜಿ
Team Udayavani, Apr 2, 2019, 6:28 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ “ಪಿಎಂ ನರೇಂದ್ರ ಮೋದಿ’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ತುಮಕೂರು ಮೂಲದ ವಕೀಲ ಎಲ್. ರಮೇಶ್ ನಾಯಕ್ ಈ ಅರ್ಜಿ ಸಲ್ಲಿಸಿದ್ದು, ಕರ್ನಾಟಕದಲ್ಲಿ “ಪಿಎಂ ನರೇಂದ್ರ ಮೋದಿ’ ಚಿತ್ರ ಬಿಡುಗಡೆಗೊಳಿಸಬಾರದು ಎಂದು ಚಿತ್ರ ನಿರ್ಮಾಣ ಸಂಸ್ಥೆ “ಲಿಜೆಂಡ್ ಗ್ಲೋಬಲ್ ಸ್ಟುಡಿಯೋ’ ಗೆ ನಿರ್ದೇಶನ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಕೇಂದ್ರ ಚುನಾವಣಾ ಆಯೋಗ, ಮುಂಬೈನ ಬ್ಲೂ ಲೋಟಸ್ ಪ್ರೊಡಕ್ಷನ್ನ ಲಿಜೆಂಡ್ ಗ್ಲೋಬಲ್ ಸ್ಟುಡಿಯೋ ಸಂಸ್ಥೆ, ರಾಜ್ಯ ಮುಖ್ಯ ಚುನಾವಣಾಧಿಕಾರಿಯನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
17ನೇ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಪಿಎಂ ನರೇಂದ್ರ ಮೋದಿ ಚಿತ್ರವನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಬಿಡುಗಡೆಗೊಳಿಸಿದಂತೆ ಮುಂಬೈನ ಬ್ಲೂ ಲೋಟಸ್ ಪ್ರೊಡಕ್ಷನ್ನ ಲಿಜೆಂಡ್ ಗ್ಲೋಬಲ್ ಸ್ಟುಡಿಯೋ ಸಂಸ್ಥೆಗೆ ನಿರ್ದೇಶನ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.