ಈ ಕ್ಷೇತ್ರದಲ್ಲಿ ಎರಡು ದಶಕಗಳಿಂದ ಒಂದೇ ಪಕ್ಷದ ಮುನ್ನಡೆ
Team Udayavani, Apr 2, 2019, 9:39 AM IST
ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ 1999ರಿಂದೀಚೆಗೆ ಕಾಂಗ್ರೆಸ್ ಅಭ್ಯರ್ಥಿಯೇ ಗೆದ್ದು ಬರುತ್ತಿದ್ದು, ಎರಡು ಲೋಕಸಭೆ ಚುನಾವಣೆಗಳಲ್ಲಿಯೂ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಧಿಕ ಮತಗಳು ಬಿದ್ದಿವೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಕೈತಪ್ಪಿದ ಕ್ಷೇತ್ರ ಇದೊಂದೇ. ಹೀಗಾಗಿ ಇಲ್ಲಿ ಈ ಬಾರಿಯಾದರೂ ಮುನ್ನಡೆ ಪಡೆಯಬೇಕೆಂಬ ಪ್ರಯತ್ನದಲ್ಲಿ ಬಿಜೆಪಿಯಿದೆ.
ಈ ಹಿಂದೆ ಉಳ್ಳಾಲ ವಿಧಾನಸಭಾ ಕ್ಷೇತ್ರವಾಗಿದ್ದ ಇದು 2008ರಲ್ಲಿ ಮಂಗಳೂರು ವಿಧಾನ ಸಭಾ ಕ್ಷೇತ್ರ (ನಂ. 204) ಎಂದು ಪುನರ್ ನಾಮಕರಣಗೊಂಡಿತ್ತು. 1999 ಮತ್ತು 2004ರಲ್ಲಿ ಕಾಂಗ್ರೆಸ್‌ನ ಯು.ಟಿ. ಫರೀದ್ ಮತ್ತು 2007ರಲ್ಲಿ ನಡೆದ ಉಪ ಚುನಾವಣೆ ಹಾಗೂ 2008, 2013 ಮತ್ತು 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಫರೀದ್ ಪುತ್ರ ಯು.ಟಿ. ಖಾದರ್ ಸತತವಾಗಿ ಗೆದ್ದಿದ್ದಾರೆ.
2007ರ ಉಪ ಚುನಾವಣೆಯಿಂದ ಹಿಡಿದು 2018ರ ವರೆಗಿನ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿ ಬದಲಾವಣೆಯ ಕಾರ್ಯತಂತ್ರವನ್ನು ಅನುಸರಿಸಿದರೂ ಗೆಲ್ಲಲು ಸಾಧ್ಯವಾಗಿಲ್ಲ. 2007ರಲ್ಲಿ ಯು.ಟಿ. ಫರೀದ್ ನಿಧನ ಪ್ರಯುಕ್ತ ನಡೆದ ಉಪ ಚುನಾವಣೆಯಲ್ಲಿ ಯು.ಟಿ. ಖಾದರ್ (46,271) ಬಿಜೆಪಿಯ ಚಂದ್ರಶೇಖರ ಉಚ್ಚಿಲ (38,239)ರನ್ನು ಸೋಲಿಸಿದ್ದರು. 2008ರ ಚುನಾವಣೆಯಲ್ಲಿ ಖಾದರ್ (50,718) ಬಿಜೆಪಿಯ ಪದ್ಮನಾಭ ಕೊಟ್ಟಾರಿ (43,669) ವಿರುದ್ಧ ಜಯ ಸಾಧಿಸಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಜನಾರ್ದನ ಪೂಜಾರಿ ಸೋತಿದ್ದರೂ ಈ ಕ್ಷೇತ್ರದಲ್ಲಿ 15,358 ಮತಗಳ ಮುನ್ನಡೆ ಸಾಧಿಸಿದ್ದರು.
2013ರ ವಿಧಾನಸಭಾ ಚುನಾ ವಣೆಯಲ್ಲಿ ಕಾಂಗ್ರೆಸ್‌ನ ಖಾದರ್ (69,450) ಬಿಜೆಪಿಯ ಚಂದ್ರಹಾಸ ಉಳ್ಳಾಲ (40,339)ರನ್ನು ಪರಾಭವಗೊಳಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಳಿನ್ ಕುಮಾರ್ ಗೆದ್ದರೂ ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಅವರು ನಳಿನ್‌ಗಿಂತ 13,035 ಮತಗಳ ಮುನ್ನಡೆ ಪಡೆದಿದ್ದರು. 2018ರ ಚುನಾವಣೆಯಲ್ಲಿ ಯು.ಟಿ. ಖಾದರ್ (80,813) ಅವರು ಸಂತೋಷ್ ಕುಮಾರ್ ರೈ ಬೋಳಿಯಾರು (61,074) ವಿರುದ್ಧ 19,739 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ವಿಶೇಷವೆಂದರೆ 2018ರ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7ರಲ್ಲಿ ಬಿಜೆಪಿ ಗೆದ್ದರೂ ಮಂಗಳೂರು ಕ್ಷೇತ್ರವನ್ನು ಕೈವಶದಿಂದ ಕಮಲದ ವಶಕ್ಕೆ ಪಡೆಯಲು ಸಾಧ್ಯವಾಗಿಲ್ಲ.
ಮುನ್ನಡೆಗೆ ಬಿಜೆಪಿ ಯತ್ನ
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಸಾಧನೆಯ ಗುರಿ ಹೊಂದಿರುವ ನಳಿನ್ ಕುಮಾರ್ ಕಟೀಲು ಅವರಿಗೆ ಮಂಗಳೂರು ಕ್ಷೇತ್ರದಲ್ಲಿ ಈ ಬಾರಿಯಾದರೂ ಮುನ್ನಡೆ ಒದಗಿಸಿ ಕೊಡಬೇಕೆಂಬುದು ಬಿಜೆಪಿಯ ನಡೆ ಆಗಿದ್ದು, ಬಿಜೆಪಿ ಕಾರ್ಯಕರ್ತರು ಕಾರ್ಯೋನ್ಮುಖರಾಗಿದ್ದಾರೆ. ಚುನಾವಣ ಪ್ರಚಾರ ಕಚೇರಿಯನ್ನು ಕ್ಷೇತ್ರದಲ್ಲಿ ತೆರೆದು ಉತ್ಸುಕತೆಯಿಂದ ಕೆಲಸ ಮಾಡುತ್ತಿದ್ದಾರೆ.
ಪರಂಪರೆ ಉಳಿಸುವುದು ಕಾಂಗ್ರೆಸ್ ಗುರಿ
ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಏಕೈಕ ಕ್ಷೇತ್ರ ಇದು. ಈ ಕ್ಷೇತ್ರದಿಂದ ಆಯ್ಕೆಯಾಗಿರುವ ಯು.ಟಿ. ಖಾದರ್ ಪ್ರಸ್ತುತ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಸಚಿವರೂ ಆಗಿದ್ದಾರೆ. ಎರಡು ದಶಕಗಳ ಮುನ್ನಡೆ ಕಾಯ್ದುಕೊಂಡು ಬಂದಿರುವ ಕಾಂಗ್ರೆಸ್ ಮತ್ತು ಸಚಿವ ಯು.ಟಿ. ಖಾದರ್ ಅವರಿಗೆ ಈ ಲೋಕಸಭಾ ಚುನಾವಣೆಯು ಮಾಡು ಇಲ್ಲವೇ ಮಡಿ ಎಂಬಂತಹುದು. ಹೀಗಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾರಮ್ಯಉಳಿಸಲು ಸಚಿವರು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಬಾರಿ ಹೊಸ ಮುಖ, ಯುವ ನಾಯಕ ಮಿಥುನ್ ರೈ ಅವರನ್ನು ಕಣಕ್ಕಿಳಿಸಿರುವುದು ವರವಾಗಲಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಭಾವಿಸಿದ್ದು, ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ.
ಹಿಲರಿ ಕ್ರಾಸ್ತಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.