ಸಂಕಲಕರಿಯ ಸೇತುವೆಯ ಆತಂಕ ತಾತ್ಕಾಲಿಕ ದೂರ
Team Udayavani, Apr 3, 2019, 6:30 AM IST
ಬೆಳ್ಮಣ್: ಕಳೆದ ಜನವರಿಯಲ್ಲಿ ಸಂಕಲಕರಿಯ ಸೇತುವೆಯ ತಡೆಬೇಲಿ ಮುರಿದು ಬೊಲೆರೋ ದುರಂತ ನಡೆದು ಪ್ರಾಣಹಾನಿಯಾದ ಬಳಿಕ ದುರಸ್ತಿ ಕಾಣದೆ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು ಕಳೆದ ವಾರ ಉದಯವಾಣಿ ಸಚಿತ್ರ ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತ ಲೋಕೋಪಯೋಗಿ ಇಲಾಖೆ ಸೇತುವೆಗೆ ಎಚ್ಚರಿಕೆ ಫಲಕ ಹಾಗೂ ಸೇತುವೆಯ ಪ್ರಯಾಣ ಪ್ರಾರಂಭವಾಗುವ ಮುನ್ನ ರಸ್ತೆಯ ಇಕ್ಕೆಲಗಳಿಗೆ ತಡೆ ಬೇಲಿ ಅಳವಡಿಸಿ ತಾತ್ಕಾಲಿಕ ಆತಂಕ ದೂರ ಮಾಡಿದೆ.
ಕಳೆದ ಜನವರಿ 12ರಂದು ಸಂಕಲಕರಿಯ ಶಾಂಭವಿ ನದಿ ಸೇತುವೆಯ ಬದಿಗೆ ಡಿಕ್ಕಿಹೊಡೆದು ಬೊಲೆರೋ ಜೀಪು ಪಲ್ಟಿಯಾಗಿ ನದಿಗೆ ಬಿದ್ದು ಜೀವ ಹಾನಿಯಾಗಿ ಮೂರು ತಿಂಗಳಾಗಿದ್ದರೂ ಎಚ್ಚೆತ್ತುಕೊಳ್ಳದ ಲೋಕೋಪಯೋಗಿ ಇಲಾಖೆ ಸೇತುವೆಗೆ ಕೇವಲ ಸುಣ್ಣ ಬಣ್ಣ ಬಳಿದಿದ್ದು ಬಿಟ್ಟರೆ ಇನ್ನೂ ಇಕ್ಕೆಲಗಳಿಗೆ ತಡೆಗೋಡೆ ನಿರ್ಮಿಸಿರಲಿಲ್ಲ. ಈ ಬಗ್ಗೆ ಉದಯವಾಣಿ ಕಳೆದ ವಾರ ಜನಪರ ಕಾಳಜಿ ವಿಭಾಗದಲ್ಲಿ ಸಚಿತ್ರ ವರದಿ ಪ್ರಕಟಿಸಿತ್ತು.
65 ವರ್ಷಗಳ ಹಿಂದಿನ ಸೇತುವೆ ಕಾಯಕಲ್ಪಕ್ಕಾಗಿ ಕಾಯುತ್ತಿದೆ
ಸುಮಾರು 65 ವರ್ಷಗಳ ಹಿಂದಿನ ಈ ಹಳೇ ಸೇತುವೆಗೆ ಈ ಹಿಂದೆಯೂ ತಡೆಗೋಡೆ ಇರಲಿಲ್ಲ. ಇದೀಗ ಈ ಹಳೆಯ ಸೇತುವೆ ಬಿರುಕು ಬಿಟ್ಟಿದ್ದು ಕಾಯಕಲ್ಪಕ್ಕಾಗಿ ಕಾಯುತ್ತಿದೆ. ಈ ಬಗ್ಗೆ ಇಲಾಖೆ ಗಮನ ಹರಿಸಬೇಕೆಂದು ಜನರು ಆಗ್ರಹಿಸಿದ್ದಾರೆ.
ಈಗಾಗಲೇ ಉಡುಪಿನ ಕಡೆಯಿಂದ ಎಚ್ಚರಿಕೆಯ ತಡೆಬೇಲಿ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲಾಗಿದ್ದುಮುಂದೆ ಮಂಗಳೂರು ಕಡೆಯಿಂದಲೂ ಈ ಪ್ರಕ್ರಿಯೆ ನಡೆಯಲಿ ಎಂದು ಈ ಭಾಗದ ಜನರ ಆಗ್ರಹ. ಈವರೆಗೆ ಅರೆಬರೆ ವ್ಯವಸ್ಥೆಯಾಗಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಸರಿ ಹೋದೀತೆಂಬ ನಿರೀಕ್ಷೆ ಈ ಭಾಗದ ಜನರದ್ದು.
ಗಡಿಯ ಬಗ್ಗೆ ಗಡಿಬಿಡಿ
ಈ ಸೇತುವೆ ಮಂಗಳೂರು ಮತ್ತು ಉಡುಪಿಯನ್ನು ಬೇರ್ಪಡಿಸುವ ಗಡಿಯಾದ್ದರಿಂದ ಇಲಾಖೆಗಳ ನಡುವೆ ಒಂದಿಷ್ಟು ಗಡಿಯ ಬಗ್ಗೆ ಗಡಿಬಿಡಿಯೂ ಇದೆ. ಜನವರಿಯ ದುರಂತದಲ್ಲಿ ಕಂದಾಯ ಇಲಾಖೆಯ ಸಹಕಾರದಿಂದ ಸೇತುವೆಯನ್ನು ಅಳೆದ ಬಳಿಕ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯವರು ಕೇಸು ಸ್ವೀಕರಿಸಿದ್ದರು. ದುರಂತದಲ್ಲಿ ಮಡಿದವರಿಗೆ ವಿಮಾ ಯೋಜನೆ ಪಡೆಯುವಲ್ಲಿ ತೊಂದರೆಯಾಗುವುದು ಬೇಡ ಎನ್ನುವ ಉದ್ದೇಶವೂ ಪೊಲೀಸರಲ್ಲಿದ್ದುದರಿಂದ ಈ ಚರ್ಚೆ ಸಹಜವಾಗಿಯೇ ನಡೆದು ಅಂದು ತಾರ್ಕಿಕ ಅಂತ್ಯ ಕಂಡಿತ್ತು. ಆದರೆ ಇದೀಗ ಬಿರುಕು ಬಿಟ್ಟ ಈ ಸೇತುವೆಗೆ ಕಾಯಕಲ್ಪ ಒದಗಿಸಬೇಕಾಗಿದೆ. ಸೇತುವೆಯ ತಡೆ ಕಂಬ ಮುರಿದ ಬಗ್ಗೆ ದುರಸ್ಥಿಗಾಗಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಿಂದಲೂ ಲೋಕೋಪಯೋಗಿ ಇಲಾಖೆಗೆ ಮನವಿ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.