ಇ-ಮೇಲ್ ಮೂಲಕ ಮತದಾನ: ಅರ್ಜಿ ಇತ್ಯರ್ಥ
Team Udayavani, Apr 3, 2019, 6:00 AM IST
ಬೆಂಗಳೂರು: ಸಾರ್ವತ್ರಿಕ ಚುನಾವಣೆಗಳಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಇ-ಮೇಲ್ ಮೂಲಕ ಮತದಾನ ಮಾಡಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿದ ಹೈಕೋರ್ಟ್, ಈ ಸಂಬಂಧ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುವಂತೆ ಅರ್ಜಿದಾರರಿಗೆ ಅವಕಾಶ ನೀಡಿತು. ಈ ಕುರಿತು ಮಿಟ್ಟಿ ನರಸಿಂಹಮೂರ್ತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮಂಗಳವಾರ ಹಂಗಾಮಿ ಮಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಪ್ರಾಥಮಿಕ ವಾದ ಆಲಿಸಿದ ಬಳಿಕ, ಈ ವಿಷಯದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡುವುದಿಲ್ಲ. ನಿಮ್ಮ ಬೇಡಿಕೆ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿ, ಅದು ಪರಿಶೀಲಿಸಲಿದೆ. ಹಾಗಾಗಿ, ಅರ್ಜಿ ವಾಪಸ್ ಪಡೆಯಿರಿ, ಇಲ್ಲದಿದ್ದರೆ ದಂಡ ವಿಧಿಸಬೇಕಾಗುತ್ತದೆ ಎಂದು
ಅರ್ಜಿದಾರರಿಗೆ ನ್ಯಾಯಪೀಠ ಎಚ್ಚರಿಕೆ ಸಹ ನೀಡಿತು. ಇದಕ್ಕೆ, ಅರ್ಜಿ ವಾಪಸ್ ಪಡೆಯಲು ಅರ್ಜಿದಾರರು ಸಮ್ಮತಿಸಿದರು. ಬಳಿಕ ಚುನಾವಣಾ ಆಯೋಗದ ಮುಂದೆ ಬೇಡಿಕೆ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ನೀಡಿದ ನ್ಯಾಯಪೀಠ ಅರ್ಜಿಯನ್ನು ಇತ್ಯರ್ಥಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.