ಪತ್ನಿ ಕೊಂದು ಮಹಡಿಯಿಂದ ಜಿಗಿದು ಆತ್ಮಹತ್ಯೆ
Team Udayavani, Apr 3, 2019, 3:00 AM IST
ಬೆಂಗಳೂರು: ಅನಾರೋಗ್ಯ ಸಮಸ್ಯೆ ಹಾಗೂ ಕೌಟುಂಬಿಕ ವಿಚಾರಕ್ಕೆ ಟಾವೆಲ್ಸ್ ಏಜೆನ್ಸಿ ಮಾಲೀಕನೊಬ್ಬ ಡೆತ್‌ನೋಟ್ ಬರೆದಿಟ್ಟು ವ್ಯಾಯಾಮ ಮಾಡುವ ಡಂಬಲ್ಸ್‌ನಿಂದ ಪತ್ನಿಯನ್ನು ಭೀಕರವಾಗಿ ಕೊಲೆಗೈದು ಬಳಿಕ ತಾನೂ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸದಾಶಿವನಗರದ ಆರ್‌ಎಂವಿ ಎಕ್ಸ್‌ಟೆನ್ಷನ್‌ನಲ್ಲಿರುವ ದಿ ಅನೆಕ್ಸ್ ಸೈಕಾನ್ ಪೊಲಾರಿಸ್ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಲಕ್ನೋ ಮೂಲದ ಅತುಲ್ ಉಪಾಧ್ಯ(55) ಮೃತವ್ಯಕ್ತಿ, ಇದಕ್ಕೂ ಮೊದಲು ತನ್ನ ಪತ್ನಿ ಮಮತಾ ಉಪಾಧ್ಯ(51) ಕೊಂದಿದ್ದಾನೆ. ಬಳಿಕ ಆರೇಳು ವರ್ಷಗಳಿಂದ ಸಾಕಿದ ಲ್ಯಾಬ್ರಡಾರ್ ತಳಿಯ ನಾಯಿಯನ್ನು ಆರನೇ ಮಹಡಿಯಿಂದ ಬಿಸಾಡಿ ಹತ್ಯೆಗೈದಿದ್ದಾರೆ.
ಉಪಾಧ್ಯ ದಂಪತಿ 25 ವರ್ಷಗಳಿಂದ ನಗರದಲ್ಲಿದ್ದು, ಕಳೆದ ಆರೇಳು ವರ್ಷಗಳಿಂದ ಸದಾಶಿವನಗರದಲ್ಲಿರುವ ಆರ್‌ಎಂವಿ ಎಕ್ಸ್‌ಟೆನ್ಷನ್‌ನಲ್ಲಿರುವ ದಿ ಅನೆಕ್ಸ್ ಸೈಕಾನ್ ಪೊಲಾರಿಸ್ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಲ್ಲಿರುವ ಫ್ಲ್ಯಾಟ್‌ನಲ್ಲಿ ಪತ್ನಿ, ಪ್ರೀತಿಯ ನಾಯಿ ಹಾಗೂ ಅತುಲ್ ಉಪಾಧ್ಯ ಅವರ ಸಹೋದರನ 21 ವರ್ಷದ ಪುತ್ರ ಕೂಡ ವಾಸವಿದ್ದರು. ಆತ ನಗರದಲ್ಲಿ ಎಲ್‌ಎಲ್‌ಬಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದರು.
ಪತ್ನಿ ಕೊಲೆ, ಆತ್ಮಹತ್ಯೆ: ಹಲಸೂರಿನಲ್ಲಿ ಟ್ರಾವೆಲ್ಸ್ ಏಜೆನ್ಸಿ ಹೊಂದಿರುವ ಅತುಲ್ ಉಪಾಧ್ಯ ಪ್ರತಿನಿತ್ಯ ಬೆಳಗ್ಗೆ 9.30ರ ಸುಮಾರಿಗೆ ಮನೆಯಿಂದ ಹೊರಡುತ್ತಿದ್ದರು. ಆದರೆ, ಮಂಗಳವಾರ 10 ಗಂಟೆಯಾದರೂ ಮನೆಯಲ್ಲೇ ಇದ್ದರು. ಈ ವೇಳೆ ಪತ್ನಿ ಮಮತಾ ಜತೆ ಕೌಟುಂಬಿಕ ವಿಚಾರವಾಗಿ ವಾಗ್ವಾದ ನಡೆಸಿದ್ದಾರೆ.
ಇದು ವಿಕೋಪಕ್ಕೆ ಹೋಗಿದ್ದು, ಆಗ ಅತುಲ್ ಅಲ್ಲೇ ಇದ್ದ ಡಂಬಲ್ಸ್‌ನಿಂದ ಪತ್ನಿ ಮಮತಾ ಅವರ ತಲೆ ಬಲಭಾಗಕ್ಕೆ ಬಲವಾಗಿ ನಾಲ್ಕೈದು ಬಾರಿ ಹೊಡೆದಿದ್ದಾರೆ. ಪರಿಣಾಮ ಮಮತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ ತಾನೂ ಸಾಕಿದ ಪ್ರೀತಿಯ ನಾಯಿಯನ್ನು ಆರನೇ ಮಹಡಿಗೆ ಕರೆದೊಯ್ದು ಮೇಲಿಂದ ಬಿಸಾಡಿ ಹತ್ಯೆಗೈದಿದ್ದಾರೆ. ಬಳಿಕ ಚಪ್ಪಲಿ ಬಿಸಾಡಿ ತಾನೂ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿದ್ದ ಶಬ್ದ ಕೇಳಿದ ಭದ್ರತಾ ಸಿಬ್ಬಂದಿ ಹಾಗೂ ಅಪಾರ್ಟ್‌ಮೆಂಟ್‌ನ ಇತರೆ ನಿವಾಸಿಗಳು ಬಂದು ನೋಡಿದಾಗ ಅತುಲ್ ಮೃತಪಟ್ಟಿರುವುದು ಕಂಡು ಬಂದಿದೆ. ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಆಧಾರದ ಮೇಲೆ 11 ಗಂಟೆ ಸುಮಾರಿಗೆ ಸ್ಥಳಕ್ಕೆ ಧಾವಿಸಿದ ಸದಾಶಿವನಗರ ಪೊಲೀಸರು ಸ್ಥಳ ಪರಿಶೀಲಿಸಿ,
ಅತುಲ್ ಫ್ಲ್ಯಾಟ್‌ಗೆ ಹೋಗಿ ನೋಡಿದಾಗ ಪತ್ನಿಯನ್ನು ಬರ್ಬರವಾಗಿ ಕೊಂದಿರುವುದು ಬೆಳಕಿಗೆ ಬಂದಿದೆ. ನಂತರ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಬಂದ ವಿಧಿ ವಿಜ್ಞಾನ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಕೊಠಡಿಯಲ್ಲಿದ್ದ ಡೆತ್‌ನೋಟ್ ಹಾಗೂ ಘಟನೆಗೆ ಸಂಬಂಧಿಸಿದ ಕೆಲ ಸಾಕ್ಷ್ಯಗಳನ್ನು ಸಂಗ್ರಹಿಸಿದರು.
ದುರ್ಘಟನೆ ವೇಳೆ ಅತುಲ್ ಉಪಾಧ್ಯ ಸಹೋದರನ ಪುತ್ರ ಮನೆಯಲ್ಲಿ ಇರಲಿಲ್ಲ. ಬೆಳಗ್ಗೆ ಒಂಭತ್ತು ಸುಮಾರಿಗೆ ಕಾಲೇಜಿಗೆ ತೆರಳಿದ್ದರು. ಹೀಗಾಗಿ ಆತನಿಗೆ ಘಟನೆಗೆ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ. ಮಮತಾ ಉಪಾಧ್ಯಯ ಸಹೋದರಿ ಅಮೆರಿಕಾದಲ್ಲಿ ವಾಸವಾಗಿದ್ದು, ಅತುಲ್ ಸಂಬಂಧಿಕರು ಮುಂಬೈನಲ್ಲಿ ನೆಲೆಸಿದ್ದಾರೆ. ಇಬ್ಬರಿಗೂ ಮಾಹಿತಿ ನೀಡಲಾಗಿದೆ. ಬುಧವಾರ ಬೆಳಗ್ಗೆ ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಸದಾಶಿವನಗರ ಪೊಲೀಸರು ಹೇಳಿದರು.
ಡೆತ್‌ನೋಟ್‌ನಲ್ಲಿ ಏನಿದೆ?: ಕೃತ್ಯಕ್ಕೂ ಮೊದಲು ಡೆತ್‌ನೋಟ್ ಬರೆದಿಟ್ಟಿರುವ ಅತುಲ್ ಉಪಾಧ್ಯ, ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದು, ನೋವು ತಾಳಲು ಸಾಧ್ಯವಾಗುತ್ತಿಲ್ಲ. ನಮ್ಮನ್ನು ನೋಡಲು ಯಾರೂ ಇರಲಿಲ್ಲ. ಹೀಗಾಗಿ ಈ ರೀತಿ ಮಾಡುತ್ತಿದ್ದೇವೆ. ಸ್ವಾರ್ಥಕ್ಕಾಗಿ ಈ ಕೃತ್ಯ ಎಸಗಲಿಲ್ಲ ಎಂದು ಉಲ್ಲೇಖೀಸಿದ್ದಾರೆ. ಆದರೆ, ಪತಿ, ಪತ್ನಿ ಇಬ್ಬರಲ್ಲಿ ಯಾರು ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದರು ಎಂಬುದು ತಿಳಿದಿಲ್ಲ. ಮರಣೋತ್ತರ ಪರೀಕ್ಷೆ ಹಾಗೂ ತನಿಖೆ ಬಳಿಕ ಸ್ಪಷ್ಟತೆ ಸಿಗಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಬಿಟ್ಟಿರಲಾರದೆ ಪ್ರೀತಿಯ ನಾಯಿ ಹತ್ಯೆ!: ಇದೊಂದು ಅಪರೂಪದ ಘಟನೆ. ಪತ್ನಿಯನ್ನು ಬರ್ಬರವಾಗಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಅತುಲ್ ಉಪಾಧ್ಯ, ಕಳೆದ ಆರೇಳು ವರ್ಷಗಳಿಂದ ಪ್ರೀತಿಯಿಂದ ಸಾಕಿರುವ ಲ್ಯಾಬ್ರಡಾರ್ ತಳಿಯ ನಾಯಿಯನ್ನು ಮಹಡಿಯಿಂದ ಬಿಸಾಡಿ ಕೊಂದಿದ್ದಾರೆ.
ಮೂಕ ಪ್ರಾಣಿಯನ್ನು ಅಮಾನವೀಯವಾಗಿ ಕೊಂದಿರುವ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ, ಅಪಾರ್ಟ್‌ಮೆಂಟ್ ನಿವಾಸಿಗಳು ಹೇಳುವ ಪ್ರಕಾರ, ಅತುಲ್ ಉಪಾಧ್ಯ ನಾಯಿಯನ್ನು ಮಗುವಿನಂತೆ ಪ್ರೀತಿಸುತ್ತಿದ್ದರು. ಅದಕ್ಕೆ ಒಂದು ಸಣ್ಣ ನೋವಾದರೂ ಬಹಳ ನೊಂದುಕೊಳ್ಳುತ್ತಿದ್ದರು. ಹೀಗಾಗಿ ತಾವು ಮೃತಪಟ್ಟ ಬಳಿಕ ನಾಯಿ ಅನಾಥವಾಗುತ್ತದೆ ಎಂದು ಭಾವಿಸಿ ಅದನ್ನು ಕೊಂದಿರಬಹುದು ಎಂದು ಹೇಳಿರುವುದಾಗಿ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.