ಕೈರಾನಾ: ಬಿಜೆಪಿಗೆ “ಮೈತ್ರಿಯೇ’ ಹೈರಾಣ


Team Udayavani, Apr 4, 2019, 6:00 AM IST

c-14

ಉತ್ತರ ಪ್ರದೇಶದ ಕೈರಾನಾ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಎಸ್ಪಿ ಅಭ್ಯರ್ಥಿ, ಹಾಲಿ ಸಂಸದೆ ತಬಸ್ಸುಂ ಹಸನ್‌ ಹಾಗೂ ಬಿಜೆಪಿ ಅಭ್ಯರ್ಥಿ ಪ್ರದೀಪ್‌ ಚೌಧರಿ ನಡುವೆ ನೇರ ಸ್ಪರ್ಧೆ ಇದೆ. 2014ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಹುಕುಮ್‌ ಸಿಂಗ್‌ ಬಿಜೆಪಿ ಸಂಸದರಾಗಿದ್ದರು. ಕಳೆದ ವರ್ಷ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆ ಯಲ್ಲಿ ಎಸ್ಪಿ, ಬಿಎಸ್ಪಿ ಬೆಂಬಲಿತ ರಾಷ್ಟ್ರೀಯ ಲೋಕದಳದಿಂದ (ಆರ್‌ಎಲ್‌ಡಿ )ಸ್ಪರ್ಧಿಸಿದ್ದ ತಬಸ್ಸುಂ ಹಸನ್‌ ಗೆಲುವು ಸಾಧಿಸಿದ್ದರು. ಬಿಜೆಪಿಯಿಂದ ಕಣಕ್ಕಿಳಿದಿದ್ದ ಹುಕುಮ್‌ ಸಿಂಗ್‌ ಪುತ್ರಿ ಮ್ರಿಗಾಂಕಾ ಸಿಂಗ್‌ 44 ಸಾವಿರ ಮತಗಳ ಅಂತರದಿಂದ ಸೋಲನ್ನಪ್ಪಿದ್ದರು.

ಎಸ್ಪಿ ಪ್ಲಸ್‌ ಪಾಯಿಂಟ್‌: ಉಪಚುನಾವಣೆಯಲ್ಲಿ ಆರ್‌ಎಲ್‌ಡಿಯಿಂದ ಸಂಸದೆಯಾಗಿದ್ದ ತಬಸ್ಸುಂ ಈ ಬಾರಿ ಅಖೀಲೇಶ್‌ರ ಎಸ್ಪಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಉಪಚುನಾವಣೆಯಲ್ಲಿ ಪರಾಭವಗೊಂಡಿದ್ದ ಮ್ರಿಗಾಂಕಾ ಸಿಂಗ್‌ ಬದಲಿಗೆ ಎರಡು ಬಾರಿ ಶಾಸಕರಾಗಿದ್ದ ಪ್ರದೀಪ್‌ ಚೌಧರಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಉ.ಪ್ರದೇಶದಲ್ಲಿ ಎಸ್ಪಿ, ಬಿಎಸ್ಪಿ, ಆರ್‌ಎಲ್‌ಡಿ ಹೊಂದಾಣಿಕೆ ಮಾಡಿಕೊಂಡು ಎಸ್ಪಿಗೆ ಬೆಂಬಲ ಘೋಷಿಸಿವೆ. ಇದು ಬಿಜೆಪಿಗೆ ಕಠಿಣ ಸವಾಲಾಗಿ ಪರಿಣಮಿಸಿದೆ. ಕಳೆದ ಬಾರಿ ಎಸ್ಪಿ, ಬಿಎಸ್ಪಿ, ಕಾಂಗ್ರೆಸ್‌ ಮತವಿಭಜನೆಯಿಂದ ಅಭೂತಪೂರ್ವ ಜಯ ಸಾಧಿಸಿದ್ದ ಕಮಲ ಪಡೆಗೆ ಮೋದಿ ಅಲೆ ಕ್ಷೀಣಿಸಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತಗಳ ನಿರ್ಣಾಯವಾಗಿರುವುದಿಂದ ಮುಸ್ಲಿಂ ಅಭ್ಯರ್ಥಿಗೆ ನೆರವಾಗಲಿದೆ.

ಬಿಜೆಪಿ ಪ್ಲಸ್‌ ಪಾಯಿಂಟ್‌: ಕೈರಾನಾ ಕ್ಷೇತ್ರವು ಮೊದಲಿಗೆ ಬಿಜೆಪಿ ಹಿಡಿತದಲ್ಲಿತ್ತು. ಹುಕುಮ್‌ ಸಿಂಗ್‌ ನಿಧನದಿಂದ ಪಕ್ಷಕ್ಕೆ ಭಾರೀ ಹೊಡೆತ ಬಿದ್ದಿದೆ. ಇದರ ಜೊತೆಗೆ ಬಿಎಸ್ಪಿ-ಎಸ್ಪಿ, ಆರ್‌ಎಲ್‌ಡಿ ದೋಸ್ತಿಯಾಗಿವೆ. ಇದಕ್ಕೆ ಪ್ರತಿತಂತ್ರ ಹಣೆದಿರುವ ಬಿಜೆಪಿಯು, ಎಸ್ಪಿಯಿಂದ 6 ಬಾರಿ ಶಾಸಕರಾಗಿದ್ದ ಮಾಜಿ ಸಚಿವ ಚೌಧರಿ ವಿರೇಂದ್ರ ಸಿಂಗ್‌ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದೆ. ಇವರು ಗುಜ್ಜರ್‌ ಸಮುದಾದ ಪ್ರಬಲ ನಾಯಕರಾಗಿದ್ದಾರೆ. ಹುಕುಮ್‌ ಕೂಡ ಗುಜ್ಜರ್‌ಗೆ ಸೇರಿದ್ದರು.

ಜಾತಿ ಲೆಕ್ಕಾಚಾರ: ಕೈರಾನಾದಲ್ಲಿ 10 ಲಕ್ಷ ಜನಸಂಖ್ಯೆ ಪೈಕಿ ಮುಸ್ಲಿಂ-5.8 ಲಕ್ಷ, ದಲಿತ-2.5 ಲಕ್ಷ, ಜಾಟ್‌-1.7 ಲಕ್ಷ, ಗುಜ್ಜಾರ್‌-1.55 ಲಕ್ಷ ಮಂದಿ ಇದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಂ ಮತಗಳು ಗಣನೀಯವಾಗಿವೆ. ಹಿಂದುಗಳನ್ನು ಬಲವಂತವಾಗಿ ಹೊರದಬ್ಬಲಾಗುತ್ತಿದೆ, ಕೈರಾನಾ “ಮಿನಿ ಕಾಶ್ಮೀರ’ ಆಗುತ್ತಿದೆ ಎಂಬ ಅಪವಾದಗಳು ಕೇಳಿ ಬಂದಿವೆ. ಈ ಕುರಿತು ಹಿಂದೆ ಹುಕುಮ್‌ ಸಿಂಗ್‌ ಅವರು ಅಂಕಿ ಅಂಶಗಳೊಂದಿಗೆ ದಾಖಲೆ ಬಿಡುಗಡೆ ಮಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.