ಮತದಾನ ಜಾಗೃತಿಗೆ ಫ್ಲಾಷ್‌ ಮಾಬ್‌!


Team Udayavani, Apr 4, 2019, 3:00 AM IST

bbmp3

ಬೆಂಗಳೂರು: ನಗರದ ಜನತೆಗೆ ಮತದಾನ ಜಾಗೃತಿ ಮೂಡಿಸಲು ಬಿಬಿಎಂಪಿ ಫ್ಲಾಷ್‌ ಮಾಬ್‌ ಎಂಬ ವಿಭಿನ್ನ ಕಾರ್ಯಕ್ರಮ ರೂಪಿಸಿದೆ.

ಮತದಾನ ಕುರಿತು ಬೀದಿ ನಾಟಕ, ಧ್ಯೇಯ ಗೀತೆ, ಭಿತ್ತಿಪತ್ರದಂತಹ ಸಾಂಪ್ರದಾಯಿಕ ಪ್ರಚಾರ ವಿಧಾನಗಳೊಂದಿಗೆ ಪಾಶ್ಚಿಮಾತ್ಯ ಶೈಲಿಯ ಪ್ರಚಾರದ ಚಟುವಟಿಕೆಗಳನ್ನು ಪಾಲಿಕೆ ನಡೆಸಲಿದ್ದು, ಏ.6 ಮತ್ತು 7ರಂದು ಸಂಜೆ 4ರಿಂದ 7 ಗಂಟೆವರೆಗೆ, ಬಿಎಂಎಸ್‌ ತಾಂತ್ರಿಕ ವಿದ್ಯಾಲಯದ ಸಹಯೋಗದಲ್ಲಿ ಫ್ಲಾಷ್‌ ಮಾಬ್‌ ಹಮ್ಮಿಕೊಳ್ಳಲಾಗಿದೆ.

ಈ ತಿಳಿವಳಿಕೆ ಕಾರ್ಯಕ್ರಮದಲ್ಲಿ ಬಿಎಂಎಸ್‌ ತಾಂತ್ರಿಕ ವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಚರ್ಚ್‌ ಸ್ಟ್ರೀಟ್‌, ಕೋರಮಂಗಲದ ಫೋರಂ ಮಾಲ್‌ ಹಾಗೂ ಜಯನಗರ 4ನೇ ಬಡಾವಣೆಯಲ್ಲಿರುವ ಶಾಪಿಂಗ್‌ ಕಾಂಪ್ಲೆಕ್ಸ್‌ನಲ್ಲಿ ವಿದ್ಯಾರ್ಥಿಗಳು ಫ್ಲಾಷ್‌ ಮಾಬ್‌ ಅಡಿ ಪ್ರಚಾರದ ಚಟುವಟಿಕೆ ನಡೆಸಲಿದ್ದಾರೆ.

ಏ.12ರಿಂದ 14ವರೆಗೆ ಬಿಎಂಎಸ್‌ ತಾಂತ್ರಿಕ ವಿದ್ಯಾಲಯದ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ “ಉತ್ಸವ’ದ ಅಂಗವಾಗಿ ಈ ಫ್ಲಾಷ್‌ ಮಾಬ್‌ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಪ್ರತಿ ವರ್ಷ ಉತ್ಸವದ ಅಂಗವಾಗಿ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿತ್ತು. ಈ ಬಾರಿ ಚುನಾವಣೆ ಇರುವುದರಿಂದ ಫ್ಲಾಷ್‌ ಮಾಬ್‌ ಮೂಲಕ ಜನರಿಗೆ ಮತದಾನ ಅರಿವು ಮೂಡಿಸಲಾಗುತ್ತಿದೆ ಎಂದು ವಿದ್ಯಾಲಯದ ಎನ್‌ಎಸ್‌ಎಸ್‌ ಯೋಜನಾ ಅಧಿಕಾರಿ ಹಡಗಲಿ ಅಶೋಕ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಫ್ಲಾಷ್‌ ಮಾಬ್‌ನಲ್ಲಿ ಏನಿರುತ್ತೆ?: ಇಲ್ಲಿ, ಪ್ರಚಾರ ಗೀತೆ ಹಾಗೂ 2 ದೇಶ ಭಕ್ತಿ ಗೀತೆಗಳಿಗೆ ವಿದ್ಯಾರ್ಥಿಗಳು ನೃತ್ಯ ಮಾಡಲಿದ್ದಾರೆ. ಜತೆಗೆ, ರಾಜ್ಯದ ಚುನಾವಣಾ ಗೀತೆ ಎಂದೇ ಬಿಂಬಿತವಾಗಿರುವ “ಮಾಡಿ ಮಾಡಿ ಮತದಾನ’ ಗೀತೆಗೂ ಹೆಜ್ಜೆ ಹಾಕಲಿದ್ದಾರೆ. ಏ.15ರೊಳಗಾಗಿ ನಗರದಲ್ಲಿರುವ ವಿವಿಧ ಮಾಲ್‌ಗ‌ಳಲ್ಲಿ ಫ್ಲಾಷ್‌ ಮಾಬ್‌ ನಡೆಸಲು ಪಾಲಿಕೆ ಚಿಂತನೆ ನಡೆಸಿದೆ.

ಫ್ಲಾಷ್‌ ಮಾಬ್‌ ಎಂದರೇನು?: ಜನಸಂದಣಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಜನರು ತಮ್ಮ ಪಾಡಿಗೆ ತಾವು ಚಟುವಟಿಕೆಯಲ್ಲಿ ತೊಡಗಿರುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಸಂಗೀತವೊಂದಕ್ಕೆ ಒಬ್ಬ ವ್ಯಕ್ತಿ ನೃತ್ಯ ಮಾಡಲು ಆರಂಭಿಸುತ್ತಾನೆ. ಸ್ವಲ್ಪ ಸಮಯದ ನಂತರ ಮತ್ತೂಬ್ಬ ವ್ಯಕ್ತಿ ನೃತ್ಯ ಮಾಡಲು ಆರಂಭಿಸುತ್ತಾನೆ. ಹೀಗೆ ಒಬ್ಬೊಬ್ಬರಾಗಿ ನೃತ್ಯ ಮಾಡಲು ಆರಂಭಿಸಿ ಒಂದು ತಂಡವಾಗಿ ಬದಲಾಗುವುದೇ ಫ್ಲಾಷ್‌ ಮಾಬ್‌.

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.