ಸದ್ಯಕ್ಕಿಲ್ಲ ಮಹಾಭಾರತ
ಉತ್ತಮ ಸ್ಕ್ರಿಪ್ಟ್ ಸಿಕ್ಕರೆ ಸಿನೆಮಾ ನಿರ್ಮಾಣ: ಶೆಟ್ಟಿ
Team Udayavani, Apr 4, 2019, 6:00 AM IST
ದುಬಾೖ: ದೇಶದಲ್ಲೇ ಮೊದಲ ಬಾರಿಗೆ ಬೃಹತ್ ಬಜೆಟ್ನ ಸಿನೆಮಾ ಎಂದೇ ಹೆಸರಾಗಿದ್ದ ಮಹಾಭಾರತ ಸಿನೆಮಾ ನಿರ್ಮಾಣ ಪ್ರಕ್ರಿಯೆ ಸ್ಥಗಿತ ಗೊಂಡಿದೆ. ನಿರ್ದೇಶಕರು ಮತ್ತು ಚಿತ್ರ ಕಥೆಗಾರರ ನಡುವಿನ ಸಂಘರ್ಷದಿಂದ ಈ ಸಿನೆಮಾ ನಿಲ್ಲಿಸಬೇಕಾಯಿತು ಎಂದು ಉದ್ಯಮಿ ಹಾಗೂ ನಿರ್ಮಾಪಕ ಬಿ.ಆರ್. ಶೆಟ್ಟಿ ಹೇಳಿದ್ದಾರೆ. ಆದರೆ ಉತ್ತಮ ಚಿತ್ರಕಥೆ ಸಿಕ್ಕರೆ ಈಗಲೂ ಸಿನೆಮಾ ನಿರ್ಮಾಣಕ್ಕೆ ಸಿದ್ಧವಾಗಿದ್ದೇನೆ. ಇದಕ್ಕಾಗಿ ಹಣವನ್ನು ಮೀಸಲಿಟ್ಟಿದ್ದೇನೆ ಎಂದು ಶೆಟ್ಟಿ ಹೇಳಿದ್ದಾರೆ.
ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ವಿರಚಿತ ಮಹಾಭಾರತ ಕೃತಿ ಯನ್ನು ಆಧರಿಸಿ ಈ ಸಿನೆಮಾ ಮಾಡಲು ನಿರ್ಧರಿಸಲಾಗಿತ್ತು. ಆದರೆ ಇದು ಪದ್ಮಾವತ್ ಸಿನೆಮಾ ರೀತಿಯಲ್ಲೇ ವಿವಾದಕ್ಕೆ ಕಾರಣವಾಗಬಹುದು ಎಂಬ ಕಾರಣಕ್ಕೆ ಸಿನೆಮಾ ಕೈಬಿಡಬೇಕಾಯಿತು. ಸಿನೆಮಾ ಕೈಬಿಡುವಂತೆ ಅಧ್ಯಾತ್ಮ ಗುರುಗಳಾದ ಮಾತಾ ಅಮೃತಾನಂದ ಮಯಿ ಸಲಹೆ ನೀಡಿದರು ಎಂದು ಶೆಟ್ಟಿ ಹೇಳಿದ್ದಾರೆ. ಕೆಲವೇ ದಿನಗಳ ಹಿಂದೆ ನಿದೇಶಕ ಶ್ರೀಕುಮಾರ್ ಮೆನನ್ ಮತ್ತು ನಾಯರ್ ಮಧ್ಯದ ಸಂಘರ್ಷ ಬಹಿರಂಗ ಗೊಂಡಿದ್ದು, ತನ್ನ ಚಿತ್ರಕಥೆಯನ್ನು ವಾಪಸ್ ನೀಡುವಂತೆ ನಾಯರ್ ಅವರು ಕೋರ್ಟ್ ಮೊರೆ ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.