ನಾಮಪತ್ರ ಸಲ್ಲಿಸಿ ಶಕ್ತಿ ಪ್ರದರ್ಶಿಸಿದ ಬಿಜೆಪಿ

ಮೆರವಣಿಗೆಯುದ್ದಕ್ಕೂ ಮೋದಿ ಉದ್ಘೋಷ ಕಮಲಕ್ಕೆ ಮತ ಚಲಾಯಿಸಿ ಇತಿಹಾಸ ನಿರ್ಮಿಸಿ

Team Udayavani, Apr 4, 2019, 11:55 AM IST

4-April-6

‌ಕಲಬುರಗಿ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮಾತನಾಡಿದರು.

ಕಲಬುರಗಿ: ರಾಜ್ಯದಲ್ಲಿಯೇ ಅತ್ಯಂತ ದಾಖಲೆಯ ಬಿಸಿಲಿನ ಧಗೆಯ ನಡುವೆ ನಾಲ್ಕು ಗಂಟೆಗಳ ಅಧಿಕ ಸಮಯದ ವರೆಗೂ ಕಿಕ್ಕಿರಿದು ಸೇರಿದ್ದ ಜನಸ್ತೋಮದ ಮೆರವಣಿಗೆಯೊಂದಿಗೆ ಬುಧವಾರ ನಾಮಪತ್ರ ಸಲ್ಲಿಸಿರುವ ಬಿಜೆಪಿ, ತನ್ನ ಶಕ್ತಿ ಪ್ರದರ್ಶಿಸಿತು.

ಕಲಬುರಗಿ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಡಾ| ಉಮೇಶ ಜಾಧವ ಬುಧವಾರ ತಮ್ಮ ಉಮೇದುಗಾರಿಕೆ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷರಿಂದ ಹಿಡಿದು ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು, ಅಸಂಖ್ಯಾತ ಬೆಂಬಲಿಗರು ಹಾಗೂ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳುವ ಮುಖಾಂತರ ರಣಕಹಳೆ ಮೊಳಗಿಸಲಾಯಿತು. ಶರಣಬಸವೇಶ್ವರ ದೇವಸ್ಥಾನದಿಂದ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಡಾ| ಉಮೇಶ ಜಾಧವ ಬೆಳಗ್ಗೆ 11:27ಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆಯಲ್ಲಿ ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ್‌, ಬಾಬುರಾವ ಚಿಂಚನಸೂರ, ಶಾಸಕ ಬಿ.ಜಿ. ಪಾಟೀಲ, ಜೇವರ್ಗಿಯ ಧರ್ಮಣ್ಣ ದೊಡ್ಡಮನಿ ಇದ್ದರು. ನಂತರ ನೆಹರು ಗಂಜ್‌ದಿಂದ 12 ಗಂಟೆಗೆ ಆರಂಭವಾದ ಮೆರವಣಿಗೆ ಸಂಜೆ 4ಗಂಟೆಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಸಮಾಪ್ತಿಯಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಅಭ್ಯರ್ಥಿ ಸೇರಿದಂತೆ ಇತರ ಮುಖಂಡರು ಮಾತನಾಡಿ ಮತದಾರರು ಇದೇ ಉತ್ಸಾಹದಿಂದ ಏ. 23ರಂದು ಮತಗಟ್ಟೆಗೆ ತೆರಳಿ ಕಮಲದ ಗುರುತಿಗೆ ಮತ ಚಲಾಯಿಸಿ ಇತಿಹಾಸ ನಿರ್ಮಿಸಬೇಕೆಂದು ಮನವಿ ಮಾಡಿದರು.

ಮೆರವಣಿಗೆಯುದ್ದಕ್ಕೂ ಮೋದಿ.. ಮೋದಿ.. ಎನ್ನುವ ಮುಗಿಲು ಮುಟ್ಟುವ ಘೋಷಣೆಗಳು ಕೇಳಿ ಬಂದವು. ಅದೇ ರೀತಿ ಲಂಬಾಣಿ ಜನಾಂಗದ ಮಹಿಳೆಯರ ನೃತ್ಯ ಗಮನ ಸೆಳೆಯಿತು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಲಬುರಗಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಆಗಮಿಸಿದ್ದ ಸಾವಿರಾರು ಜನರು ಬಿಸಿಲನ್ನು ಲೆಕ್ಕಿಸದೇ ಉತ್ಸುಕತೆಯಿಂದ ಮೆರವಣಿಗೆಯಲ್ಲಿ ಪಾಲ್ಗೊಂಡು ಘೋಷಣೆಗಳನ್ನು ಕೂಗುತ್ತಿರುವುದು ಕಂಡು ಬಂತು.

ಮೆರವಣಿಗೆ ನಡುವೆ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ, ಡಾ| ಬಾಬು ಜಗಜೀವನರಾಮ ಹೋರಾಟ ಸಮಿತಿ ರಾಜ್ಯಾಧ್ಯಕ್ಷ, ಮಾದಿಗ ಸಮಾಜದ ಹಿರಿಯ ಮುಖಂಡ ಭೀಮಣ್ಣ ಟಿ. ಬಿಲ್ಲದ್‌ ಸೇರಿದಂತೆ ಇತರರು ಬಿಜೆಪಿಗೆ ಸೇರ್ಪಡೆಯಾದರು.

ಮೆರವಣಿಗೆಯಲ್ಲಿ ಪಾಲ್ಗೊಂಡವರು: ಮಾಜಿ ಸಿಎಂ ಯಡಿಯೂರಪ್ಪ, ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ, ಶಾಸಕ ಎನ್‌.ರವಿಕುಮಾರ, ಮಾಜಿ ಸಚಿವರಾದ ಡಾ| ಎ.ಬಿ. ಮಲಕರೆಡ್ಡಿ,
ಮಾಲೀಕಯ್ಯ ವಿ. ಗುತ್ತೇದಾರ, ಬಾಬುರಾವ ಚಿಂಚನಸೂರ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮಡು, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ನಗರಾಧ್ಯಕ್ಷ, ಶಾಸಕ ಬಿ.ಜಿ.
ಪಾಟೀಲ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ ಹೆಬ್ಟಾಳ, ವಾಲ್ಮೀಕಿ ನಾಯಕ, ಶಶೀಲ ನಮೋಶಿ, ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ಹಾಗರಗಿ, ಮುಖಂಡರಾದ ಚಂದು ಪಾಟೀಲ್‌, ಲಿಂಗನವಾಡಿ, ವಿಠ್ಠಲ ಲಾಧವ್‌, ನಾಮದೇವ ರಾಠೊಡ, ಪ್ರೇಮಕುಮಾರ ರಾಠೊಡ, ಅರವಿಂದ ಚವ್ಹಾಣ, ಧರ್ಮಣ್ಣ ಇಟಗಾ, ರವಿಚಂದ್ರ ಕ್ರಾಂತಿಕಾರಿ, ಶರಣಪ್ಪ ತಳವಾರ, ಮಹಾಂತಗೌಡ ಪಾಟೀಲ, ವಿದ್ಯಾಸಾಗರ ಕುಲಕರ್ಣಿ, ಲಿಂಗರಾಜ ಬಿರಾದಾರ, ಧರ್ಮಣ್ಣ ದೊಡ್ಡಮನಿ, ರವಿ ಬಿರಾದಾರ, ಪ್ರವೀಣ ತೆಗನೂರ, ರಾಜು ನೀಲಂಗಿ, ಮುಕುಂದ ದೇಶಪಾಂಡೆ, ದಯಾಘನ್‌ ಧಾರವಾಡಕರ್‌, ಶಿವಯೋಗಿ ನಾಗನಹಳ್ಳಿ, ರಾಜು ವಾಡೇಕಾರ, ಮಹೇಶ ರೆಡ್ಡಿ, ಮಲ್ಲು ಉದನೂರ, ಶಶಿಕಲಾ ಟೆಂಗಳಿ, ಬಸವರಾಜ ಇಂಗಿನ್‌, ಸುಭಾಷ ಬಿರಾದಾರ, ಸಂಗಣ್ಣ ಇಜೇರಿ, ಬಾಬುರಾವ ಹಾಗರಗುಂಡಗಿ ಹಾಗೂ ಮುಂತಾದವರು ಪಾಲ್ಗೊಂಡಿದ್ದರು.

ಮೋದಿ ಕೈ ಬಲಪಡಿಸಿ
ಮೆರವಣಿಗೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಜನಸ್ತೋಮ ನೋಡಿದರೆ ಜಾಧವ್‌ ಅವರು ಲಕ್ಷ ಲೀಡ್‌ದಿಂದ ಗೆಲ್ಲುತ್ತಾರೆಂಬ ವಿಶ್ವಾಸವಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸುವ ಕಾರ್ಯ ಕಲಬುರಗಿಯಿಂದಲೇ ಆಗಲಿ ಎಂದು ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಕರೆ ನೀಡಿದರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.