ತುಳು ಸಿನೆಮಾದಲ್ಲಿ ರಾಜಕೀಯದ ಬಣ್ಣ !


Team Udayavani, Apr 4, 2019, 12:12 PM IST

film

ಮಾಜಿ ಮುಖ್ಯಮಂತ್ರಿ ಇದು ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ; ಬದಲಾಗಿ ಸಿನೆಮಾಕ್ಕೆ ಮಾತ್ರ ಅನ್ವಯ! ಮುಂದೆ ಬರಲಿರುವ ತುಳು ಸಿನೆಮಾ “ಮಾಜಿ ಮುಖ್ಯಮಂತ್ರಿ’ಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬಣ್ಣ ಹಚ್ಚಿದ್ದಾರೆ. ಇದರ ಶೂಟಿಂಗ್‌ ಕೂಡ ಈಗಾಗಲೇ ಬಜಪೆ ವ್ಯಾಪ್ತಿಯಲ್ಲಿ ಮುಕ್ತಾಯ ಕಂಡಿದೆ. ಅಂದಹಾಗೆ, ರೈ ಮಾತ್ರವಲ್ಲದೆ, ಇನ್ನೂ ಕೆಲವು ರಾಜಕೀಯ ನಾಯಕರು ಈ ಸಿನೆಮಾದಲ್ಲಿ ಇದ್ದಾರೆ. ಆದರೆ ಯಾರೆಲ್ಲ ರಾಜಕೀಯ ನಾಯಕರು ಇರಲಿದ್ದಾರೆ ಎಂಬ ಬಗ್ಗೆ ಇನ್ನೂ ಚಿತ್ರತಂಡ ಮಾಹಿತಿ ನೀಡುತ್ತಿಲ್ಲ.

ಅಂದಹಾಗೆ, ಮಾಜಿ ಮುಖ್ಯಮಂತ್ರಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲ ಇದೆ. ಖುದ್ದು ರಾಜಕಾರಣಿಯೇ ಮಾಜಿ ಮುಖ್ಯಮಂತ್ರಿಯಾಗುತ್ತಾರೆಯೇ ಅಥವಾ ಖ್ಯಾತ ನಿರ್ದೇಶಕರೊಬ್ಬರಾ ಎಂಬುದಕ್ಕೆ ಚಿತ್ರತಂಡ ಸದ್ಯ ಮಾಹಿತಿ ಬಿಟ್ಟುಕೊಡುತ್ತಿಲ್ಲ. ಅಂತೂ, ರಾಜಕೀಯ ಫ್ಲೆàವರ್‌ನೊಂದಿಗೆ ರೆಡಿಯಾಗುತ್ತಿರುವ ಸಿನೆಮಾ ಲೋಕಸಭಾ ಚುನಾವಣೆಯ ಈ ಕಾಲದಲ್ಲಿ ಸಾಕಷ್ಟು ಕ್ರೇಜ್‌ ಹುಟ್ಟಿಸಿದೆ.
1972ರಲ್ಲಿ ತೆರೆಕಂಡ “ಮಕ್ಕಳ ಭಾಗ್ಯ’ ಕನ್ನಡ ಸಿನೆಮಾದಲ್ಲಿ ರಮಾನಾಥ ರೈ ಅವರು ಚಿಕ್ಕ ಪಾತ್ರದಲ್ಲಿ ಕಾಣಿಸಿದ್ದರು. ಈ ಸಿನೆಮಾದಲ್ಲಿ ವಿಷ್ಣುವರ್ಧನ್‌, ಭಾರತೀ ಮುಖ್ಯ ಪಾತ್ರಧಾರಿಗಳಾಗಿದ್ದರು. ಕೋಸ್ಟಲ್‌ವುಡ್‌ನ‌ಲ್ಲಿ ಈಗಾಗಲೇ ಸಾಕಷ್ಟು ಸೌಂಡ್‌ ಮಾಡುತ್ತಿರುವ “ಕಟಪಾಡಿ ಕಟ್ಟಪ್ಪ’ ಸಿನೆಮಾದ ನಿರ್ಮಾಪಕ ಹಾಗೂ ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಜೇಶ್‌ ಬ್ರಹ್ಮಾವರ ಅವರ ನಿರ್ಮಾಣದಲ್ಲಿ “ಮಾಜಿ ಮುಖ್ಯಮಂತ್ರಿ’ ಸಿನೆಮಾ ರೆಡಿಯಾಗುತ್ತಿದೆ.

ಈ ಹಿಂದೆ ಅವರು “ದೊಂಬರಾಟ’ ಸಿನೆಮಾ ಮಾಡಿದ್ದರು. ಹಲವು ಸಿನೆಮಾಗಳಲ್ಲಿ ಸಹನಿರ್ದೇಶನ ಮಾಡಿರುವ ತ್ರಿಶೂಲ್‌ ಶೆಟ್ಟಿ ಇದೇ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಈ ಸಿನೆಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ.

“ಕೃಷ್ಣ ತುಳಸಿ’ ಧಾರವಾಹಿಯಲ್ಲಿ ನಟಿಸಿದ್ದ ಸ್ವರಾಜ್‌ ಶೆಟ್ಟಿ, ಭೋಜರಾಜ್‌ ವಾಮಂಜೂರು ಸಹಿತ ಹಲವು ಕಲಾವಿದರು ಈ ಸಿನೆಮಾದಲ್ಲಿದ್ದಾರೆ. ಸಿನೆಮಾಕ್ಕೆ ಕೆಮರಾ ಉದಯ್‌ ಬಳ್ಳಾಲ್‌ ನಡೆಸಲಿದ್ದು, ಸಂಗೀತ ಪ್ರಕಾಶ್‌, ಸಾಹಿತ್ಯ ಸುರೇಶ್‌ ಬಲ್ಮಠ ಅವರದ್ದು. ಮಯೂರ್‌ ಶೆಟ್ಟಿ ಸಹ ನಿರ್ದೇಶಕರಾಗಿದ್ದಾರೆ. ಈ ಸಿನೆಮಾದ ಶೂಟಿಂಗ್‌ ಮುಗಿದ ಬಳಿಕ ರಾಜೇಶ್‌ ಬಂದ್ಯೋಡು ನಿರ್ದೇಶನದಲ್ಲಿ “ಜ್ಯೋತಿ ಸರ್ಕಲ್‌’ ಸಿನೆಮಾ ಶೂಟಿಂಗ್‌ ಆರಂಭವಾಗಲಿದೆ.

ಅಂದಹಾಗೆ ತುಳುವಿನ ಹಲವು ಸಿನೆಮಾದಲ್ಲಿ ರಾಜಕೀಯ ನಾಯಕರು ಬಣ್ಣ ಹಚ್ಚಿದ್ದಾರೆ ಎಂಬುದು ವಿಶೇಷ. ತುಳುವಿನ ಮೊದಲ ಚಿತ್ರ 1971ರ  “ಎನ್ನ ತಂಗಡಿ’ಯಲ್ಲಿ ಮಾಜಿ
ಶಾಸಕ ಲೋಕಯ್ಯ ಶೆಟ್ಟಿ, “ಪಗೆತ ಪುಗೆ’ ಚಿತ್ರದಲ್ಲಿ ಅಂದಿನ ಶಾಸಕ ಅಮರನಾಥ ಶೆಟ್ಟಿ ಅವರು ಅಭಿನಯಿಸಿದ್ದರು. ದೈವಾರಾಧನೆಯ ಪರಂಪರೆಯನ್ನು ಬಿಂಬಿಸಿದ 2011ರಲ್ಲಿ ತೆರೆಕಂಡ ಕುಂಬ್ರ ರಘುನಾಥ ರೈ ಅವರ “ಕಂಚಿಲ್ದ ಬಾಲೆ’ ಸಿನೆಮಾದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಪ್ರಧಾನ ಭೂಮಿಕೆಯಲ್ಲಿದ್ದರು.

ನಾರಾಯಣ ಗುರುಸ್ವಾಮಿ ಜೀವನ ಚರಿತ್ರೆಯ ರಾಜಶೇಖರ್‌ ಕೋಟ್ಯಾನ್‌ ಅವರ “ಬ್ರಹ್ಮಶ್ರೀ  ನಾರಾಯಣ ಗುರುಸ್ವಾಮಿ’ ಚಿತ್ರದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರು ಬಣ್ಣಹಚ್ಚಿದ್ದರು. ಇದೇ ಚಿತ್ರ ಹಾಗೂ ಇತ್ತೀಚೆಗೆ ಬಂದ “ಚಾಲಿಪೋಲಿಲು’, “ಎಕ್ಕಸಕ’ ಸಹಿತ ಕೆಲವು ಸಿನೆಮಾದಲ್ಲಿ ಬಿಜೆಪಿಯ ಉಮಾನಾಥ ಕೋಟ್ಯಾನ್‌ ಅಭಿನಯಿಸಿದ್ದಾರೆ. ಜಗದೀಶ್‌ ಅಧಿಕಾರಿ ಕೂಡ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಮಾಜಿ ಶಾಸಕ ವಸಂತ ಬಂಗೇರ ಅವರು 1978ರಲ್ಲಿ “ಸಂಗಮ ಸಾಕ್ಷಿ’ ಎಂಬ ತುಳು ಸಿನೆಮಾ ನಿರ್ಮಾಪಕರಾಗಿದ್ದರು. ಪ್ರೌಢ ಮಕ್ಕಳು ನಾಯಕ- ನಾಯಕಿಯರಾಗಿ ಇದೇ ಚಿತ್ರದಲ್ಲಿ ಅಭಿನಯಿಸಿದ್ದರು. 2006ರಲ್ಲಿ ತೆರೆಗೆ ಬಂದ ಸಾಧನಾ ಎನ್‌. ಶೆಟ್ಟಿ ನಿರ್ಮಾಪಕರಾಗಿರುವ “ಕಡಲ ಮಗೆ’ ಚಿತ್ರವನ್ನು ಮಾಜಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ನಾಗರಾಜ ಶೆಟ್ಟಿ ಅವರು ನಿರ್ಮಿಸಿದ್ದಾರೆ.

24 ಗಂಟೆಯಲ್ಲಿ ಚಿತ್ರೀಕರಣವಾದ 1994ರ ಡಾ| ರಿಚರ್ಡ್‌ ಕ್ಯಾಸ್ಟಲಿನೋ ಅವರ “ಸಪ್ಟೆಂಬರ್‌ 8′ ಚಿತ್ರದಲ್ಲಿ ಡಾ| ಶಿವರಾಮ ಕಾರಂತರು (ಕಾರವಾರ ಸಂಸದ ಸ್ಥಾನಕ್ಕೆ ಸ್ಪರ್ಧಿಸಿದವರು)ಅಭಿನಯಿಸಿದ್ದಾರೆ. ಮಾಜಿ ಸಚಿವೆ ಉಮಾಶ್ರೀ ಕೂಡ ಇದೇ ಚಿತ್ರದಲ್ಲಿ ಬಣ್ಣಹಚ್ಚಿದ್ದರು.
  ದಿನೇಶ್‌ ಇರಾ

ಟಾಪ್ ನ್ಯೂಸ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-uv-fusion

Government School: ಅಳಿವಿನಂಚಿನಲ್ಲಿ ನನ್ನೂರ ಸರಕಾರಿ ಶಾಲೆ

12-uv-fusion

UV Fusion: ಹಬ್ಬ ಹರಿದಿನಗಳಲ್ಲಿ ಯುವಜನರ ಪಾತ್ರ

11-uv-fusion

UV Fusion: ಹುಲಿ ವೇಷವೆಂಬ ವಿಸ್ಮಯ

9-uv-fusion

Family: ನಾವು ನಮ್ಮವರೊಂದಿಗೆ ಕಳೆಯುವ ಸಮಯ ಅಮೂಲ್ಯ

8-uv-fusion

Ratan Tata: ಉದ್ಯಮ ಕ್ಷೇತ್ರದ ಅಜಾತಶತ್ರು ರತನ್‌ ಟಾಟಾ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

naa ninna bidalaare movie releasing on Nov 29

Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್‌ ಬಂತು: ನ.29ಕ್ಕೆ ಸಿನಿಮಾ ತೆರೆಗೆ

police-ban

Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.