ರಾಜ್ಯದಲ್ಲಿ ಈ ಬಾರಿ ಬಿಜೆಪಿಗೆ ಕೇವಲ 11 ಸ್ಥಾನ?
ಜೆಡಿಎಸ್ - ಕಾಂಗ್ರೆಸ್ ಮೈತ್ರಿಗೆ ಮುನ್ನಡೆ ; ಹಲವು ಕ್ಷೇತ್ರಗಳಲ್ಲಿ ಕ್ಲೋಸ್ ಫೈಟ್! : ‘ಪೋಲ್ ಐ ಸಮೀಕ್ಷೆ’ಯಲ್ಲಿ ಬಹಿರಂಗ
Team Udayavani, Apr 4, 2019, 1:58 PM IST
ಬೆಂಗಳೂರು: 2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆಯ ಕಾರಣದಿಂದ 28 ಸ್ಥಾನಗಳ ಪೈಕಿ 17 ಲೋಕಸಭಾ ಸ್ಥಾನಗಳಲ್ಲಿ ಜಯಗಳಿಸಿದ್ದ ಭಾರತೀಯ ಜನತಾ ಪಕ್ಷಕ್ಕೆ ಈ ಬಾರಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಭಾರೀ ಹೊಡೆತ ನೀಡಲಿದೆಯೇ? ಹೌದು ಎನ್ನುತ್ತಿದೆ ಪೋಲ್ ಐ ನಡೆಸಿರುವ ಚುನಾವಣಾ ಸಮೀಕ್ಷೆ.
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಸಾಧನೆ ತೋರಿದ್ದರೂ ಅಧಿಕಾರಕ್ಕೇರುವಲ್ಲಿ ವಿಫಲವಾಗಿತ್ತು. ಆ ಬಳಿಕ ನಡೆದ ರಾಜಕೀಯ ವಿದ್ಯಮಾನಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪರಸ್ಪರ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರುವಂತಾಯಿತು. ಇನ್ನೂ ಮುಂದುವರೆದು ಲೋಕಸಭಾ ಚುನಾವಣೆಗೂ ಸಹ 21-7 ಮಾದರಿಯಲ್ಲಿ ಸ್ಥಾನ ಹೊಂದಾಣಿಕೆ ಮಾಡಿಕೊಂಡು ಇದೀಗ ಬಿಜೆಪಿ ಮತ್ತು ಮೋದಿ ವಿರುದ್ಧ ಕರ್ನಾಟಕದಲ್ಲಿ ಈ ಪಕ್ಷಗಳು ಟೊಂಕ ಕಟ್ಟಿ ನಿಂತಿವೆ.
ಈ ಎಲ್ಲಾ ಬೆಳವಣಿಗೆಗಳು ಈ ಬಾರಿ ರಾಜ್ಯದಿಂದ ಶತಾಯ ಗತಾಯ 22 ಸಂಸದರನ್ನು ಸಂಸತ್ತಿಗೆ ಕಳುಹಿಸಬೇಕೆಂದು ಪಣತೊಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಕಮಲ ಪಕ್ಷದ ಇತರ ನಾಯಕರಿಗೆ ತಲೆನೋವಿನ ವಿಚಾರವಾಗಿದೆ. ಈ ಚುನಾವಣಾ ಪೂರ್ವ ಸಮೀಕ್ಷೆಯಂತೆ ಕರ್ನಾಟಕದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್-ಜೆಡಿಎಸ್ 17 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ ಮತ್ತು ಬಿಜೆಪಿ 11 ಸ್ಥಾನಗಳಲ್ಲಿ ಮಾತ್ರವೇ ಮುನ್ನಡೆಯನ್ನು ಕಾಯ್ದುಕೊಂಡಿದೆ. ಕಳೆದ ಬಾರಿಗಿಂತ ಬಿಜೆಪಿ ಈ ಬಾರಿ 7 ಕ್ಷೇತ್ರಗಳಲ್ಲಿ ಹಿನ್ನಡೆ ಸಾಧಿಸಿದೆ. ಇನ್ನು ಮತ ಹಂಚಿಕೆ ವಿಷಯದಲ್ಲೂ ದೋಸ್ತಿ ಪಕ್ಷಗಳೇ ಮುನ್ನಡೆಯಲ್ಲಿದ್ದು ಕಾಂಗ್ರೆಸ್-ಜೆಡಿಎಸ್ ಒಟ್ಟಾರೆ 51 ಪ್ರತಿಶತ ಮತಗಳಿಸುವ ನಿರೀಕ್ಷೆಯಿದ್ದರೆ ಬಿಜೆಪಿಯ ನಿರೀಕ್ಷಿತ ಮತಗಳಿಕೆಯ ಪ್ರಮಾಣ 45 ಪ್ರತಿಶತವಾಗಲಿದೆ ಎಂದು ಈ ಸಮೀಕ್ಷೆ ನುಡಿಯುತ್ತಿದೆ.
ಇನ್ನು ಕಳೆದ ಬಾರಿಯ ವಿಧಾನ ಸಭಾ ಚುನಾವಣೆಯ ಬಳಿಕ ತಳಮಟ್ಟದಲ್ಲಿ ಬಿಜೆಪಿಯ ಶಕ್ತಿವರ್ಧನೆಯಾಗಿರುವುದು ಹಾಗೂ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಮತಹಂಚಿಕೆ ಪರಿಣಾಮಕಾರಿಯಾಗದೇ ಇರುವ ಎರಡು ಅಂಶಗಳಿಂದಾಗಿ ಹಲವಾರು ಕ್ಷೇತ್ರಗಳಲ್ಲಿ ಜಯಾಪಜಯದ ನಿರ್ಣಯ ಕಷ್ಟಸಾದ್ಯವಾಗಲಿದೆ ಎಂಬ ವಿಷಯವೂ ಈ ಸಮೀಕ್ಷೆಯಿಂದ ಬಯಲಾಗಿದೆ.
ಈ ಸಮೀಕ್ಷೆಯ ಪ್ರಕಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು 8 ಕ್ಷೇತ್ರಗಳಲ್ಲಿ ಖಚಿತವಾಗಿರುವಂತಿದೆ 4 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಪಕ್ಕಾ ಅನ್ನುವಂತಿದೆ. ಇನ್ನು 3 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವಿನ ಸಾಧ್ಯತೆ ಇದ್ದು ಮತ್ತೆ ನಾಲ್ಕರಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಸಾಧ್ಯತೆ ತೋರಿಬರುತ್ತಿದೆ. ಆದರೆ ಇನ್ನುಳಿದ 9 ಕ್ಷೇತ್ರಗಳಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲ್ಲಬಹುದು ಎಂದು ಊಹೆಮಾಡಲಾಗದಷ್ಟೂ ಟೈಟ್ ಫೈಟ್ ಇರುವುದು ಈ ಸಮೀಕ್ಷೆಯಿಂದ ಬಹಿರಂಗಗೊಂಡಿದೆ.
ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಿಡಿತ ಬಲವಾಗಿದ್ದರೆ ತುಮಕೂರು, ಹಾಸನ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲೂ ಮೈತ್ರಿ ಹವಾ ಜೋರಾಗಿದೆ. ಇನ್ನು ಭಾರತೀಯ ಜನತಾ ಪಕ್ಷವು ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಬಾಗಲಕೋಟೆ ಸೇರಿದಂತೆ ಬೆಂಗಳೂರು ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಲ್ಲಿ ಪ್ರಬಲವಾಗಿದೆ. ಆದರೆ ಕೆಲವು ಕ್ಷೇತ್ರಗಳಲ್ಲಿ ಮೂರೂ ಪಕ್ಷಗಳು ಆಂತರಿಕ ಬಂಡಾಯ ಪರಿಸ್ಥಿತಿಯನ್ನು ಎದುರಿಸುತ್ತಿರುವುದು ಅಂತಿಮ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.