ನೋಟಿಸ್ ಸುಟ್ಟು ರೈತರ ಪ್ರತಿಭಟನೆ
ಸರ್ಕಾರ ಸಾಲ ಮನ್ನಾ ಮಾಡಿದ್ದರೂ ಕಾಯದ ಬ್ಯಾಂಕ್‌ಗಳು: ಆಕ್ರೋಶ
Team Udayavani, Apr 4, 2019, 5:16 PM IST
ದಾವಣಗೆರೆ: ಬ್ಯಾಂಕ್ ನೋಟಿಸ್ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ರೈತ ಸಂಘ ಮತ್ತು ಹಸಿರು ಸೇನೆ(ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ಕಾರ್ಯಕರ್ತರು.
ದಾವಣಗೆರೆ: ಸಾಲ ಮರುಪಾವತಿಗೆ ಸಂಬಂಧಿಸಿದಂತೆ ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‌ಗಳು ರೈತರಿಗೆ ಜಾರಿ ಮಾಡಿರುವ ನೋಟಿಸ್ ಸುಡುವ ಮೂಲಕ ಬುಧವಾರ ರೈತ ಸಂಘ ಮತ್ತು ಹಸಿರು ಸೇನೆ(ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶ್ರೀ ಜಯದೇವ ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತಾಲೂಕು ಕಚೇರಿ ಮುಂದೆ ವಿವಿಧ ಬ್ಯಾಂಕ್‌ಗಳ ನೋಟಿಸ್ ಸುಡುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಈಗಾಗಲೇ ಸಾಲ ಮನ್ನಾ ಯೋಜನೆ ಘೋಷಣೆ ಮಾಡಿದೆ. ರೈತರ ಖಾತೆಗೆ 50 ಸಾವಿರದಷ್ಟು ಹಣ ಜಮೆ ಮಾಡಿದೆ. ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಕೆಲವಾರು ರೈತರ ಖಾತೆಗೆ ಜಮೆ ಆಗಿರುವುದಿಲ್ಲ.
ನೀತಿ ಸಂಹಿತೆ ಅವಧಿ ಮುಕ್ತಾಯ ಆಗುವ ತನಕ ಸಹ ಕಾಯುವಂತಹ ಸೌಜನ್ಯವನ್ನೂ ತೋರದ ಕೆಲ ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‌ಗಳು ರೈತರಿಗೆ ನೋಟಿಸ್ ಜಾರಿ ಮಾಡಿರುವುದು ಅತ್ಯಂತ ಖಂಡನೀಯ ಮತ್ತ ರೈತ ವಿರೋಧಿ ಕ್ರಮ ಎಂದು ರೈತರು ದೂರಿದರು.
ಸತತ ಬರಗಾಲ, ಮಳೆಯ ಕೊರತೆಯಿಂದ ಮುಂಗಾರು, ಹಿಂಗಾರು ಬೆಳೆ ಇಲ್ಲದೆ ರೈತರು ಜೀವನ ನಡೆಸುವುದು ದುಸ್ತರವಾಗಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಯೋಜನೆ ಜಾರಿಗೆ ತರುತ್ತಿದೆ. ಆದರೂ, ಕೆಲವಾರು ಬ್ಯಾಂಕ್‌ಗಳು ನೋಟಿಸ್ ಜಾರಿ ಮಾಡುವ ರೈತರಿಗೆ ಮಾನಸಿಕಿ ಕಿರುಕುಳ, ದೌರ್ಜನ್ಯವೆಸಗುತ್ತಿದ್ದಾರೆ. ಅಂತಹ
ಬ್ಯಾಂಕ್‌ಗಳ ವಿರುದ್ಧ ಸಂಬಂಧಿತರು ತೀವ್ರ ಸ್ವರೂಪದ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಸಂಘಟನೆಯಿಂದ ರಾಜ್ಯಾದ್ಯಂತ
ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಎಸ್‌ಸಿ, ಎಸ್‌ಟಿ ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮಗಳಿಗೆ ಸಂಬಂಧಿಸಿದ ಸರ್ಕಾರದ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಶಾಸಕರು ಬ್ಯಾಂಕ್‌ಗೆ ಕಳಿಸಿದ್ದರೂ ಬ್ಯಾಂಕ್ ವ್ಯವಸ್ಥಾಪಕರು ಕ್ಲೈಮ್ ಕೊಡಲು ಒತ್ತಾಯಿಸುತ್ತಿದ್ದಾರೆ. ಹಾಗಾಗಿ ಆಯ್ಕೆಯಾದ ಫಲಾನುಭವಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಕೂಡಲೇ ಸಂಬಂಧಿತ ಬ್ಯಾಂಕ್ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವ ಮೂಲಕ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಅಧಿಕಾರಿಗಳು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವುದರಿಂದ ಅನೇಕ ಭಾಗದಲ್ಲಿ ಸಮಸ್ಯೆ ಬಗೆಹರಿಯುತ್ತಿಲ್ಲ. ಕೂಡಲೇ ಜನಸಾಮಾನ್ಯರಿಗೆ ಮೂಲಭೂತ ಸೌಲಭ್ಯ ಒದಗಿಸುವತ್ತ ಗಮನ ನೀಡಬೇಕು ಎಂದು ಆಗ್ರಹಿಸಿದರು.
ಸಂಘಟನೆ ರಾಜ್ಯ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್. ಅರಸನಾಳ್ ಸಿದ್ದಪ್ಪ. ಗುಮ್ಮನೂರು ಬಸವರಾಜ್, ಆಲೂರು ಪರಶುರಾಮ್, ಕೋಲ್ಕುಂಟೆ ಬಸಣ್ಣ, ಕಾಡಜ್ಜಿ ಪ್ರಕಾಶ್, ಚಿರಂಜೀವಿ, ಬೂದಾಳ್ ಭಗತ್‌ಸಿಂಹ, ಗುಮ್ಮನೂರು ಕೃಷ್ಣಮೂರ್ತಿ, ಯಲ್ಲೋದಹಳ್ಳಿ ರವಿ, ಲೋಕೇಶ್, ಉಚ್ಚಂಗೆಪ್ಪ, ಪುಟ್ಟಪ್ಪ, ಪರಶುರಾಮ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.