ಯುವ ಜನರೇ ದೇಶದ ಭವಿಷ್ಯ: ತೇಜಸ್ವಿ ಸೂರ್ಯ

ಐ ಆಮ್‌ ದಿ ಯೂತ್‌ ಸಂವಾದದಲ್ಲಿ ಬೆಂ.ದಕ್ಷಿಣ ಲೋಕಸಭೆ ಬಿಜೆಪಿ ಅಭ್ಯರ್ಥಿ ಅಭಿಮತ

Team Udayavani, Apr 5, 2019, 11:09 AM IST

blore-001
ಬೆಂಗಳೂರು: ದೇಶದ ಭವಿಷ್ಯ ಯುವ ಜನಾಂಗವನ್ನು ಆಧರಿಸಿದ್ದು, ಈ ನಿಟ್ಟಿನಲ್ಲಿ ಯುವಕರು ರಾಜಕೀಯದಲ್ಲಿ ಸಕ್ರಿಯರಾಗಬೇಕು ಎಂದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಕರೆ ನೀಡಿದರು.
ಎಚ್‌ಎಸ್‌ಆರ್‌ ಲೇಔಟ್‌ನ ಆಕ್ಸ್‌ಫ‌ರ್ಡ್‌ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ “ಐ ಆಮ್‌ ದಿ ಯೂತ್‌’ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಯುವ ಸಮುದಾಯ ರಾಜಕೀಯ ಪ್ರವೇಶಿಸಲು ಇದು ಸೂಕ್ತ ಸಮಯ. ಇದಕ್ಕಾಗಿ ಮೋದಿ ಅವರು ಸಹ ಕಾತುರರಾಗಿದ್ದಾರೆ ಎಂದರು.
ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ ಜತೆ ವೇದಿಕೆ ಹಂಚಿಕೊಂಡಿದ್ದ ತೇಜಸ್ವಿ ಸೂರ್ಯ, ಪ್ರಮುಖ ಸಮಸ್ಯೆಗಳಾದ ಸಂಚಾರದಟ್ಟಣೆ, ಪ್ರಸಕ್ತ ಶಿಕ್ಷಣ ನೀತಿಗಳು, ಮೂಲಭೂತ ಸಮಸ್ಯೆಗಳು, ನಗರದ ರಸ್ತೆಗಳು, ನೀರಿನ ಸಮಸ್ಯೆ ಕುರಿತು ಚರ್ಚಿಸಿದರು.
ಸಂವಾದಕ್ಕೂ ಮೊದಲು ಜಾಗತಿಕವಾಗಿ ಭಾರತದ ಸ್ಥಿತಿಗತಿಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಭಾರತ ಕಳೆದ ಐದು ವರ್ಷಗಳಿಂದ ತ್ವರಿತ ಗತಿಯಲ್ಲಿ ಅಭಿವೃದ್ಧಿ ಸಾಧಿಸುತ್ತ, ಸದೃಢ ಆರ್ಥಿಕ ವ್ಯವಸ್ಥೆಯಾಗಿ ಹೊರಹೊಮ್ಮಿದೆ. ಇಷ್ಟು ದಿನ ನಾವು ಮೇಡ್‌ ಇನ್‌ ಚೀನಾ, ಮೇಡ್‌ ಇನ್‌ ಥೈವಾನ್‌ ವಸ್ತುಗಳನ್ನೇ ನೋಡುತ್ತಿದ್ದೆವು. ಆದರೆ ಈಗ ಮೇಡ್‌ ಇನ್‌ ಇಂಡಿಯಾ ಯುಗ ಶುರುವಾಗಿದೆ. ಕೇಂದ್ರದ ಭ್ರಷ್ಟಾಚಾರ ರಹಿತ ಸರ್ಕಾರ, ಜಿಎಸ್‌ಟಿ, ನೋಟು ಅಮಾನ್ಯಿಕರಣದಿಂದ ದೇಶದ ಆರ್ಥಿಕ ಸ್ಥಿತಿ ಮತ್ತಷ್ಟು ಸುಧಾರಿಸಿದೆ ಎಂದರು.
ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತ ಬಯಲುಮುಕ್ತ ಶೌಚಾಲಯ ನಿರ್ಮಾಣ ಕೇಂದ್ರ ಸರ್ಕಾರದ ಬಹುದೊಡ್ಡ ಕೊಡುಗೆ ಎಂದರು. ನಗರದ ನೀರಿನ ಸಮಸ್ಯೆ ಕುರಿತ ಪ್ರಶ್ನೆಗೆ ಉತ್ತರಿಸುತ್ತ, ಇಸ್ರೇಲ್‌ ಮಾದರಿಯ ಶುದ್ಧ ನೀರಿನ ಸಂಸ್ಕರಣೆ
ವ್ಯವಸ್ಥೆಯನ್ನು ಪರಿಚಯಿಸಿದರೆ ನೀರಿನ ಸಮಸ್ಯೆ ಬಹುತೇಕ ನೀಗುತ್ತದೆ ಎಂದರು.
ಇನ್ಮುಂದೆ ಪ್ರತಿಭಾನ್ವಿತರು ವಿದೇಶಗಳಿಗೆ ಹೋಗುವ ಅನಿವಾರ್ಯ ಪರಿಸ್ಥಿತಿ ಬರುವುದಿಲ್ಲ. ನವಭಾರತ, ನವ ಬೆಂಗಳೂರಿನ ನಿರ್ಮಾಣ ಯುವಕರ ಮೇಲಿದ್ದು, ಜಾಗರೂಕತೆಯಿಂದ ಮತ ಚಲಾವಣೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇದಕ್ಕೂ ಮುನ್ನ ತೇಜಸ್ವಿಸೂರ್ಯ ಜೆಪಿ ನಗರ, ಪಟ್ಟಾಭಿನಗರ ವಾರ್ಡ್‌ಗಳಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿದರು.

ಟಾಪ್ ನ್ಯೂಸ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.