ಸರ್ವರಿಗೂ ಸಮಾನ ಹಕ್ಕು ಕೊಟ್ಟಿದ್ದು ಕಾಂಗ್ರೆಸ್
Team Udayavani, Apr 5, 2019, 12:42 PM IST
ಮೆರವಣಿಗೆಯಲ್ಲಿ ಪಾಲ್ಗೊಂಡ ಜನಸ್ತೋಮ
ಕಲಬುರಗಿ: ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್. ಡಾ| ಬಿ.ಆರ್. ಅಂಬೇಡ್ಕರ್ ಅವರಿಂದ ಸಂವಿಧಾನ ರಚಿಸಿ ಸರ್ವರಿಗೂ ಸಮಾನ ಹಕ್ಕು ಕೊಟ್ಟಿದ್ದು ಕಾಂಗ್ರೆಸ್. ದೇಶದ ಅಭಿವೃದ್ಧಿಗೆ ಶ್ರಮಿಸಿದ್ದು ಕಾಂಗ್ರೆಸ್. ಬಡವರ ಪರವಾಗಿ ಕಾಂಗ್ರೆಸ್ ಪಕ್ಷ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮೋದಿ ಸರ್ಕಾರ ರೈತರ ಸಾಲ ಮನ್ನಾ ಮಾಡಲಿಲ್ಲ. ರೈತರ ಸಾಲ ಮನ್ನಾ ಮಾಡಿ ಎಂದರೆ ಹಣದ ಪ್ರಿಂಟಿಂಗ್ ಮಷಿನ್ ಇಲ್ಲ ಎಂದು ಹಾಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಬೃಹತ್ ಜನಸಮೂಹ ಉದ್ದೇಶಿಸಿ ಮಾತನಾಡಿದ ಅವರು, ಬಡವರಿಗೆ ಅನುಕೂಲವಾಗುವ ಯೋಜನೆಗೆ ಹಣ ನೀಡಲಿಲ್ಲ. ಆದರೆ, ಉದ್ಯಮಿಗಳ 3.5 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ದೇಶವನ್ನು ಬರ್ಬಾದ್ ಮಾಡಿದೆ. 70 ವರ್ಷ ಕಾಂಗ್ರೆಸ್ ದೇಶಕ್ಕಾಗಿ ಏನು ಮಾಡಿದೆ ಎಂದು ಪ್ರಧಾನಿ ಮೋದಿ ಪ್ರಶ್ನಿಸುತ್ತಾರೆ. ಮೋದಿ ಹುಟ್ಟುತ್ತಲೆ ದೇಶದಲ್ಲಿ ಮಂಗಳಯಾನದಂತಹ ಯೋಜನೆಗಳು ಜಾರಿಗೆ ಬಂದವಾ? ಮೋದಿ ನೋಟ್ ಬ್ಯಾನ್ ಮಾಡಿ ಭ್ರಷ್ಟಾಚಾರ, ಭಯೋತ್ಪಾದನೆ, ನಕಲಿ ನೋಟು ಹಾವಳಿ ನಿಲ್ಲುತ್ತದೆ ಎಂದಿದ್ದರು. ಆದರೆ, ಮೋದಿ ಮಾಡಿದ ಪಾಪದಿಂದ ಮಹಿಳೆಯರು, ಬಡವರು ಬೀದಿಗೆ ಬಿದ್ದರು. ಪ್ರತಿಯೊಬ್ಬರಿಗೆ 15 ಲಕ್ಷ ರೂ, ಹಾಕುತ್ತೇನೆ ಎಂದಿದ್ದರು. ಒಬ್ಬರಿಗೂ ನಯಾ ಪೈಸೆ ಹಾಕಲಿಲ್ಲ. ನಾಳೆ ಬಿಜೆಪಿಯವರು ಮನೆ ಮುಂದೆ ಬಂದರೆ 15 ಲಕ್ಷ ರೂ. ಎಲ್ಲಿ ಎಂದು ಕೇಳಿ ಎಂದು ಜನತೆಗೆ ಕರೆ ಕೊಟ್ಟ ಖರ್ಗೆ, ಮೋದಿ ಸುಳ್ಳಿನ ಸರದಾರ ಎಂದು ವಾಗ್ಧಾಳಿ ನಡೆಸಿದರು.
ಕೂಲಿಗಾರರು, ಟಾಟಾ, ಬಿರ್ಲಾ, ಅಂಬಾನಿ, ಅದಾನಿಯಂತ ದೊಡ್ಡ ಉದ್ಯಮಿ ಯಾರೆ ಇದ್ದರೂ ಅವರಿಗೆಲ್ಲ ಓಟಿನ ಹಕ್ಕಿದೆ. ಎಲ್ಲರ ಓಟಿಗೂ ಒಂದೇ ಬೆಲೆ ಇದೆ. ದೇಶದ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.