ಇಂದಿನಿಂದ ಕರಿಯಮ್ಮದೇವಿ 90ನೇ ಜಾತ್ರೋತ್ಸವ

Team Udayavani, Apr 5, 2019, 2:18 PM IST

gada-1
ಗದಗ: ಇಲ್ಲಿನ ಕರಿಯಮ್ಮಕಲ್ಲ ಬಡಾವಣೆಯ ಕರಿಯಮ್ಮದೇವಿಯ 90ನೇ ಜಾತ್ರಾ ಮಹೋತ್ಸವ ಏ.5 ರಿಂದ 7ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಕರಿಯಮ್ಮ ಕಲ್ಲ ಬಡಾವಣೆಯ ಸುಧಾರಣಾ ಸಮಿತಿ ಗೌರವಾಧ್ಯಕ್ಷ ಎಲ್‌.ಡಿ. ಚಂದಾವರಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.5ರಂದು ಕರಿಯಮ್ಮದೇವಿ ಬೆಳ್ಳಿ ಉತ್ಸವ ಮೂರ್ತಿ ದರ್ಶನ ನಡೆಯಲಿದೆ. ಕರಿಯಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ ರಂಗೋಲಿ, 11ಕ್ಕೆ ಚಿತ್ರಕಲೆ ಹಾಗೂ 11.30ಕ್ಕೆ ವಚನ ಗಾಯನ ಸ್ಪರ್ಧೆ ಆಯೋಜಿಸಲಾಗಿದೆ. ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ನೀಡಲಾಗುತ್ತದೆ ಎಂದು ಹೇಳಿದರು.
ಏ.5 ರಂದು ಸಂಜೆ 6ಕ್ಕೆ ಜಾತ್ರಾ ಮಹೋತ್ಸವ ಪ್ರಾರಂಭೋತ್ಸವ ಜರುಗಲಿದ್ದು, ಹರ್ಲಾಪೂರ ಕೊಟ್ಟೂರೇಶ್ವರ ಮಠದ ಕೊಟ್ಟೂರೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನಿವೃತ್ತ ಪ್ರಾಧ್ಯಾಪಕ ಡಾ. ಸುಭಾಶಚಂದ್ರ ಅಂಗಡಿ, ಸಹಕಾರಿ ಧುರೀಣ ಎಚ್‌.ಜಿ. ಹಿರೇಗೌಡ್ರ ಪಾಲ್ಗೊಳ್ಳುವರು ಎಂದು ಹೇಳಿದರು.
ಏ.6ರಂದು ಸಂಜೆ 5.30ಕ್ಕೆ ಸಕಲ ಮಂಗಳ ವಾದ್ಯಗಳೊಂದಿಗೆ ಮಹಾರಥೋತ್ಸವ ಜರುಗಲಿದೆ. ಸಂಜೆ 7ಕ್ಕೆ ನರಗುಂದ ತಾಲೂಕು ಕೊಣ್ಣೂರಿನ ಚಕ್ರ ಮಹಿಳಾ ಕಲಾ ತಂಡ ಹಾಗೂ ಕುರ್ತಕೋಟಿಯ ವಿರೂಪಾಕ್ಷ ಗೂರನವರ ಸಂಗಡಿಗರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಜಾತ್ರಾ ಸಮಿತಿ ಅಧ್ಯಕ್ಷ ಐ.ಬಿ. ಮೈದರಗಿ ಅಧ್ಯಕ್ಷತೆ ವಹಿಸುವರು. ವರ್ತಕ ಸಿ.ಸಿ. ಬಡ್ನಿ, ಎಂ.ಸಿ. ಐಲಿ, ಕೆ.ಕೆ. ಪಟೇಲ ಪಾಲ್ಗೊಳ್ಳುವರು ಎಂದು ಹೇಳಿದರು.
ಏ. 7ರಂದು ಮಧ್ಯಾಹ್ನ 1ಕ್ಕೆ ಅನ್ನ ಸಂತರ್ಪಣೆ, ಸಂಜೆ 6ಕ್ಕೆ ಕಡುಬಿನ ಕಾಳಗ, ಸಂಜೆ 7ಕ್ಕೆ ಜಂತ್ಲಿ- ಶಿರೂರಿನ ಜಾನಪದ ಕಲಾವಿದ ಗವಿಸಿದ್ಧಯ್ನಾ ಹಳ್ಳಿಕೇರಿಮಠ, ಬೆಳಹೊಡ ಗ್ರಾಮದ ಸಾವಿತ್ರಿಬಾಯಿ ಪುಲೆ ಜಾನಪದ ಕಲಾಮೇಳ, ಕರಿಯಮ್ಮದೇವಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಕರಿಯಮ್ಮಕಲ್ಲ ಬಡಾವಣೆ ಹಾಗೂ ವಿವೇಕಾನಂದ ಬಡಾವಣೆ ಸಹೋದರಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಸಮಿತಿ ಕಾಯಾಧ್ಯಕ್ಷ ಸಿ.ಕೆ. ಮಾಳಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಿ.ಜಿ. ಬಿರಾದಾರ, ಬಸವರಾಜ ಬಿಂಗಿ ಪಾಲ್ಗೊಳ್ಳುವರು ಎಂದು ಹೇಳಿದರು.
ಕರಿಯಮ್ಮದೇವಿ ಜಾತ್ರಾ ಸಮಿತಿ ಅಧ್ಯಕ್ಷ ಐ.ಬಿ. ಮೈದರಗಿ, ಸುಧಾರಣಾ ಸಮಿತಿ ಕಾರ್ಯಾಧ್ಯಕ್ಷ ಸಿ.ಕೆ. ಮಾಳಶೆಟ್ಟಿ, ಪದಾಧಿ ಕಾರಿಗಳಾದ ಆರ್‌.ಬಿ. ಕುಲಕರ್ಣಿ, ಜಿ.ಕೆ. ತಮ್ಮಣ್ಣವರ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು ?

India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.