ಜಿಗಜಿಣಗಿ ರಾಜಕೀಯ ನಿವೃತ್ತಿ ಪಡೆಯಲಿ: ಪಾಟೀಲ
Team Udayavani, Apr 5, 2019, 4:14 PM IST
ವಿಜಯಪುರ: ಮೈತ್ರಿ ಅಭ್ಯರ್ಥಿ ಡಾ| ಸುನೀತಾ ಚವ್ಹಾಣ ನಾಮಪತ್ರ ಸಲ್ಲಿಸುವ ಮೆರವಣಿಗೆಯಲ್ಲಿ ಉಭಯ ಪಕ್ಷಗಳ ಸಚಿವ-ಶಾಸಕರು ಪಾಲ್ಗೊಂಡಿದ್ದರು.
ವಿಜಯಪುರ: ನಾಲ್ಕು ದಶಕಗಳ ಕಾಲ ಅಧಿಕಾರದ ರಾಜಕೀಯದಲ್ಲಿದ್ದು, 20 ವರ್ಷಗಳಿಂದ ಸಂಸದರಾಗಿ, ಕೇಂದ್ರದಲ್ಲಿ
ಸಚಿವರಾಗಿದ್ದರೂ ರಮೇಶ ಜಿಗಜಿಣಗಿ ಜಿಲ್ಲೆಗೆ ನೀಡಿದ ಕೊಡುಗೆ ಶೂನ್ಯ. ಹೀಗಾಗಿ ಜಿಗಜಿಣಗಿ ಅವರು ರಾಜಕೀಯ ನಿವೃತ್ತಿ ಪಡೆಯುವುದು ಸೂಕ್ತ ಎಂದು ಗೃಹ ಸಚಿವ ಡಾ| ಎಂ.ಬಿ. ಪಾಟೀಲ ಕುಟುಕಿದರು.
ಗುರುವಾರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಾಮಪತ್ರದ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿದ ಅವರು, 20 ವರ್ಷ ಸಂಸದರಾದರೂ ಸಂಸತ್‌ನಲ್ಲಿ ಒಂದೇ ಒಂದು ಪ್ರಶ್ನೆ ಕೇಳಿಲ್ಲ. ಈಗ ಕೇಂದ್ರದಲ್ಲಿ ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಸಚಿವರಾದರೂ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಇರುವ ಒಂದು ಹಳ್ಳಿಗೂ ನೀರು ಕೊಡಲು ವಿಫಲವಾಗಿದ್ದಾರೆ. ಇಂಥವರು ಇನ್ನು ರಾಜಕೀಯದಿಂದ ನಿವೃತ್ತಿ ಪಡೆಯುವುದು ಸೂಕ್ತ ಎಂದು ಟೀಕಿಸಿದರು.
ಜಿಲ್ಲೆಗೆ ಎನ್.ಟಿ.ಪಿ.ಸಿ. ತರುವಲ್ಲಿ ಅಂದು ಸಚಿವರಾಗಿದ್ದ ಸುಶೀಲ ಕುಮಾರ ಶಿಂಧೆ ಕೊಡುಗೆಯೇ ಹೊರತು ಇದರಲ್ಲಿ ಜಿಗಜಿಣಗಿ ಅವರ ಸಣ್ಣ ಪ್ರಯತ್ನವೂ ಇಲ್ಲ. ಜಿಲ್ಲೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣದಲ್ಲಿ ರಾಜ್ಯ ಸರ್ಕಾರದ ಪಾಲಿದೆ. ಜಿಗಜಿಣಗಿ ಅವರ
ಕೊಡುಗೆ ಶೂನ್ಯ. ವಿಜಯಪುರದ ಮೊದಲ ಸಂಸದ ರಾಜಾರಾಮ ದುಬೆ ಅವರು ವಿಮಾನ ನಿಲ್ದಾಣಕ್ಕೆ ನೆಹರುಗೆ ಪತ್ರ ಬರೆದಿದ್ದರು.
ಆದರೆ ಇಂದಿಗೂ ವಿಮಾನ ಹಾರಿಲ್ಲ. ಕಳೆದ ಚುನಾವಣೆಯಲ್ಲಿ ಈ ಕುರಿತು ಜಿಗಜಿಣಿ ನೀಡಿದ್ದ ಭರವಸೆಯೂ ಹುಸಿಯಾಗಿದೆ ಎಂದು ವಾಗ್ಧಾಳಿ ನಡೆಸಿದರು.
ಇನ್ನು ಚುನಾವಣಾ ಪೂರ್ವ ಕ್ಷೇತ್ರ ಹೊಂದಾಣಿಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡುವಂತೆ ಕೇಳಿದ್ದು ನಿಜ. ಆದರೆ ಪಕ್ಷದ ವರಿಷ್ಠರ ನಿರ್ಧಾರದಂತೆ ವಿಜಯಪುರ ಕ್ಷೇತ್ರ ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ. ಇನ್ನು ನಮ್ಮಲ್ಲಿ ಯಾವುದೇ ಅತೃಪ್ತಿ ಇಲ್ಲ. ಮೈತ್ರಿ ಪಕ್ಷಗಳ ನಾಯಕರ ಮಧ್ಯೆ ಯಾವ ಭಿನ್ನಾಭಿಪ್ರಾಯವೂ ಇಲ್ಲ. ಎರಡೂ ಪಕ್ಷಳ ನಾಯಕರು-ಕಾರ್ಯಕರ್ತರು ಒಗ್ಗಟ್ಟಿನಿಂದ
ಪರಿಶ್ರಮದಿಂದ ಕೆಲಸ ಮಾಡಲಿದ್ದೇವೆ. ಉಭಯ ಪಕ್ಷಗಳ ಕಾರ್ಯಕರ್ತರು ಕೂಡ ಒಗ್ಗಟ್ಟಿನಿಂದ ಕೆಲಸ ಮಾಡಿ ಡಾ| ಸುನಿತಾ
ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.