7ರಂದು ಬ್ರಾಹ್ಮಣ ಮಹಾಸಭಾ ಶತಮಾನೋತ್ಸವ ಸಂಭ್ರಮ
Team Udayavani, Apr 5, 2019, 5:30 PM IST
ಶಿವಮೊಗ್ಗ: ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಹಮ್ಮಿಕೊಂಡಿದ್ದ ಮಹಾಸಭಾದ ಶತಮಾನೋತ್ಸವದ ಸಂಭ್ರಮಾಚರಣೆಯ ಸಮಾರೋಪ ಸಮಾರಂಭವನ್ನು ಏ.7ರಂದು ಶ್ರೀ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಸಿ. ನಟರಾಜ್ ಭಾಗವತ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭಾದ ಶತಮಾನೋತ್ಸವದ ವರ್ಷಾಚರಣೆಯ ಅಂಗವಾಗಿ
ಜಿಲ್ಲಾದ್ಯಂತ ಅನೇಕ ಸ್ಥಳಗಳಲ್ಲಿ ವರ್ಷಪೂರ್ತಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಪೂರೈಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಧಾರ್ಮಿಕ, ಉಪನ್ಯಾಸ, ಸಂಗೀತ, ಸಾಹಿತ್ಯ, ಯಕ್ಷಗಾನ ಹರಿಕಥೆ, ರಾಜ್ಯಮಟ್ಟದ ಸಂಸ್ಕೃತಿಕ ಸಮ್ಮೇಳನ, ರಕ್ತದಾನ ಶಿಬಿರ ಹೀಗೆ ಹಲವಾರು ಕಾರ್ಯಕ್ರಮಗಳು ನಡೆದಿವೆ ಎಂದರು. ಒಂದು ವರ್ಷದ ಈ ಕಾರ್ಯಕ್ರಮಕ್ಕೆ ಸುಮಾರು 45 ಲಕ್ಷ ರೂ. ಖರ್ಚಾಗಿದ್ದು, ಈ ಹಣವನ್ನು ಯಾವುದೇ ರಾಜಕೀಯ ಪಕ್ಷದ
ಮುಖಂಡರಿಂದಾಗಲೀ, ಸರ್ಕಾರದಿಂದಾಗಲೀ ಪಡೆಯದೆ ಜಿಲ್ಲೆಯ ಸಮಾಜ ಬಾಂಧವರಿಂದಲೇ ಸಂಗ್ರಹಿಸಿ ಖರ್ಚು ಮಾಡಲಾಗಿದೆ. ಈ ಕಾರ್ಯಕ್ರಮವನ್ನು ಯಶಸ್ವಿಯಿಂದ ಪೂರ್ಣಗೊಳಿಸಿದ್ದು, ಈ ಸಂದರ್ಭದಲ್ಲಿ ಸುಮಾರು 20 ಸಾವಿರಕೂ ಹೆಚ್ಚು ಸಮಾಜ ಬಾಂಧವರನ್ನು ಭೇಟಿ ಮಾಡಿದ್ದೇವೆ ಎಂದರು.
ಜಿಲ್ಲಾ ಬ್ರಾಹ್ಮಣ ಮಹಾಸಭಾದಿಂದ ಸಮಾಜದ 150 ಬಡ ಕುಟುಂಬಗಳಿಗೆ ಮಾಸಾಶನ ನೀಡುತ್ತಿದ್ದು, ಬಡ ಕುಟುಂಬದವರ ಆರೋಗ್ಯದ ಚಿಕಿತ್ಸೆಗೆ ಹಾಗೂ ಅವರ ಮಕ್ಕಳ ಶಿಕ್ಷಣಕ್ಕೆ ವರ್ಷಕ್ಕೆ ಸುಮಾರು 25 ಲಕ್ಷ ರೂ. ನೀಡಲಾಗುತ್ತಿದೆ ಎಂದರು.
ಏ7ರ ಬೆಳಗ್ಗೆ 7.30 ರಿಂದ ಶ್ರೀ ರಾಮಕಾರಕ ಮಹಾಯಂತ್ರ ಹೋಮ ಆರಂಭವಾಗಲಿದ್ದು, ಇದರಲ್ಲಿ 1 ಸಾವಿರ ಮಹಿಳೆಯರು ಭಾಗವಹಿಸಲಿದ್ದಾರೆ. 9.30ಕ್ಕೆ ಪೂರ್ಣಾಹುತಿ ನಡೆಯಲಿದೆ. 10ಗಂಟೆಗೆ ನಡೆಯುವ ಸಮಾರೋಪ ಸಮಾರಂಭವನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಎನ್.ಕುಮಾರ್ ಉದ್ಘಾಟಿಸಲಿದ್ದು, ಕೆನರಾ ಬ್ಯಾಂಕ್‌ನ ಆಡಳಿತ ನಿರ್ದೇಶಕ ಹಾಗೂ ಸಿಇಒ ಎಂ.ಎಸ್. ಮಹಾಬಲೇಶ್ವರ್ ಸ್ವರ್ಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಬೆಂಗಳೂರಿನ ಹಿರಿಯ ಅಡ್ವೋಕೇಟ್ ಅಶೋಕ್ ಹಾರ್ನಳ್ಳಿ, ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಎನ್. ವೆಂಕಟನಾರಾಯಣ, ಶ್ರೀ ಗಾಯತ್ರಿ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಚ್.ವಿ. ಸುಬ್ರಹ್ಮಣ್ಯ ಉಪಸ್ಥಿತರಿರುವರು ಎಂದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜದ ಹಿರಿಯರಾದ ಹರಸಾಳು ರಂಗನಾಥ ರಾವ್, ಬೆನಕ ಭಟ್ಟರು, ಚಂದ್ರಶೇಖರ ಭಟ್ ಅವರನ್ನು ಸನ್ಮಾನಿಸಲಾಗುವುದು ಎಂದರು. ಬೆಳಗ್ಗೆ 9.30ರಿಂದ ಶ್ರೀ ಮಾತಾ ಮಾಂಗಲ್ಯ ಮಂದಿರದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಎಂದರು. ಗೋಷ್ಠಿಯಲ್ಲಿ ಎ.ಬಾಲಸುಬ್ರಹ್ಮಣ್ಯ, ಯು.ಎಸ್. ಕೇಶವಮೂರ್ತಿ, ಕೆ.ಆರ್. ಭಾಸ್ಕರ್, ಕಿಶೋರ್ ಶೀರ್ನಾಳಿ, ಸಿ.ಎಂ. ಕುಲಕರ್ಣಿ, ಸೂರ್ಯನಾರಾಯಣ, ಸುಕುಮಾರ್ ಇದ್ದರು.
1918ರ ಮಾ. 1ರಂದು ಆರಂಭವಾದ ಶತಮಾನೋತ್ಸವ ಸಂಭ್ರಮವನ್ನು 2018ರ ಏ. 8ರಿಂದ ವಿಜೃಂಭಣೆಯಿಂದ ಆರಂಭಿಸಿದ್ದು, 1037 ದಂಪತಿಗಳ ಸಾಮೂಹಿಕ ಸತ್ಯನಾರಾಯಣ ಪೂಜೆಯಿಂದ ಆರಂಭವಾದ ಶತಮಾನೋತ್ಸವ ಕಾರ್ಯಕ್ರಮವನ್ನು ಮಾ. 31ರವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಸೇರಿ ಒಟ್ಟು 125 ಕಾರ್ಯಕ್ರಮವನ್ನು ನೆರವೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.