ಸಮಗ್ರ ಅಭಿವೃದ್ದಿಗೆ ಪ್ರಮೋದ್ ಗೆಲುವು ಅಗತ್ಯ: ತೋನ್ಸೆ
Team Udayavani, Apr 6, 2019, 6:45 AM IST
ಬ್ರಹ್ಮಾವರ: ಶಾಸಕರಾಗಿ, ಮಂತ್ರಿಯಾಗಿ ಓರ್ವ ಮಾದರಿ ಜನಪ್ರತಿನಿಧಿ ಯಾಗಿ ಜಿಲ್ಲೆಯ ಸರ್ವ ತೋಮುಖ ಅಭಿವೃದ್ಧಿಗೆ ಕಾರಣರಾದ ಪ್ರಮೋದ್ ಮಧ್ವರಾಜ್ ಅವರನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕಾಗಿದೆ ಎಂದು ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ ಹೇಳಿದರು.
ಅವರು ಬ್ರಹ್ಮಾವರ ಬ್ಲಾಕ್‌ನ ಆರೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಮೋದಿ ಮರಳು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಅವರು ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಮೋದಿ ನೇತೃತ್ವದ ಸರಕಾರ ಜನರನ್ನು ಮರಳು ಮಾಡಿದ್ದು ಬಿಟ್ಟರೆ ಜನರ ಸ್ಥಿತಿಗತಿ ಬದಲಾವಣೆಯ ಕುರಿತು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಅಸಮರ್ಪಕ ನೀತಿಗಳಿಂದಾಗಿ ದೇಶದ ಜನತೆ ಸಮಸ್ಯೆಗಳನ್ನು ಅನುಭವಿಸುತ್ತಿರುವುದಲ್ಲದೆ ಅವರ ಜನಜೀವನವೇ ದುಸ್ತರವಾಗಿದೆೆ ಎಂದರು.
ಬಹ್ಮಾವರ ಬ್ಲಾಕ್ ಚುನಾವಣಾ ಉಸ್ತುವಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಮಾತನಾಡಿ, ಅಭಿವೃದ್ದಿಗೆ ಮತ್ತೂಂದು ಹೆಸರೇ ಪ್ರಮೋದ್ ಮಧ್ವರಾಜ್ ಆಗಿದ್ದು ಅವರ ಅವ ಧಿಯಲ್ಲಿ ಉಡುಪಿ ಕ್ಷೇತ್ರ ಸರ್ವತೋಮುಖ ಅಭಿವೃದ್ಧಿಯನ್ನು ಕಂಡಿದೆ. ಅಭಿವೃದ್ಧಿಪರ ದೃಷ್ಟಿಕೋನವಿಲ್ಲದ ನಿಷ್ಕ್ರಿಯ ಸಂಸದೆ ಶೋಭಾ ಕರಂದ್ಲಾಜೆಯನ್ನು ಶತಾಯಗತಾಯ ಸೋಲಿಸಲು ಒಗ್ಗಾಟ್ಟಾಗಿ ಶ್ರಮಿಸೋಣ ಎಂದರು.
ಕೆಪಿಸಿಸಿ ಕಾರ್ಯದರ್ಶಿ ವೆರೋನಿಕಾ ಕರ್ನೆಲಿಯೊ, ಕಲ್ಯಾಣಪುರ ಜಿ.ಪಂ. ಕ್ಷೇತ್ರದ ಉಸ್ತುವಾರಿ ರಮೇಶ್ ಶೇಟ್, ಸೂರ್ಯ ಸಾಲಿಯಾನ್, ರಮೇಶ್ ಶೆಟ್ಟಿ, ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.