ವಾರಾಣಸಿಯಲ್ಲಿಯೇ ಸ್ಪರ್ಧೆ
Team Udayavani, Apr 6, 2019, 6:00 AM IST
ಹೊಸದಿಲ್ಲಿ: ವಾರಾಣಸಿ ಹೊರತುಪಡಿಸಿ ಎರಡನೇ ಕ್ಷೇತ್ರದಲ್ಲಿ ಸ್ಪರ್ಧಿಸುವ ಇರಾದೆ ಇಲ್ಲ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ತಿಳಿಸಿದ್ದಾರೆ. “ಎಬಿಪಿ’ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪಕ್ಷ ತಮ್ಮನ್ನು ವಾರಾಣಸಿಯಿಂದ ಸ್ಪರ್ಧಿಸುವಂತೆ ಸೂಚಿಸಿದೆ. ನಾಮಪತ್ರ ಸಲ್ಲಿಕೆ ಬಗ್ಗೆ ನಾಯಕರ ಜತೆಗೆ ಸಮಾಲೋಚನೆ ಮಾಡಿದ ಬಳಿಕ ಆ ದಿನ ಸಲ್ಲಿಕೆ ಮಾಡುವುದಾಗಿ ತಿಳಿಸಿದ್ದಾರೆ. 2014ರಲ್ಲಿಯೂ ಕೂಡ ಪಕ್ಷದ ನಾಯಕರು ಅಲ್ಲಿಂದಲೇ ಸ್ಪರ್ಧಿಸುವಂತೆ ಸೂಚನೆ ಮಾಡಿದ್ದರಿಂದ ಕಣಕ್ಕೆ ಇಳಿದಿದ್ದೆ ಎಂದು ಹೇಳಿದ್ದಾರೆ. ಈ ಕ್ಷೇತ್ರದ ಸಂಸದರಾಗಿದ್ದ ಮುರಳೀ ಮನೋಹರ ಜೋಶಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಸೋಲು ಅಥವಾ ಗೆಲುವು ಎರಡೂ ಕೂಡ ಜನರ ತೀರ್ಮಾನ ಎಂದಿದ್ದಾರೆ.
ನಮ್ಮ ಕ್ರಮಗಳಿಂದ ಪರಾರಿ: ಸರಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ವಂಚಿಸಿ ಪರಾರಿಯಾದ ನೀರವ್ ಮೋದಿ, ವಿಜಯ ಮಲ್ಯ, ಮೆಹುಲ್ ಚೋಸ್ಕಿ ವಿರುದ್ಧ ನಮ್ಮ ನೇತೃತ್ವದ ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಾರಂಭಿಸಿತು. ಅದರಿಂದ ಅವರು ಪಲಾಯನ ಮಾಡಿದರು ಎಂದಿದ್ದಾರೆ. ಈಗ ಅವರು ಯಾವ ದೇಶದಲ್ಲಿದ್ದಾರೆಯೋ ಅಲ್ಲಿನ ಸರಕಾರಗಳು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಡಿ, ಜೈಲು ಪಾಲಾಗುವಂತೆ ಮಾಡಿದ್ದೇವೆ ಎಂದಿದ್ದಾರೆ. ಈ ಮೂಲಕ ಸ್ವರ್ಣೋದ್ಯಮಿ ನೀರವ್ ಮೋದಿಗೆ ಲಂಡನ್ ಕೋರ್ಟ್ ಜಾಮೀನು ನಿರಾಕರಿಸಿದ್ದನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ ಪ್ರಧಾನಿ. ದೇಶದಲ್ಲಿಯೂ ಕೂಡ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದಿದ್ದಾರೆ ಪ್ರಧಾನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.