ಬಿಜೆಪಿಯಿಂದ ಕೈ ಪ್ರಣಾಳಿಕೆ ಅಪಪ್ರಚಾರ

ಬಿಜೆಪಿ ಮುಖಂಡರಂತೆ ಸುಳ್ಳು ಹೇಳಲ್ಲ ಕೊಟ್ಟ ಭರವಸೆ ಕಾಂಗ್ರೆಸ್‌ ಪಕ್ಷ ಈಡೇರಿಸುತ್ತೆ

Team Udayavani, Apr 6, 2019, 1:49 PM IST

06-April-19

ಕಲಬುರಗಿ: ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಸದಸ್ಯ ಸೈಯದ್‌ನಾಸೀರ್‌ ಹುಸೇನ್‌ ಮಾತನಾಡಿದರು.

ಕಲಬುರಗಿ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಬಲಪಡಿಸಿ ಕಾಪಾಡುವ ನಿಟ್ಟಿನಲ್ಲಿ ದೇಶದ್ರೋಹ ಕಾನೂನು ಪರಿಶೀಲನೆ ಮತ್ತು ಜನರ ಸ್ವಾತಂತ್ರ್ಯ ನಿರ್ಬಂಧಿಸುವ ಅಪ್ರಸ್ತುತ ಕಾಯ್ದೆಗಳನ್ನು ತೆಗೆದುಹಾಕುವ ಭರವಸೆಯನ್ನು ಕಾಂಗ್ರೆಸ್‌ ಪಕ್ಷ ನೀಡಿದೆ ಅಷ್ಟೆ. ಆದರೆ, ಇದನ್ನು ಬಿಜೆಪಿಯವರು
ತಪ್ಪಾಗಿ ಅರ್ಥೈಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಎಐಸಿಸಿ ವಕ್ತಾರ, ರಾಜ್ಯಸಭಾ ಸದಸ್ಯ ಸೈಯದ್‌ ನಾಸೀರ್‌ ಹುಸೇನ್‌ ಕಿಡಿಕಾರಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ತಜ್ಞರು, ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿ, ದೇಶದ ಎಲ್ಲ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಣಾಳಿಕೆ ರೂಪಿಸಿದೆ. ಅದೇ ರೀತಿ ಪ್ರತಿಯೊಬ್ಬ ನಾಗರಿಕನ ಅಭಿವ್ಯಕ್ತಿ ಸ್ವಾತಂತ್ರ್ಯ
ಕಾಪಾಡುವುದಾಗಿ ಕಾಂಗ್ರೆಸ್‌ ಭರವಸೆ ಕೊಟ್ಟಿದೆ. ಗಾಂಧಿಯನ್ನು ಕೊಂದವರು ದೇಶದ್ರೋಹಿಗಳೇ ಹೊರತು, ಕಾಂಗ್ರೆಸ್‌ನವರಲ್ಲ. ಕಾಂಗ್ರೆಸ್‌ ಪಕ್ಷ ಎಂದರೆ ಅಭಿವೃದ್ಧಿ, ಬಿಜೆಪಿ ಎಂದರೆ ಅಪಪ್ರಚಾರ ಎಂದು ಟೀಕಿಸಿದರು.

ಕಾಂಗ್ರೆಸ್‌ ಪಕ್ಷ ಹಿಂದಿನಿಂದಲೂ ರೈತರು, ಬಡವರು, ನಿರುದ್ಯೋಗ ಸಮಸ್ಯೆ ಪರಿಹರಿಸುವುದು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಯುಪಿಎ ಸರ್ಕಾರ ಜಾರಿಗೆ
ತಂದ ನರೇಗಾ ಯೋಜನೆಯಿಂದ 14 ಕೋಟಿ ಜನರು ಆರ್ಥಿಕವಾಗಿ ಸದೃಢರಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿರುದ್ಯೋಗ ಸಮಸ್ಯೆ 45 ವರ್ಷಗಳಲ್ಲೇ
ಅಧಿಕವಾಗಿದೆ. ಕೃಷಿ ಮತ್ತು ಕೈಗಾರಿಕಾ ವಲಯ ಕುಂಠಿತಗೊಂಡಿದೆ ಎಂದು ದೂರಿದರು.

ಪ್ರಧಾನಿ ಮೋದಿ ತಾವು ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಕಾಂಗ್ರೆಸ್‌ ಪಕ್ಷ ಬಿಜೆಪಿಯಂತೆ ಅಲ್ಲ. ಕಾಂಗ್ರೆಸ್‌ ಪಕ್ಷ ಕೊಟ್ಟ ಭರವಸೆಗಳನ್ನು ಈಡೇರಿಸಿದೆ, ಈಡೇರಿಸುತ್ತೇವೆ ಎಂಬ
ಘೋಷ ವಾಕ್ಯದೊಂದಿಗೆ ಈ ಚುನಾವಣೆಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಬಡತನ ನಿರ್ಮೂಲನೆ ದಿಶೆಯಲ್ಲಿ ದೇಶದ ಶೇ.20ರಷ್ಟು ಎಂದರೆ 5 ಕೋಟಿ ಕಡುಬಡವ ಕುಟುಂಬಗಳಿಗೆ ವರ್ಷಕ್ಕೆ 72 ಸಾವಿರ ರೂಪಾಯಿಗಳನ್ನು ಖಾತೆಗೆ ಹಾಕುವ “ನ್ಯಾಯ್‌’ ಯೋಜನೆ ಜಾರಿ ವಾಗ್ವಾನ ನೀಡಲಾಗಿದೆ. 2020ರೊಳಗೆ 34 ಕೋಟಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದರಲ್ಲಿ ಕೇಂದ್ರ ಸರ್ಕಾರದ 4 ಲಕ್ಷ ಹುದ್ದೆಗಳು, ಹಲವು ರಾಜ್ಯಗಳಲ್ಲಿ ಖಾಲಿ ಇರುವ 20 ಲಕ್ಷ ಹುದ್ದೆಗಳು, ಸೇವಾ ಆದ್ಯತಾ ವಲಯದ 10 ಲಕ್ಷ ಹುದ್ದೆಗಳು ಸೇರಿವೆ ಎಂದರು.

ಈಗಾಗಲೇ ಕಾಂಗ್ರೆಸ್‌ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಹೇಳಿದಂತೆ ರೈತರ ಸಾಲ ಮನ್ನಾ ಮಾಡಲಾಗಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೂ ರೈತರ ಸಾಲಮನ್ನಾ ಮಾಡಲಾಗುತ್ತದೆ. ಈ ಮೂಲಕ
ಸಾಲ ಮನ್ನಾದಿಂದ ಸಾಲ ಮುಕ್ತಿಯತ್ತ ರೈತರನ್ನು ಕೊಂಡೊಯ್ಯಲಾಗುವುದು. ಜತೆಗೆ ಕೃಷಿ ಆಯೋಗ ರಚನೆ ಹಾಗೂ ಕೃಷಿ ಬಜೆಟ್‌ ಮಂಡಿಸುತ್ತೇವೆ. ಈಗಿರುವ ಜಿಎಸ್‌ಟಿ ಸರಳಿಕೃತಗೊಳಿಸಿ ಏಕರೂಪ ತೆರಿಗೆಯ ಜಿಎಸ್‌ಟಿ-2 ಜಾರಿಗೆ ತರಲಾಗುವುದು ಎಂದು ಹೇಳಿದರು.

ಒಂದರಿಂದ 12ನೇ ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುವುದು. ಮೊದಲ ಅಧಿವೇಶನದಲ್ಲೇ ಮಹಿಳೆಯರಿಗೆ ಲೋಕಸಭೆ, ವಿಧಾನಸಭೆ ಹಾಗೂ ಕೇಂದ್ರ ಸರ್ಕಾರಿ ಹುದ್ದೆಗಳಲ್ಲಿ ಶೇ.33ರಷ್ಟು ಮೀಸಲಾತಿ ಒದಗಿಸುವ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರಲಾಗುವುದು ಎಂದು ವಿವರಿಸಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ವಿಧಾನ ಪರಿಷತ್‌ನ ಸದಸ್ಯರಾದ ಯು.ಬಿ. ವೆಂಕಟೇಶ, ಕೆ.ಸಿ. ಕೊಂಡಯ್ಯ, ಶರಣಪ್ಪ ಮಟ್ಟೂರು, ಮುಖಂಡರಾದ ಕೃಷ್ಣಾಜಿ ಕುಲಕರ್ಣಿ, ಸತ್ಯಪ್ರಕಾಶ ಹಾಜರಿದ್ದರು.

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ಜಾರಿಯಾದ 371ನೇ (ಜೆ) ಕಲಂ ಅಡಿ
ಮೀಸಲಾತಿ ನೀಡುವುದು ಕಡ್ಡಾಯವಾಗಿದೆ. ಅದರಂತೆ ಇದುವರೆಗೆ 30,184 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇತ್ತೀಚೆಗೆ 10 ಸಾವಿರ
ಶಿಕ್ಷಕರ ಹುದ್ದೆಗಳಲ್ಲಿ ಈ ಭಾಗದಲ್ಲಿ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಜತೆಗೆ ಹೈ.ಕ ಭಾಗದ ಅಭ್ಯರ್ಥಿಗಳಿಗೆ ಐದು ಕೃಪಾಂಕ ನೀಡುವಂತೆ ಮನವಿ ಮಾಡಲಾಗಿದೆ.
.ಶರಣಪ್ಪ ಮಟ್ಟೂರು, ಎಂಎಲ್‌ಸಿ

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.