ಚುನಾವಣೆ ಬಳಿಕ ಗ್ರಾ.ಪಂ. ಮಟ್ಟದಲ್ಲಿ ಅಹವಾಲು ಸ್ವೀಕಾರ: ಎಚ್‌ಡಿಕೆ
Team Udayavani, Apr 8, 2019, 6:30 AM IST
ಉಡುಪಿ: ಚುನಾವಣೆ ಬಳಿಕ ತಿಂಗಳಿಗೆ ಹತ್ತು ದಿನವಾದರೂ ಗ್ರಾ.ಪಂ. ಮಟ್ಟದಲ್ಲಿ ಅಧಿಕಾರಿಗಳನ್ನು ಕರೆದೊಯ್ದು ಜನರ ಅಹವಾಲು ಸ್ವೀಕರಿಸಲಿದ್ದೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಗೆ ರವಿವಾರ ಭೇಟಿ ನೀಡಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 12 ವರ್ಷಗಳ ಹಿಂದೆ ನಾನಿದನ್ನು ಮಾಡಿದ್ದೆ. ಚುನಾವಣೆ ಬಳಿಕ ಅದೇ ಪ್ರಯೋಗವನ್ನು ಮತ್ತೆ ನಡೆಸುತ್ತೇನೆ ಎಂದರು.
ಕರಾವಳಿ ಮೈತ್ರಿ ಮಾದರಿ
ನಮ್ಮಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು. ಇದನ್ನು ಬಗೆಹರಿಸಿಕೊಂಡು 22-23 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತೇವೆ. ಉಡುಪಿ ಚಿಕ್ಕಮಗಳೂರು, ದ.ಕ., ಉ.ಕ. ಜಿಲ್ಲೆಗಳಲ್ಲಿ ಯಾವುದೇ ಗೊಂದಲಗಳಿಲ್ಲ.
ಇಂತಹ ಮೈತ್ರಿ ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ. ಕರಾವಳಿ ಭಾಗದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಇಲ್ಲ. ಇಲ್ಲಿ ಗೆಲ್ಲಬೇಕಾದರೆ ಕಾಂಗ್ರೆಸ್‌ನವರು ಸಹಾಯ ಮಾಡಬೇಕು ಎಂದರು.
13 ಪಕ್ಷಗಳು ಕಿಚಡಿ ಅಲ್ಲವೆ?
ಬಿಜೆಪಿಯವರು ವಿರೋಧ ಪಕ್ಷಗಳನ್ನು ಕಿಚಡಿ ಪಕ್ಷ ಎನ್ನುತ್ತಾರೆ. ಹಾಗಿದ್ದರೆ ಇವರೇಕೆ 13 ಪಕ್ಷಗಳನ್ನು ಸೇರಿಸಿಕೊಂಡು ಹೋಗುತ್ತಿದ್ದಾರೆ ಎಂದು ಪ್ರಶ್ನಿಸಿದರು. ಧರ್ಮದ ಹೆಸರಿನಲ್ಲಿ ಬಿಜೆಪಿಯವರು ಅಂತರ ಸೃಷ್ಟಿಸಿ ಲಾಭ ಪಡೆಯುತ್ತಿದ್ದಾರೆ? ಇವರಿಂದ ಕರಾವಳಿಗೆ ಏನು ಕೊಡುಗೆ ಇದೆ. ದೇವೇಗೌಡರು ಪ್ರಧಾನಿಯಾಗಿದ್ದಾಗ ಪಾಕಿಸ್ಥಾನದ ಜತೆ ಸಂಘರ್ಷ, ಆಂತರಿಕ ಸಂಘರ್ಷವೂ ಇದ್ದಿರಲಿಲ್ಲ ಎಂದರು.
ಕಾಂಗ್ರೆಸ್- ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ನಾಯಕರಾದ ಆಸ್ಕರ್ ಫೆರ್ನಾಂಡಿಸ್, ಬ್ಲೋಸಂ ಫೆರ್ನಾಂಡಿಸ್, ಸಚಿವೆ ಡಾ|ಜಯಮಾಲಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಎಸ್.ಎಲ್.ಭೋಜೇಗೌಡ, ಮಾಜಿ ಸಚಿವ ವಿನಯಕುಮಾರ ಸೊರಕೆ, ಮಾಜಿ ಶಾಸಕರಾದ ಯು.ಆರ್.ಸಭಾಪತಿ, ಎಚ್.ಗೋಪಾಲ ಭಂಡಾರಿ, ನಾಯಕ ರಾಕೇಶ್ ಮಲ್ಲಿ ಮೊದಲಾದವರು ಉಪಸ್ಥಿತರಿದ್ದರು. ಕೆಪಿಸಿಸಿ ಕಾರ್ಯದರ್ಶಿ ಎಂ.ಎ.ಗಫೂರ್ ಕಾರ್ಯಕ್ರಮ ನಿರ್ವಹಿಸಿದರು.
ಮೊದಲ ಭೇಟಿ
ಇದೇ ಮೊದಲ ಬಾರಿಗೆ ಕಾಂಗ್ರೆಸ್ ಭವನಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.