ಪ್ರಧಾನಿ ರ್ಯಾಲಿಗೆ ಲಕ್ಷ ಜನ: ಆರ್‌.ಅಶೋಕ್‌

Team Udayavani, Apr 8, 2019, 3:00 AM IST

pradhani-rall

ಬೆಂಗಳೂರು: ಲೋಕಸಭೆ ಚುನಾವಣೆಗೆ ಭರದ ಸಿದ್ಧತೆಯಲ್ಲಿರುವ ರಾಜ್ಯ ಬಿಜೆಪಿಗೆ ಮೋದಿಯರ ಪ್ರಚಾರ ರ್ಯಾಲಿ ಇನ್ನಷ್ಟು ಶಕ್ತಿ ತುಂಬಲಿದ್ದು, ಏ.13ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ರ್ಯಾಲಿಗೆ ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ.

ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರ ಸಭೆ ಸಿದ್ಧತೆಗಳಿಗೆ ಅರಮನೆ ಮೈದಾನದಲ್ಲಿ ಭಾನುವಾರ ಚಾಲನೆ ನೀಡಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ಮೋದಿಯವರ ಪ್ರಚಾರ ರ್ಯಾಲಿಗೆ ಸಿದ್ಧತೆ ಆರಂಭಿಸಿದ್ದೇವೆ. ಒಂದು ಲಕ್ಷಕ್ಕೂ ಅಧಿಕ ಜನ ಸೇರಿಸುವ ಗುರಿಯಿದ್ದು, ಅದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಿದ್ದೇವೆ ಎಂದರು.

ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ, ಏ.13ರಂದು ಚುನಾವಣಾ ರ್ಯಾಲಿ ಉದ್ದೇಶಿಸಿ ಅರಮನೆ ಮೈದಾನದಲ್ಲಿ ಸಂಜೆ 5.30ಕ್ಕೆ ಭಾಷಣ ಮಾಡಲಿದ್ದಾರೆ.

ಮಂಗಳೂರಿನಲ್ಲಿ ಸಾರ್ವಜನಿಕ ಸಭೆ ಮುಗಿಸಿಕೊಂಡು ಬೆಂಗಳೂರಿಗೆ ಬರಲಿದ್ದಾರೆ. ಅರಮನೆ ಮೈದಾನ ನಮಗೆ ಅದೃಷ್ಟದ ಮೈದಾನ. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲೂ ಇದೇ ಮೈದಾನದಲ್ಲಿ ನರೇಂದ್ರ ಮೋದಿ ಭಾಷಣ ಮಾಡಿದ್ದರು ಎಂದು ಮಾಹಿತಿ ನೀಡಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಗೆಲುವಿಗಾಗಿ ಅತ್ಯಂತ ಯೋಜಿತ ರೀತಿಯಲ್ಲಿ ಪ್ರಚಾರ ಕೈಗೊಂಡಿದ್ದೇವೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪ್ರಚಾರದಲ್ಲಿ ಇನ್ನೂ ಟೇಕಾಫ್ ಆಗಿಲ್ಲ. ಅವರ ವಿಮಾನವಿನ್ನೂ ರನ್‌ವೇಗೂ ಬಂದಿಲ್ಲ ಎಂದು ವ್ಯಂಗ್ಯವಾಡಿದರು.

ಕುಟುಂಬ ಕಲ್ಯಾಣ ಮಾಡುವ ನಾಮಧಾರಿ ರಾಹುಲ್‌ ಗಾಂಧಿ ಬೇಕಾ ಅಥವಾ ಜನಕಲ್ಯಾಣ ಮಾಡುವ ಕಾಮಧಾರಿ ನರೇಂದ್ರ ಮೋದಿ ಬೇಕಾ ಎಂಬ ಪ್ರಶ್ನೆ ಜನರ ಮುಂದಿಡುತ್ತೇವೆ. ಮೈತ್ರಿ ಪಕ್ಷದಲ್ಲಿ ಬಂಡಾಯ, ಗೊಂದಲ ಹೆಚ್ಚಿದೆ. ಬೆಂಗಳೂರಿನಲ್ಲಿ ರೋಷನ್‌ ಬೇಗ್‌, ಮಂಡ್ಯದಲ್ಲಿ ರಮೇಶ್‌ ಬಂಡಿಸಿದ್ದೇಗೌಡ, ಬಾಲಕೃಷ್ಣ ಸೇರಿದಂತೆ ಹಲವರು ಬಂಡಾಯ ಎದ್ದಿದ್ದಾರೆ.

ಬಂಡಾಯ ಶಮನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿದ್ದಾರೆ. ಮಂಡ್ಯದಲ್ಲಿ ಒಬ್ಬ ಹೆಣ್ಣುಮಗಳನ್ನು ಎದುರಿಸಲು ಮಾಜಿ ಪ್ರಧಾನಿ, ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ, ಮೂವರು ಸಚಿವರು, ನಾಲ್ವರು ಶಾಸಕರು ಹರಸಾಹಸ ಪಡುತ್ತಿದ್ದಾರೆ ಎಂದರು.

ನಮ್ಮದು ನಿಂಬೆ ಹಣ್ಣಿನ ಪಕ್ಷವಲ್ಲ: ಜ್ಯೋತಿಷ್ಯ ಅಥವಾ ಮೂಢ ನಂಬಿಕೆಯಲ್ಲಿ ವಿಶ್ವಾಸವಿಡುವ “ನಿಂಬೆಹಣ್ಣಿನ ಪಕ್ಷ’ ನಮ್ಮದಲ್ಲ. ಜೆಡಿಎಸ್‌ ತ್ರೀ-ಜನರೇಷನ್‌, ಫೋರ್‌-ಜನರೇಷನ್‌ ಪಕ್ಷ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಟಾಂಗ್‌ ನೀಡಿದರು.

ಪ್ರಚಾರ ವೇದಿಕೆಗೆ ಭೂಮಿ ಪೂಜೆ: ಬೆಂಗಳೂರಿನ ಅರಮನೆ ಮೈದಾನದನಲ್ಲಿ ಏ.13ರಂದು ಪ್ರಧಾನಿ ಮೋದಿ ಅವರ ಪ್ರಚಾರ ಸಭೆ ನಡೆಯಲಿದ್ದು, ಆ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ವೇದಿಕೆ ನಿರ್ಮಾಣಕ್ಕೆ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಹಾಗೂ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸದಾನಂದ ಗೌಡ ಭೂಮಿ ಪೂಜೆ ನೆರವೇರಿಸಿದರು. ರಾಜ್ಯಸಭೆ ಸದಸ್ಯ ರಾಜೀವ್‌ ಚಂದ್ರಶೇಖರ್‌, ಶಾಸಕರಾದ ಅಶ್ವತ್ಥನಾರಾಯಣ, ರವಿ ಸುಬ್ರಹ್ಮಣ್ಯ, ಅರವಿಂದ ಲಿಂಬಾವಳಿ ಇದ್ದರು.

ಟಾಪ್ ನ್ಯೂಸ್

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.