ಬಹುತೇಕ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣಾಂಶ
Team Udayavani, Apr 8, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವಿನ ಜತೆಗೆ, ಬಿಸಿಲಿನ ಧಗೆಯೂ ಸೇರಿಕೊಂಡಿದ್ದು, ಬಹುತೇಕ ಜಿಲ್ಲೆಗಳಲ್ಲಿ ಎರಡು ಮೂರು ದಿನಗಳಿಂದ ಸಾಮಾನ್ಯಕ್ಕಿಂತಲೂ ಸರಾಸರಿ 2 ಡಿಗ್ರಿ ಸೆಲ್ಸಿಯಸ್ ಹೆಚ್ಚು ತಾಪಮಾನ ದಾಖಲಾಗಿದೆ.
ಬೆಂಗಳೂರು, ಮಂಗಳೂರು, ಗದಗ, ಬಳ್ಳಾರಿ, ರಾಯಚೂರು, ದಾವಣಗೆರೆ, ಚಿತ್ರದುರ್ಗ, ಕಾರವಾರ ಸೇರಿದಂತೆ ಹಲವೆಡೆ ಸಾಮಾನ್ಯಕ್ಕಿಂತಲೂ 1-2 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಧ್ಯೆ, ಶನಿವಾರ ಸಂಜೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆಯಿತು. ಬೇಸಿಗೆ ಧಗೆಗೆ ಕಂಗಾಲಾಗಿದ್ದ ಜನರು ಮಳೆಗೆ ಮೈಯೊಡ್ಡಿ ಖುಷಿಪಟ್ಟರು. ಹುಬ್ಬಳ್ಳಿ, ಧಾರವಾಡ ಸೇರಿ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ತುಂತುರು ಹನಿದಿದೆ.
ಬೆಂಗಳೂರಿನಲ್ಲಿ ಭಾನುವಾರ ಸಾಮಾನ್ಯಕ್ಕಿಂತಲೂ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ಉಷ್ಣಾಂಶ ದಾಖಲಾಗಿದ್ದು, ಸೋಮವಾರವೂ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.