ದೇಶ ವಿರೋಧಿ ಶಕ್ತಿಗಳೊಂದಿಗೆ ಮಮತಾ ನಂಟು: ಮೋದಿ

Team Udayavani, Apr 8, 2019, 6:30 AM IST

MODI-1

ದೇಶವನ್ನು ಒಡೆಯುವ ಹಾಗೂ ದೇಶದಲ್ಲಿ ಎರಡು ಪ್ರಧಾನಿಗಳು ಬೇಕು ಎಂದು ವಾದಿಸುವ ಶಕ್ತಿಗಳೊಂದಿಗೆ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ನಂಟು ಹೊಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಲದ ಕೂಛ…ಬಿಹಾರದಲ್ಲಿ ಪ್ರಚಾರ ರ್ಯಾಲಿ ನಡೆಸಿದ ಅವರು, ಕೇಂದ್ರ ಸರಕಾರದ ಹಲವು ಯೋಜನೆಗಳಿಗೆ ಸ್ಪೀಡ್‌ ಬ್ರೇಕರ್‌ ದೀದಿ ಬ್ರೇಕ್‌ ಹಾಕಿದ್ದಾರೆ. ದೇಶದ ಇತರ ಭಾಗದ ಜನರಿಗೆ ಲಭ್ಯವಾಗುತ್ತಿರುವ ಲಾಭಗಳು ರಾಜ್ಯದ ಜನತೆಗೆ ತಲುಪಲು ಬಿಡುತ್ತಿಲ್ಲ ಎಂದಿದ್ದಾರೆ.

ಶಾರದಾ, ನಾರದ ಹಾಗೂ ರೋಸ್‌ವ್ಯಾಲಿ ಹಗರಣಗಳಿಂದಾಗಿ ರಾಜ್ಯದ ಹೆಸರನ್ನು ದೀದಿ ಹಾಳು ಮಾಡಿದ್ದಾರೆ. ಲೂಟಿ ಮಾಡಿದ ಪ್ರತಿ ಪೈಸೆಗೂ ಈ ಚೌಕಿದಾರ ಲೆಕ್ಕ ಕೇಳುತ್ತಾನೆ. ಮೋದಿ ಮೋದಿ ಎಂಬ ಕೂಗು ದೀದಿಯ ನಿದ್ದೆಗೆಡಿಸಿದೆ. ಚುನಾವಣಾ ಆಯೋಗದ ವಿರುದ್ಧ ಅವರು ತೋರಿಸುತ್ತಿರುವ ಸಿಟ್ಟೇ ಇದಕ್ಕೆ ಉದಾಹರಣೆ ಎಂದಿದ್ದಾರೆ. 7ನೇ ವೇತನ ಆಯೋಗ ಯಾಕೆ ಜಾರಿ ಮಾಡಿಲ್ಲ ಎಂದು ಜನರಿಗೆ ದೀದಿ ಸ್ಪಷ್ಟನೆ ನೀಡಿದ್ದಾರೆಯೇ? ಪರೀಕ್ಷೆ ಬರೆದರೂ ನೇಮಕ ಯಾಕೆ ಆಗುತ್ತಿಲ್ಲ ಎಂದು ನಿಮಗೆ ತಿಳಿಸಿದ್ದಾರೆಯೇ ಎಂದೂ ಮೋದಿ ಪ್ರಶ್ನಿಸಿದರು. ಜತೆಗೆ, ಸದ್ಯದಲ್ಲೇ ದೇಶದಲ್ಲಿ ಫೋನ್‌ ಕರೆಗಳು ಉಚಿತವಾಗಲಿವೆ. ಇಂಟರ್ನೆಟ್‌ ಶುಲ್ಕ ಜಗತ್ತಿನಲ್ಲೇ ಅತಿ ಅಗ್ಗದಲ್ಲಿ ದೊರೆಯಲಿದೆ ಎಂದಿದ್ದಾರೆ.

ಶಾರದಾ ಹಗರಣ ಕುರಿತ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಮಮತಾ ಬ್ಯಾನರ್ಜಿ, “ಶಾರದಾ ಹಗರಣದ ಆರೋಪಿ ಮುಕುಲ್‌ ರಾಯ್‌ ನಿಮ್ಮ ಜೊತೆಗೇ ಇದ್ದಾರಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌, ಪಾಕಿಸ್ಥಾನದ ಮೈತ್ರಿ: ಮಣಿಪುರದಲ್ಲೂ ರವಿವಾರ ರ್ಯಾಲಿ ನಡೆಸಿದ ಪ್ರಧಾನಿ ಮೋದಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಯಾಕೆಂದರೆ ಇಬ್ಬರೂ ಕಲಂ 370 ರದ್ದತಿಗೆ ವಿರೋಧಿಸುತ್ತಿದ್ದಾರೆ. ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡಿದ ಮರುದಿನವೇ ಪಾಕಿಸ್ಥಾನದಿಂದಲೂ ಈ ಬಗ್ಗೆ ಪ್ರತಿಕ್ರಿಯೆ ಬಂದಿದೆ. ಕಲಂ 370ರಲ್ಲಿ ಯಾವುದೇ ಸಾಂವಿಧಾನಿಕ ಬದಲಾವಣೆ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ವಿವರಿಸಿತ್ತು.

ಈ ಬಾರಿ ಆಡಳಿತ ಪರ ಅಲೆಯಿದೆ. ಪ್ರತಿಪಕ್ಷಗಳ ವಿರುದ್ಧವೇ ಜನರು ಸಿಟ್ಟಾಗಿದ್ದಾರೆ ಎಂದು ಮೋದಿ ಹೇಳಿದ್ದಾರೆ. ವಿಪಕ್ಷ‌ ನಾಯಕರು ಈಶಾನ್ಯ ಭಾಗವನ್ನು ಉತ್ಪಾದನೆಯ ಕೇಂದ್ರವನ್ನಾಗಿಸುತ್ತೇನೆ ಎಂದಿ ದ್ದಾರೆ. ಇಷ್ಟು ವರ್ಷಗಳವರೆಗೆ ಅವರು ಯಾವ ಉತ್ಪಾದನೆಯ ಕೇಂದ್ರವನ್ನಾಗಿ ಸಿದ್ದರು ಎಂದು ಮೋದಿ ಪ್ರಶ್ನಿಸಿದ್ದಾರೆ.

ಅಧಿಕಾರದಿಂದ ದೂರವಿಡಲು ಪ್ರಯತ್ನ
ನನ್ನನ್ನು ಅಧಿಕಾರದಿಂದ ದೂರವಿಡಲು ವಿಪಕ್ಷಗಳು ಶತಪ್ರಯತ್ನ ನಡೆಸಿವೆ. ವಿಪಕ್ಷಗಳು ಇದಕ್ಕಾಗಿ ಯಾವ ಮಟ್ಟಕ್ಕಾದರೂ ಇಳಿಯಬಹುದಾಗಿದೆ. ಎನ್‌ಡಿಎ ಸರಕಾರ ಒಂದೆಡೆ ಉಗ್ರರ ವಿರುದ್ಧ ಹೋರಾಟ ನಡೆಸುತ್ತಿದ್ದರೆ ವಿಪಕ್ಷಗಳು ಪಾಕಿಸ್ಥಾನದ ರಾಗ ಹಾಡುತ್ತಿವೆ ಎಂದು ಮೋದಿ ತ್ರಿಪುರಾದ ಉದಯಪುರದಲ್ಲಿ ನಡೆದ ರ್ಯಾಲಿಯಲ್ಲಿ ಟೀಕಿಸಿದ್ದಾರೆ. ತ್ರಿಪುರಾದಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್‌ ಹೊಡೆದಾಡುತ್ತಿವೆ. ಆದರೆ ದಿಲ್ಲಿಯಲ್ಲಿ ಅವರು ಒಟ್ಟಾಗುತ್ತಾರೆ. ತೆರೆಮರೆಯಲ್ಲಿ ಯಾವುದೇ ನಾಟಕ ಇಲ್ಲದೇ ಇದ್ದರೆ, ಕಾಂಗ್ರೆಸ್‌ನ ನಾಮದಾರ್‌ ಯಾಕೆ ಕೇರಳದಲ್ಲಿ ಸ್ಪರ್ಧಿಸಲು ತೆರಳುತ್ತಿದ್ದರು ಎಂದು ಮೋದಿ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.