ಮತದಾನ ಜಾಗೃತಿಗೆ ಕಡಲ ತೀರದಲ್ಲಿ ಮಾನವ ಸರಪಳಿ


Team Udayavani, Apr 8, 2019, 3:57 PM IST

8-April-23

ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಗರದ ಬೆಂಗ್ರೆ ಕಡಲ ತೀರದಲ್ಲಿ ಮತದಾನ ಜಾಗೃತಿಗಾಗಿ ನಡೆದ ಮಾನವ ಸರಪಳಿಯಲ್ಲಿ ಹೆಚ್ಚಿನ ಸಂಖ್ಯೆಯ ಮಂದಿ ಪಾಲ್ಗೊಂಡಿದ್ದರು.

ಮಹಾನಗರ : ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಕರಾವಳಿ ಕಡಲ ತೀರದಾದ್ಯಂತ ‘ಪ್ರಜಾ ಸಂಗಮ’ ಎಂಬ ಮತದಾನ ಜಾಗೃತಿ ಮಾನವ ಸರಪಳಿ ಕಾರ್ಯಕ್ರಮವನ್ನು ರವಿವಾರ ಆಯೋಜಿಸಲಾಗಿತ್ತು.

ಜಿಲ್ಲೆಯ ತಲಪಾಡಿ ಕಡಲ ತೀರದಿಂದ ಉಳ್ಳಾಲ, ಬೆಂಗ್ರೆ, ತಣ್ಣೀರುಬಾವಿ, ಪಣಂಬೂರು, ಸುರತ್ಕಲ್‌, ಸಸಿಹಿತ್ಲು ಕಡಲ
ತೀರದವರೆಗೆ 42 ಕಿ.ಮೀ. ವರೆಗೆ ನಡೆದ ಮಾನವ ಸರಪಣಿಯಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದು ವಿಶೇಷ. ಮತದಾನ ಜಾಗೃತಿಯ ಅಂಗವಾಗಿ ಪ್ರಹಸನ, ಹಾಡು, ಗಾಳಿಪಟ ಉತ್ಸವ
ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ನಗರದ ಬೆಂಗ್ರೆಯಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ
ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಮಾತನಾಡಿ, ಚುನಾವಣೆ ಪ್ರತಿಯೊಬ್ಬರ ಹಕ್ಕು. ಮತದಾನವನ್ನು ಸಂಭ್ರಮಿಸಿ, ಪ್ರತಿಯೊಬ್ಬರೂ ಮತ ಹಾಕಬೇಕು. ಕಡಲ ತೀರದಲ್ಲಿ ಸಹಸ್ರಾರು ಮಂದಿ ಸೇರಿಸಿ ಕಾರ್ಯಕ್ರಮ ಆಯೋಜಿಸಬೇಕು ಎಂಬ ಕನಸ ನನಗಿತ್ತು. ಇದೀಗ ಈಡೇರಿದೆ. ಬೆಂಗ್ರೆ ಕಡಲ ತೀರವನ್ನು ಮತ್ತಷ್ಟು ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.

ಅಭಿವೃದ್ಧಿಗೆ ಮತ ನೀಡಿ
ರಾಜ್ಯ ಯುವ ಸಮಿತಿಯ ರಾಯಭಾರಿ, ಬಹುಮುಖ ಪ್ರತಿಭೆ ಶಬರಿ ಗಾಣಿಗ ಮಾತನಾಡಿ, ಯುವ ಜನಾಂಗ ದೇಶದ ಅಭಿವೃದ್ಧಿಗೆ ತಮ್ಮ ಅತ್ಯಮೂಲ್ಯವಾದ ಮತವನ್ನು ನೀಡಿ ಎಂದು ಹೇಳಿದರು. ಇದೇ ವೇಳೆ ದ.ಕ. ಜಿಲ್ಲಾ ಪಂಚಾಯತ್‌ ಸಿಇಒ ಡಾ| ಆರ್‌. ಸೆಲ್ವಮಣಿ,
ಪಣಂಬೂರು ಬೀಚ್‌ ಅಭಿವೃದ್ಧಿ ನಿಗಮದ ಸಿಇಒ ಯತೀಶ್‌ ಬೈಕಂಪಾಡಿ ಸೇರಿದಂತೆ ಮತ್ತಿತರರು ಇದ್ದರು.

ಸಸಿಹಿತ್ಲು: ಮಾನವ ಸರಪಳಿ ನಿರ್ಮಿಸಿ ಜಾಗೃತಿ
ಸಸಿಹಿತ್ಲು:
ಮತದಾನ ಜಾಗೃತಿಗಾಗಿ ಸಸಿಹಿತ್ಲು ಬೀಚ್‌ನಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘು, ನೆಹರೂ ಯುವ ಕೇಂದ್ರದ ರಘುವೀರ ಸೂಟರ್‌ಪೇಟೆ, ಹಾಗೂ ಮೂಲ್ಕಿ ಹೋಬಳಿಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು,ಕಂದಾಯ ಇಲಾಖೆಯ ಸಿಬಂದಿಗಳು ಪಂಚಾಯತ್‌ ಸಿಬಂದಿಗಳು ಸಸಿಹಿತ್ಲು ವಿನಿಂದ ಸುರತ್ಕಲ್‌ ಹೊರಗೆ 14 ಕಿಲೋಮೀಟರ್‌ ವ್ಯಾಪ್ತಿಯಲ್ಲಿ 14ಸಾವಿರ ಮಂದಿ ಭಾಗವಹಿಸಿದ್ದರು.

ಉಳ್ಳಾಲದಲ್ಲಿ ಮರಳು ಶಿಲ್ಪ ರಚನೆ, ವಿವಿಧ ಸ್ಪರ್ಧೆ
ಉಳ್ಳಾಲ:
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಮತ್ತು ಉಳ್ಳಾಲ ನಗರಸಭೆ ವತಿಯಿಂದ ಎ. 18ರಂದು “ತಪ್ಪದೇ ಮತ
ದಾನ ಮಾಡ ಬನ್ನಿ’ ಎನ್ನುವ ಘೋಷ ವಾಕ್ಯದಡಿ ಉಳ್ಳಾಲದ ಸಮುದ್ರ ತೀರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಳೊಂದಿಗೆ
ಮತಾದನ ಜಾಗೃತಿ ಕುರಿತ ಹಬ್ಬ ನಡೆಯಿತು.

ಕಿನ್ಯಾ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಲದ ಆಶ್ರಯದಲ್ಲಿ ಮತದಾನ ಜಾಗೃತಿಯ ಯಕ್ಷಗಾನ,
ಕಲಾವಿದ ಜಯಪ್ರಕಾಶ್‌ ಆಚಾರ್ಯ ಅವರ ನೇತೃತ್ವದ ಸ್ಥಳೀಯ ಸ್ಪರ್ಶ ಕಲಾವಿದರಿಂದ ಮರಳು ಶಿಲ್ಪಕಲೆ, ಉಳ್ಳಾಲ ಕಡಲ ಕಿನಾರೆಯಲ್ಲಿ ಬಲೆ ಬೀಸಿ ಮೀನು ಹಿಡಿಯುವ ಸ್ಪರ್ಧೆ, ರೋಷನಿ
ನಿಲಯ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತೆ ಜಾಗೃತಿಗಾಗಿ ಬೀದಿ ನಾಟಕ ಹಾಗೂ ಉಳ್ಳಾಲದಿಂದ ಮುಕ್ಕಚ್ಚೇರಿವರೆಗಿನ ಸಮುದ್ರ ತೀರದಲ್ಲಿ ಸಾರ್ವಜನಿಕರಿಂದ ಮಾನವ ಸರಪಳಿ ನಡೆಯಿತು.

ಸಹಾಯಕ ಆಯುಕ್ತ ರವಿಚಂದ್ರ ನಾಯಕ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಸ್ವತ್ಛತಾ ರಾಯಭಾರಿ ಶೀನ ಶೆಟ್ಟಿ, ನಗರಸಭೆ ಆಯುಕ್ತ ಶ್ರೀನಿವಾಸ ಮೂರ್ತಿ, ಮೊಗವೀರ ಮುಖಂಡರಾದ ದಯಾನಂದ, ಮನೋಜ್‌ ಸಾಲ್ಯಾನ್‌,
ವಾಸುದೇವ ರಾವ್‌ ಉಪಸ್ಥಿತರಿದ್ದರು. ಉಳ್ಳಾಲ ಪೊಲೀಸರು, ಕರಾವಳಿ ಕಾವಲು ಪೊಲೀಸ್‌ ಮತ್ತು ಕರಾವಳಿ ನಿಯಂತ್ರಣ
ದಳದ ಸಿಬಂದಿ ಬಂದೋಬಸ್ತ್ಏರ್ಪಡಿಸಿದ್ದರು.

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.