ಬದಿಯಡ್ಕ ಬಂಟರ ಸಮ್ಮಿಲನ : ಬಂಟ ಮಹಿಳೆಯರು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು
Team Udayavani, Apr 8, 2019, 5:36 PM IST
ಬದಿಯಡ್ಕ : ಬದಿಯಡ್ಕ ಪಂಚಾಯತ್ ಬಂಟರ ಸಂಘ ಮತ್ತು ಮಾತೃಸಂಘದ ಆಶ್ರಯದಲ್ಲಿ ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲಾ ಸಭಾಂಗಣದಲ್ಲಿ ಬಂಟರ – ಸಮ್ಮಿಲನ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮವನ್ನು ಮಾತೃ ಸಂಘದ ಅಧ್ಯಕ್ಷೆ ವಿನಯ.ಜೆ. ಪೆರಡಾಲ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಮಾತೃ ಪ್ರಧಾನ ಕುಟುಂಬ ವ್ಯವಸ್ಥೆಯಲ್ಲಿ ಬಂಟ ಮಹಿಳೆಯರಿಗೆ ಪ್ರಮುಖ ಪಾತ್ರವಿದೆ. ಅದನ್ನು ಉಳಿಸಿ, ಬೆಳೆಸುವ ಕರ್ತವ್ಯ ನಮ್ಮದು. ಬಂಟ ಮಹಿಳೆಯರು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಬಂಟರ ಸಂಘದ ಉಪಾಧ್ಯಕ್ಷ ಜಯಶಂಕರ ರೈ ಬೇಳ ಸಭೆಯ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಬಂಟರ ಕೋಶಾಧಿಕಾರಿ ಚಂದ್ರಹಾಸ ರೈ ಪೆರಡಾಲ ಗುತ್ತು, ಕುಂಬಳೆ ಫಿರ್ಕಾ ಬಂಟ್ಸ್ ಸಂಘದ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಳಮಲೆ ಬದಿಯಡ್ಕ ಪಂಚಾಯತ್ ಬಂಟರ ಸಂಘದ ಅಧ್ಯಕ್ಷ ರವೀಂದ್ರನಾಥ ಶೆಟ್ಟಿ ವಳಮಲೆ, ಪ್ರ. ಕಾರ್ಯದರ್ಶಿ ನಿರಂಜನ್ ರೈ ಕಾರ್ಯಕ್ರಮಕ್ಕೆ ಶುಭಕೋರಿದರು. ಮಾತೃ ಸಂಘದ ಕಾರ್ಯದರ್ಶಿ ಹೇಮಲತಾ ರೈ ಸ್ವಾಗತಿಸಿ, ಜತೆ ಕಾರ್ಯದರ್ಶಿ ಯಶೋಧ ರೈ ಧನ್ಯವಾದ ಸಮರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.