ಕುಮಾರಸ್ವಾಮಿ ಯೋಗ್ಯತೆ ಇಲ್ಲದ ಸಿಎಂ: ಈಶ್ವರಪ್ಪ
Team Udayavani, Apr 9, 2019, 3:00 AM IST
ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಮುಗಿಸಿದ್ದಾರೆ. ಜೆಡಿಎಸ್ ಮುಗಿಸಲು ತಯಾರಿ ನಡೆಸಿದ್ದಾರೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಒಬ್ಬ ಅಯೋಗ್ಯ ಮುಖ್ಯಮಂತ್ರಿ ಎಂದು ನಾನು ಹೇಳಿದ್ದೆ. ಅದಕ್ಕೆ ಅವರು ಬೇಜಾರಾಗಿದ್ದಾರೆ. ಆ ಪದವನ್ನು ನಾನು ಹಿಂದೆ ಪಡೆಯುತ್ತೇನೆ. ಆದರೆ, ಕುಮಾರಸ್ವಾಮಿ ಅವರು ಯೋಗ್ಯತೆ ಇಲ್ಲದ ಮುಖ್ಯಮಂತ್ರಿ. ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಎಂಬ ಶಬ್ದ ಅಪವಿತ್ರವಾಗಿದೆ.
ಆ ಮೈತ್ರಿ ಶಬ್ದವನ್ನು ಅವರು ಕೈ ಬಿಡಬೇಕು. ಹೆಲಿಕಾಪ್ಟರ್ ಲಭ್ಯವಾಗದಂತೆ ಬಿಜೆಪಿಯಿಂದ ಕುತಂತ್ರ ನಡೆದಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದ. ಪ್ರಚಾರದ ಬಗ್ಗೆ ಮೊದಲೇ ಎಲ್ಲವನ್ನೂ ಸಿದ್ಧಪಡಿಸಿಕೊಳ್ಳಬೇಕು. ಅದು ಬಿಟ್ಟು ಈ ರೀತಿ ಹೇಳುವುದು ಸರಿಯಲ್ಲ ಎಂದರು.
“ಮಂಡ್ಯದಲ್ಲಿ ನನ್ನ ಮಗನ ಸೋಲಿಸುವ ಮೂಲಕ ನನ್ನನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಲಾಗಿದೆ’ ಎನ್ನುತ್ತಿದ್ದಾರೆ. ಆದರೆ, ಅದು ಸಂಚಲ್ಲ, ರಾಜಕೀಯ. ನಿಖೀಲ್ ಕುಮಾರಸ್ವಾಮಿ ಅವರನ್ನು ಸೋಲಿಸಲೆಂದೇ ಸುಮಲತಾಗೆ ಬಿಜೆಪಿ ಬೆಂಬಲ ಕೊಟ್ಟಿದೆ. ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಂದಾಣಿಕೆಯಿಲ್ಲ.
ಅವರನ್ನು ಇವರು, ಇವರನ್ನು ಅವರು ಸೋಲಿಸಲು ನಿಂತಿದ್ದಾರೆ. ಮಂಡ್ಯ ಚುನಾವಣೆಯ ಬಗ್ಗೆ ಸ್ವತ: ಕುಮಾರಸ್ವಾಮಿ ಹತಾಶರಾಗಿದ್ದಾರೆ. ಮಂಡ್ಯದಲ್ಲಿ ಸೋಲಿನ ಭೀತಿಯಿಂದ ಇಡೀ ಕುಟುಂಬ ಪ್ರಚಾರ ಮಾಡುತ್ತಿದೆ. ಅದೂ ಸಾಲದಂತೆ ಸಿದ್ದರಾಮಯ್ಯ ಅವರನ್ನೂ ಪ್ರಚಾರಕ್ಕೆ ಕರೆದಿದ್ದಾರೆ. ಜತೆಗೆ ಸೋಲಿನ ಭೀತಿಯಿಂದ ರಾಹುಲ್ ಗಾಂಧಿ ಅವರನ್ನು ಕರೆಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.