“ಸಮಾಜದ ಅಭಿವೃದ್ಧಿಯಲ್ಲಿ ಪತ್ರಿಕೋದ್ಯಮದ ಪಾತ್ರ ಮಹತ್ವದ್ದು’
Team Udayavani, Apr 9, 2019, 6:30 AM IST
ಕಾಪು : ಸಮಾಜದ ಅಭಿವೃದ್ಧಿಯಲ್ಲಿ ಪತ್ರಿಕೋದ್ಯಮದ ಪಾತ್ರ ಮಹತ್ವದ್ದಾಗಿದೆ. ಸರಕಾರದ ಯೋಜನೆಗಳು ಜನರಿಗೆ ತಲುಪುವಲ್ಲಿ ಪತ್ರಕರ್ತರ ಶ್ರಮ ಶ್ಲಾಘನೀಯ. ನಿರ್ಬಿàತ ವರದಿಗಾರಿಕೆಯ ಜೊತೆಗೆ ಮಾನವೀಯ ಮೌಲ್ಯಕ್ಕೂ ವಿಶೇಷ ಒತ್ತು ನೀಡುವ ಮೂಲಕ ಅವರ ಬದುಕು ಬೆಳಗಿಸುವಲ್ಲಿ ಪತ್ರಕರ್ತರ ಸಹಕಾರ ಅತ್ಯಗತ್ಯವಾಗಿ ದೊರಕಬೇಕಿದೆ ಎಂದು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್‌ನ ಆಗಮ ವಿದ್ವಾಂಸ ವೇ| ಮೂ| ಕೇಂಜ ಶ್ರೀಧರ ತಂತ್ರಿ ಹೇಳಿದರು.
ಎ. 7ರಂದು ಕಾಪು ಮಯೂರ ಹೊಟೇಲ್‌ನಲ್ಲಿ ಜರಗಿದ ಕಾಪು ಪ್ರಸ್ ಕ್ಲಬ್‌ನ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಯಿರಾಧಾ ಗ್ರೂಫ್ಸ್ನ ಆಡಳಿತ ನಿರ್ದೇಶಕ ಕೆ. ಮನೋಹರ್ ಶೆಟ್ಟಿ ಮಾತನಾಡಿ, ಪತ್ರಕರ್ತರು ಸಮಾಜವನ್ನು ರಕ್ಷಿಸುವ ಸೆ„ನಿಕರಿದ್ದಂತೆ. ಕಾಪುವಿನ ಮೂಲಭೂತ ಅಗತ್ಯತೆಗಳ ಬಗ್ಗೆ ವಿಶೇಷ ಒತ್ತು ನೀಡಿ ವರದಿಗಾರಿಕೆ ಮಾಡುವ ಪ್ರಯತ್ನ ಪತ್ರಕರ್ತರಿಂದ ನಡೆಯಬೇಕಿದೆ. ಕಾಪು ತಾಲೂಕಿನ ನೀರು, ಡ್ರೈನೇಜ್, ತ್ಯಾಜ್ಯ ನಿರ್ವಹಣೆಗೆ ಬೇಕಾದ ಸೌಲಭ್ಯಗಳನ್ನೂ ಕಲ್ಪಿಸುವಲ್ಲಿ ಪತ್ರಕರ್ತರೂ ವಿಶೇಷ ಒತ್ತು ನೀಡುವಂತೆ ಕರೆ ನೀಡಿದರು.
ಉಡುಪಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಬಿಕ್ಕೋ ಕಂಪೆನಿಯ ಆಡಳಿತ ನಿರ್ದೇಶಕ ಶ್ರೀಧರ ಶೇಣವ, ಬನ್ನಂಜೆ ಟೆ„ಗರ್ ಲಯನ್ಸ್ ಅಧ್ಯಕ್ಷೆ ವಿದ್ಯಾಲತಾ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕೇಂದೀÅಯು ಸಾಗರ ಮೀನುಗಾರಿಕಾ ಸಂಶೋಧನಾ ಕೇಂದ್ರದ ಮೂಲಕ ಮಂಗಳೂರು ವಿ.ವಿ.ಗೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಫಿಲಾಸಫಿ ಆಫ್ ಡಾಕ್ಟರೇಟ್ ಪದವಿ ಗಳಿಸಿರುವ ಡಾ| ಸುಪ್ರಭಾ ಹರೀಶ್ ಅವರನ್ನು ಸಮ್ಮಾನಿಸಲಾಯಿತು.
ಕಾಪು ಪ್ರಸ್ ಕ್ಲಬ್‌ನ ಸ್ಥಾಪಕಾಧ್ಯಕ್ಷರು ಸಂತೋಷ್ ನಾಯ್ಕ, ಕ್ರೀಡಾ ಕಾರ್ಯದರ್ಶಿ ಹೇಮನಾಥ ಪಡುಬಿದ್ರಿ ಉಪಸ್ಥಿತರಿದ್ದರು.ಪ್ರಸ್ ಕ್ಲಬ್‌ನ ಅಧ್ಯಕ್ಷ ಪ್ರಕಾಶ್ ಸುವರ್ಣ ಕಟಪಾಡಿ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ಕರುಣಾಕರ ನಾಯಕ್ ವರದಿ ವಾಚಿಸಿದರು. ಜಿಲ್ಲಾ ಸಮಿತಿಯ ಸದಸ್ಯ ಪುಂಡಲೀಕ ಮರಾಠೆ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.