ಬಿಜೆಪಿ ಪರ ಮತ ಯಾಚನೆ, ಖರ್ಗೆ ವಿರುದ್ಧ ಅಲ್ಲ
Team Udayavani, Apr 9, 2019, 3:00 AM IST
ಬೆಂಗಳೂರು: “ಕಲಬುರಗಿ ಕ್ಷೇತ್ರದಲ್ಲಿ ನಾನು ಬಿಜೆಪಿ ಪರ ಮತ ಯಾಚಿಸುತ್ತೇನೆಯೇ ಹೊರತು, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಅಲ್ಲ’ ಎಂದು ಇತ್ತೀಚೆಗಷ್ಟೇ ಬಿಜೆಪಿ ಸೇರಿದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ತಿಳಿಸಿದರು.
ಕಲಬುರಗಿಯಲ್ಲಿ ಇತ್ತೀಚೆಗೆ ಬಿಜೆಪಿ ಸೇರಿದ ರತ್ನಪ್ರಭಾ ಅವರು ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಪ್ರತಿಕ್ರಿಯಿಸಿದ ಅವರು, ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಪ್ರಚಾರ ನಡೆಸುತ್ತೇನೆ.
ಹಾಗೆಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಪ್ರಚಾರ ಮಾಡುವುದಿಲ್ಲ. ಯಾವುದೇ ಕ್ಷೇತ್ರದಲ್ಲೂ ಅಭ್ಯರ್ಥಿಗಳ ವಿರುದ್ಧ ಪ್ರಚಾರ ನಡೆಸದೆ ಬಿಜೆಪಿ ಪರ ಪ್ರಚಾರ ನಡೆಸುತ್ತೇನೆ ಎಂದು ಹೇಳಿದರು.
ಮತದಾನ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸುತ್ತೇನೆ. ಕಲಬುರಗಿ ಜತೆಗೆ ರಾಯಚೂರು, ಕೊಪ್ಪಳ ಹಾಗೂ ಬೀದರ್ ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಚಿಂತಿಸಿದ್ದೇನೆ. ಬಿಜೆಪಿ ಕೊಡುಗೆ, ಧನಾತ್ಮಕ ಅಂಶಗಳನ್ನು ತಿಳಿಸಿ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು