ಜೋಶಿಗೆ ಸಂಘ-ಸಂಸ್ಥೆ ಪದಾಧಿಕಾರಿಗಳ ಬೆಂಬಲ
Team Udayavani, Apr 9, 2019, 10:22 AM IST
ಹುಬ್ಬಳ್ಳಿ: ವಿವಿಧ ಸಂಘ-ಸಂಸ್ಥೆ ಪದಾಧಿಕಾರಿಗಳು ಮಯೂರಿ ಎಸ್ಟೇಟ್‌ನಲ್ಲಿರುವ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ನಿವಾಸಕ್ಕೆ ತೆರಳಿ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಗ್ರಾಮೀಣ ವೈದ್ಯರ ಸಂಘ, ನವನಗರ ಗೋಂದಳಿ ಸಮಾಜ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆ ಪದಾಧಿಕಾರಿಗಳು ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಉಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಶಂಕರ ಸುಗತೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ದೇಶದ ಶ್ರೇಯಸ್ಸಿಗಾಗಿ ದುಡಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು.
ಗ್ರಾಮೀಣ ಭಾಗದ ವೈದ್ಯರ ಸಂಘದ ಅಧ್ಯಕ್ಷ ಡಾ| ಮಹೇಶ ಕಾಡವಾಡ ಮಾತನಾಡಿ, ಸಂಸದರು ಗ್ರಾಮೀಣ ಭಾಗದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಇಂತಹ ಕೆಲಸಗಾರರನ್ನು ಕಳೆದುಕೊಳ್ಳುವುದು ಕ್ಷೇತ್ರದ ಜನತೆಗೆ ಇಷ್ಟವಿಲ್ಲ. ಹೀಗಾಗಿ
ಅವರಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದರು.
ಅಜ್ಜಪ್ಪ ಹೊರಕೇರಿ, ಮಂಜುನಾಥ ಹಗೆದಾರ, ಓಂ ಕಿರಣ, ಸೂರಜ್ ಪ್ರಸನ್ನ ಸಿಂಹ, ಡಾ| ರಾಜು ಧಾಣಿ ಡಾ| ಮಡಿವಾಳರ್ ಗುರುನಾಥ, ಡಾ|ಕಿರಣ ಬೆಲ್ಲದ, ಡಾ| ಕುಂಬಾರ, ಎಂ.ಆರ್. ಸುರೇಶ ಕುಂಬಾರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಬೈಕ್ – ಕಾರು ಅಪಘಾತ; ಬೈಕ್ ಸಹಸವಾರ ಸಾವು
ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ
Dharwad: ಔಡಲಹಣ್ಣು ತಿಂದು ಏಳು ಮಕ್ಕಳು ಅಸ್ವಸ್ಥ: ಜಿಲ್ಲಾಸ್ಪತ್ರೆಗೆ ದಾಖಲು
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ
Hubli: ಅಮಿತ್ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.