ನಾಮಧಾರ್‌ಗೆ ಸೋಲಿನ ಭಯ: ಮೋದಿ


Team Udayavani, Apr 10, 2019, 3:00 AM IST

namadhar

ಮೈಸೂರು: ಕಾಂಗ್ರೆಸ್‌ ಅಧ್ಯಕ್ಷ ನಾಮ್‌ಧಾರ್‌ರ ಹಿಂದಿನ ಕ್ಷೇತ್ರದಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ದಕ್ಷಿಣಕ್ಕೆ ಓಡಿ ಬಂದಿದ್ದಾರೆ. ಪಕ್ಷದ ಅಧ್ಯಕ್ಷನ ಸ್ಥಿತಿಯೇ ಹೀಗಾದರೆ, ಇನ್ನು ಪಕ್ಷದ ಪರಿಸ್ಥಿತಿ ಹೇಗಿರಬಹುದು ಎಂದು ಪ್ರಧಾನಿ ನರೇಂದ್ರಮೋದಿ, ರಾಹುಲ್‌ ಗಾಂಧಿ ಹೆಸರೇಳದೆ ಲೇವಡಿ ಮಾಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಲೋಕಸಭಾ ಚುನಾವಣೆ ಪ್ರಚಾರದ ಬೃಹತ್‌ ಸಭೆಯನ್ನು ಉದ್ದೇಶಿಸಿ ಮಾತನಾಡಿದ, ಅವರು ತಮ್ಮ 23 ನಿಮಿಷಗಳ ಭಾಷಣದಲ್ಲಿ ಎಲ್ಲಿಯೂ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೆಸರು ಪ್ರಸ್ತಾಪಿಸದೆ ನಾಮ್‌ಧಾರ್‌ ಎಂದೇ ಪರೋಕ್ಷವಾಗಿ ತಿವಿದರು.

ನಮ್ಮ ಸೇನೆಯ ಪರಾಕ್ರಮದ ಮೇಲೆ ಭರವಸೆ ಇದೆಯಾ ಎಂದು ಜನರನ್ನು ಪ್ರಶ್ನಿಸಿದ ಅವರು, ಕಾಂಗ್ರೆಸ್‌ ಮತ್ತು ಅದರ ಮಿತ್ರ ಪಕ್ಷಗಳಿಗೆ ಸೇನೆಯ ಮೇಲೂ ಸಂಶಯವಿದೆ. ಮತಬ್ಯಾಂಕ್‌ ಗಾಗಿ ಅವರು ಎಲ್ಲದರಲ್ಲೂ ತುಷ್ಠಿàಕರಣದ ರಾಜಕೀಯ ಮಾಡುತ್ತಿದ್ದಾರೆ. ಶಬರಿ ಮಲೆ ವಿಚಾರದಲ್ಲಿ ದೇಶದ ಜನತೆಯ ಭಾವನೆಯೇ ಬಿಜೆಪಿಗೂ ಇದೆ.

ಹೀಗಾಗಿ ಶಬರಿಮಲೆಯ ಪೂಜಾ ಪದ್ಧತಿ ಮುಂದುವರಿಕೆಗೆ ಬಿಜೆಪಿ ಬದ್ಧವಾಗಿದೆ. ಆದರೆ, ಕೇರಳದ ಕಮ್ಯುನಿಸ್ಟ್‌ ಸರ್ಕಾರ ಶಬರಿಮಲೆ ಭಕ್ತರ ಭಾವನೆಗಳ ಜತೆಗೆ ಆಟವಾಡುತ್ತಾ ಭಕ್ತರ ಮೇಲೆ ಲಾಠಿ ಪ್ರಹಾರ ನಡೆಸಿ, ಜೈಲಿಗೂ ಹಾಕಿತು. ಕಮ್ಯುನಿಸ್ಟರ ಈ ಕ್ರಮಕ್ಕೆ ಕಾಂಗ್ರೆಸ್‌ ಕೂಡ ಸಹಮತ ನೀಡಿತ್ತು. ನಮ್ಮ ಸರ್ಕಾರ ಶಬರಿಮಲೆಗೆ ಸಂವಿಧಾನ ಬದ್ಧ ರಕ್ಷಣೆ ನೀಡಲಿದೆ ಎಂದರು.

ದೆಹಲಿಯ ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಅರ್ಧ ಪರ್ಸೆಂಟ್‌ ಅಲ್ಲಿ, ಅರ್ಧ ಪರ್ಸೆಂಟ್‌ ಇಲ್ಲಿ ನೋಡುವವರು ಮೈಸೂರಿನ ಈ ಮೈದಾನವನ್ನೊಮ್ಮೆ ನೋಡಲಿ ಎಂದು ರಾಹುಲ್‌ ಗಾಂಧಿಯನ್ನು ಲೇವಡಿ ಮಾಡಿದರು.

ಇಂದು ಲಾತೂರ್‌ನಿಂದ ಆರಂಭಿಸಿ ಕರ್ನಾಟಕದ ಚಿತ್ರದುರ್ಗ, ಮೈಸೂರಿಗೆ ಬಂದಿದ್ದೇನೆ. ಎಲ್ಲೆಲ್ಲೂ ಜನರ ಉತ್ಸಾಹ ಅಭೂತಪೂರ್ವವಾಗಿ ಕಂಡುಬರುತ್ತಿದೆ. ನಿಮ್ಮ ಸೇವೆ ಮಾಡುವ ಅವಕಾಶವನ್ನು ಮತ್ತೂಮ್ಮೆ ನಮಗೆ ಕೊಡಿ ಎಂದು ಮನವಿ ಮಾಡಿದರು.

ಮೈಸೂರು ವಿಕಾಸ: ಮೈಸೂರು ಭಾರತದ ಸಮೃದ್ಧ ಸಂಸ್ಕೃತಿಯ ಪ್ರತೀಕ. ನಮ್ಮ ಸರ್ಕಾರ ಮೈಸೂರು -ಬೆಂಗಳೂರು ಹೆದ್ದಾರಿ ಅಭಿವೃದ್ಧಿಗೆ ಚಾಲನೆ ನೀಡಿದೆ. ಈ ಕಾಮಗಾರಿ ಪೂರ್ಣಗೊಂಡರೆ ಮೈಸೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಉತ್ತಮಗೊಂಡು ಈ ಭಾಗದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ಉಡಾನ್‌ ಯೋಜನೆಯಡಿ ಮೈಸೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭಿಸಿದ್ದೇವೆ. ಮೈಸೂರಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಿಸಿದ್ದೇವೆ. ಚೌಕಿದಾರ್‌ನ ಸರ್ಕಾರದ ಈ ಕೆಲಸಕ್ಕೆ ನಿಮ್ಮ ಸಹಮತವಿದೆ ಎಂದು ಭಾವಿಸಿದ್ದೇನೆ ಎಂದು ಹೇಳಿದರು.

ಸಿಂಹ, ಪ್ರಸಾದ್‌ ಹೆಸರೇಳಲಿಲ್ಲ: ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲ ನೀಡಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಹೆಸರು ಪ್ರಸ್ತಾಪಿಸಿದ ಮೋದಿ ಅವರು, ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಹಾಗೂ ಚಾಮರಾಜ ನಗರ ಕ್ಷೇತ್ರದ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್‌ ಹೆಸರೇಳದೆ ನಮ್ಮ ಉಮೇದುವಾರರು ಎಂದಷ್ಟೇ ಪ್ರಸ್ತಾಪಿಸಿದ್ದು ಚರ್ಚೆಗೆ ಗ್ರಾಸವಾಗಿದೆ.

ಅನುವಾದ ಬೇಡ: ಮೋದಿಯವರು ಭಾಷಣಕ್ಕೆ ನಿಂತಾಗ ಅವರ ಭಾಷಣವನ್ನು ಕನ್ನಡಕ್ಕೆ ಅನುವಾದಿಸಲು ರಾಜ್ಯ ಬಿಜೆಪಿ ವಕ್ತಾರ ಗೋ.ಮಧುಸೂದನ್‌ ಮೈಕ್‌ ಹಿಡಿದು ಪಕ್ಕಕ್ಕೆ ಬಂದು ನಿಂತರು. ಆಗ ಮೋದಿ, ನನ್ನ ಹಿಂದಿ ಭಾಷಣ ನಿಮಗೆ ಅರ್ಥ ವಾಗುತ್ತದೆಯೇ? ಅನುವಾದ ಬೇಕೆ? ಎಂದು ಪ್ರಶ್ನಿಸಿದರು. ಸಭಿಕರು ಅನುವಾದ ಬೇಡ ಎಂದಿದ್ದರಿಂದ ಮಧುಸೂದನ್‌ ವಾಪಸ್‌ ಹೋದರು.

ಕನ್ನಡದಲ್ಲಿ ಭಾಷಣ ಆರಂಭ: ಸಂಜೆ 5.13ಕ್ಕೆ ವೇದಿಕೆಗೆ ಆಗಮಿಸಿದ ಮೋದಿ ಅವರು 5.17ಕ್ಕೆ ಭಾಷಣ ಆರಂಭಿಸಿದರು. ಕನ್ನಡದಲ್ಲಿ ಭಾಷಣ ಆರಂಭಿಸಿ, ಮೈಸೂರು-ಚಾಮರಾಜ ನಗರ-ಮಂಡ್ಯ-ಹಾಸನ ಜನತೆಗೆ ನಿಮ್ಮ ಚೌಕಿದಾರ್‌ ನರೇಂದ್ರಮೋದಿ ಮಾಡುವ ನಮಸ್ಕಾರಗಳು. ಚಾಮುಂಡೇಶ್ವರಿ ದೇವಿಯ ಈ ನೆಲದಲ್ಲಿ ನಿಂತು ಸರ್‌ ಎಂ.ವಿಶ್ವೇಶ್ವರಯ್ಯರಂತಹ ನಾಯಕ ಸೇರಿದಂತೆ ಎಲ್ಲರಿಗೆ ನಮಿಸುವೆ. 21ನೇ ಶತಮಾನದಲ್ಲಿ ಭಾರತವನ್ನು ಸದೃಢಗೊಳಿಸಲು ಈ ಚೌಕಿದಾರ್‌ನಿಗೆ ನಿಮ್ಮ ಸಹಕಾರವಿರಲಿ ಎಂದು ಕೋರಿದರು.

ಸುಮಲತಾ ಹೆಸರು ಪ್ರಸ್ತಾಪ: ತಮ್ಮ ಭಾಷಣದಲ್ಲಿ ಸುಮಲತಾ ಅವರ ಹೆಸರು ಪ್ರಸ್ತಾಪಿಸಿದ ಮೋದಿ, ಅಂಬರೀಶ್‌ ಉತ್ತಮ ನಾಯಕರಾಗಿದ್ದರು. ಅಂಬರೀಶ್‌ ಮತ್ತು ಸುಮಲತಾ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಸೇವೆ ಮಾಡಿದ್ದಾರೆ. ಹೀಗಾಗಿ ಸುಮಲತಾ ಅವರನ್ನು ಆಶೀರ್ವದಿಸುತ್ತೀರಿ ಎನ್ನುವ ವಿಶ್ವಾಸವಿದೆ ಎಂದರು.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.