ಅಂಬಿ ಕುಟುಂಬದ ವಿರುದ್ಧ ಸಂಚು: ಸುಮಲತಾ ಆರೋಪ
Team Udayavani, Apr 10, 2019, 3:00 AM IST
ಮಂಡ್ಯ: ಹೈವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಮಾತಿನಬ್ಬರ ಮುಂದುವರಿದಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜೆಡಿಎಸ್ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದು, “ಜೆಡಿಎಸ್‌ನವರು ಸಾಮಾಜಿಕ ಜಾಲತಾಣದ ಮೂಲಕ ನಮ್ಮ ಕುಟುಂಬದ ವಿರುದ್ಧ ದಾಳಿ ನಡೆಸುವುದಕ್ಕೆ ಒಳಸಂಚು ನಡೆಸಿದ್ದಾರೆ’ ಎಂದು ದೂರಿದ್ದಾರೆ.
ಆದರೆ ಇದಕ್ಕೆ ತಿರುಗೇಟು ನೀಡಿರುವ ಸಚಿವ ಸಿ.ಎಸ್.ಪುಟ್ಟರಾಜು, “ಅಂಬರೀಶ್ ಕುಟುಂಬದ ವಿರುದ್ಧ ನೌಕರರ ಮೂಲಕ ಕೆಟ್ಟದ್ದಾಗಿ ಹೇಳಿಸುವ ದುರ್ಗತಿ ನಮಗೆ ಬಂದಿಲ್ಲ’ ಎಂದು ಹೇಳಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ. ಹೊಸೂರು ಗ್ರಾಮದಲ್ಲಿ ಸುಮಲತಾ ಸುದ್ದಿಗಾರರೊಂದಿಗೆ ಮಾತನಾಡಿ, “ಅಂಬಿ ಕುಟುಂಬದ ಆಪ್ತರಿಗೆ ಹಣ, ವಿದೇಶ ಪ್ರವಾಸ, ನಿವೇಶನದ ಆಸೆ ತೋರಿಸಿ ಅಂಬರೀಶ್ ಕುಟುಂಬದ ವಿರುದ್ಧ ದಾಳಿ ನಡೆಸುವ ತಂತ್ರಗಾರಿಕೆ ನಡೆಸುತ್ತಿದ್ದಾರೆ’ ಎಂದು ಹೇಳಿದರು.
ಸುಳ್ಳು ಹೇಳುವುದನ್ನು ಕಡಿಮೆ ಮಾಡಿ: ಈ ನಡುವೆ ಸುಮಲತಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವ ಪುಟ್ಟರಾಜು, ಸುಮಲತಾ ಸುಳ್ಳು ಹೇಳುವುದನ್ನು ಕಡಿಮೆ ಮಾಡಿ ಜನರ ಮಧ್ಯೆ ಹೋಗಲಿ. ಐಟಿ ರೇಡ್ ಆಗುವುದು ಅವರಿಗೆ ಗೊತ್ತಾಗುತ್ತೆ,
ಮುಂದೆ ಇಂತಹ ಸನ್ನಿವೇಶಗಳು ನಡೆಯುತ್ತವೆ ಎನ್ನುವುದೂ ಗೊತ್ತಾಗುತ್ತದೆ. ಅವರೇನು ಅಂಜನ ಇಟ್ಟುಕೊಂಡಿದ್ದಾರಾ? ಇವೆಲ್ಲವನ್ನೂ ಬಿಟ್ಟು ನೇರವಾಗಿ ಚುನಾವಣೆ ಮಾಡಲಿ, ಮಂಡ್ಯ ಜನ ಮುಠ್ಠಾಳರೇನಲ್ಲ ಎಂದು ತಿರುಗೇಟು ನೀಡಿದ್ದಾರೆ.
ಟೀಕೆ, ಆರೋಪಗಳನ್ನೇ ಸುಮಲತಾ ಜೆಡಿಎಸ್ ವಿರುದ್ಧ ಅಸ್ತ್ರವಾಗಿ ಬಳಸುತ್ತಿದ್ದರು. ಪ್ರಚಾರದ ಸಮಯದಲ್ಲಿ ಒಮ್ಮೆಯೂ ಅಭಿವೃದ್ಧಿ ಬಗ್ಗೆ ಮಾತನಾಡಿರಲಿಲ್ಲ. ಅವರಿಗೆ ಅಭಿವೃದ್ಧಿ ಬೇಕಿಲ್ಲ. ಅಧಿಕಾರ ಬೇಕಷ್ಟೇ.
-ನಿಖಿಲ್ ಕುಮಾರಸ್ವಾಮಿ, ಮೈತ್ರಿ ಅಭ್ಯರ್ಥಿ
ನಿಖಿಲ್ ಅವರಿಗೆ ಇನ್ನೂ ವಯಸ್ಸು ಚಿಕ್ಕದು. ಸಾಧಕ ನಟರ ಬಗ್ಗೆ ಗೌರವವಿಲ್ಲದೆ ಅಹಂಕಾರದ ಮಾತುಗಳನ್ನಾಡುವುದು ಅವರಿಗೆ ಶೋಭೆ ತರುವುದಿಲ್ಲ.
-ಸುಮಲತಾ, ಪಕ್ಷೇತರ ಅಭ್ಯರ್ಥಿ
ರಾಜ್ಯದಲ್ಲಿ ಸಾಕಷ್ಟು ರೈತರಿದ್ದಾರೆ. ಇಲ್ಲಿ ಮಾತ್ರ ಅಲ್ಲ, ಉತ್ತರ ಕರ್ನಾಟಕದಲ್ಲೂ ಇದ್ದಾರೆ. ಜನರಿಗಾಗಿ, ರೈತರಿಗಾಗಿ ನಾನೇನು ಮಾಡಿದ್ದೇನೆ ಎನ್ನುವುದನ್ನು ಕೊಪ್ಪಳ ಜಿಲ್ಲೆಯ ಜನತೆಯನ್ನು ಹೋಗಿ ಕೇಳಿದರೆ ಗೊತ್ತಾಗುತ್ತದೆ.
-ಯಶ್, ನಟ
ಜೆಡಿಎಸ್‌ನವರಂತೆ ಕುತಂತ್ರ ರಾಜಕಾರಣವನ್ನು ನಾವು ಮಾಡುವುದಿಲ್ಲ. ಅವರು ಎಷ್ಟೇ ಕೆಳಮಟ್ಟಕ್ಕಿಳಿದು ರಾಜಕಾರಣ ಮಾಡಿದರೂ ಸರಿ. ಒಳ್ಳೆಯ ರಾಜಕಾರಣ ಮಾಡಬೇಕೆನ್ನುವುದು ನನ್ನ ತಾಯಿ ಆಸೆ. ಅವರ ಆಶಯದಂತೆ ನಡೆಯುವುದು ನಮ್ಮ ಕೆಲಸ.
-ಅಭಿಷೇಕ್, ಅಂಬರೀಶ್ ಪುತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.